ಬಡತನದಲ್ಲೇ ಬೆಳೆದ ಬಂಗಾರಪೇಟೆಯ ಗಾಯತ್ರಿ ಕರ್ನಾಟಕ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆ! ಕೋಲಾರಕ್ಕೆ ಮತ್ತೊಂದು ಚಿನ್ನದ ಗರಿ
ಗಾಯತ್ರಿರವರು ಬಂಗಾರಪೇಟೆಯ ನಾರಾಯಣಸ್ವಾಮಿ ವೆಂಕಟಲಕ್ಷ್ಮಿರವರ ಒಬ್ಬಳೇ ಮಗಳಾಗಿದ್ದು ತೀರಾ ಬಡತನದಲ್ಲಿ ಬೆಳೆದವರು. ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದ ಗಾಯತ್ರಿ ಅವರಿಗೆ ಶ್ರಮಕ್ಕೆ ತಕ್ಕ ಫಲ ಸಿಕ್ಕಂತಾಗಿದೆ.

ಕೋಲಾರ: ಕರ್ನಾಟಕ ಹೈಕೋರ್ಟ್ (Karnataka High court) ಅಧೀನದಲ್ಲಿ ಬರುವ ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ (Bangarpet) ಎನ್. ಗಾಯತ್ರಿ ಅವರು ಆಯ್ಕೆಯಾಗುವ ಮೂಲಕ ಚಿನ್ನದ ನಾಡು ಕೋಲಾರಕ್ಕೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿ ಅವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಪ್ರಯತ್ನ ಹಾಗೂ ದೃಢ ಸಂಕಲ್ಪದ ಫಲವಾಗಿ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ ನ್ಯಾಯಾಧೀಶರಾಗಿ (Civil Judge) ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರ ಹೆಸರು ಆಯ್ಕೆ ಪಟ್ಟಿಯಲ್ಲಿ ಪ್ರಕಟಗೊಂಡಿದೆ. ಕರ್ನಾಟಕ ನ್ಯಾಯಾಂಗ ಸೇವಾ ಪರೀಕ್ಷೆ (Karnataka judicial service exam) ಬರೆದು ಈಗ ಸಿವಿಲ್ ಕೋರ್ಟ್ ನ್ಯಾಯಾಧೀಶೆ ಆಗಿದ್ದಾರೆ. ಆ ಮೂಲಕ ಚಿನ್ನದ ನಾಡಿಗೆ ಮತ್ತೊಂದು ಕೀರ್ತಿ ಬಂದಿದೆ.
ಅತ್ಯಂತ ತಳ ಸಮುದಾಯದ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಗಾಯತ್ರಿ ಅವರು ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಧ್ಯಾಭ್ಯಾಸ ಆರಂಭಿಸಿ ಬಾಲಕಿಯರ ಪ್ರೌಢಶಾಲೆಯಲ್ಲಿ ಓದಿ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದುಕೊಂಡಿದ್ದರು. ಕೆಜಿಎಫ್‌ನ ಕೆಂಗಲ್ ಹನುಮಂತಯ್ಯ ಕಾನೂನು ಕಾಲೇಜಿನಲ್ಲಿ ಲಾ ಪದವಿಯಲ್ಲಿ ಕರ್ನಾಟಕಕ್ಕೆ ನಾಲ್ಕನೆ ಶ್ರೇಣಿಯನ್ನು ಪಡೆದುಕೊಂಡು ಉತ್ತೀರ್ಣರಾಗುವ ಮೂಲಕ
ಗಾಯತ್ರಿರವರು ಬಂಗಾರಪೇಟೆಯ ನಾರಾಯಣಸ್ವಾಮಿ ವೆಂಕಟಲಕ್ಷ್ಮಿರವರ ಒಬ್ಬಳೇ ಮಗಳಾಗಿದ್ದು ತೀರಾ ಬಡತನದಲ್ಲಿ ಬೆಳೆದವರು. ಗಾಯತ್ರಿ ಮೊದಲಿನಿಂದಲೂ ಸಾಮಾಜಿಕ ಕಾಳಜಿ ಹೊಂದಿದ್ದಾರೆ. ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದ ಗಾಯತ್ರಿ ಅವರಿಗೆ ಶ್ರಮಕ್ಕೆ ತಕ್ಕ ಫಲ ಸಿಕ್ಕಂತಾಗಿದೆ. ಇದೀಗ ಗಾಯತ್ರಿ ಅವರು ಈ ಚಿಕ್ಕವಯಸ್ಸಿಗೆ ಮಾಡಿರುವ ಸಾಧನೆ, ಕೋಲಾರ ಜಿಲ್ಲೆಯಾದ್ಯಂತ ಪ್ರಶಂಸೆಗೆ ಪಾತ್ರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಭೂತಪೂರ್ವ ಮೆಚ್ಚುಗೆ ವ್ಯಕ್ತವಾಗಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 3:33 pm, Tue, 17 January 23




