ಹಾಲು ಉತ್ಪಾದಕರಿಗೆ ಬಿಗ್ ಶಾಕ್; ಕೋಚಿಮುಲ್‌ನಿಂದ ಪ್ರತಿ ಲೀಟರ್​ಗೆ 2 ರೂಪಾಯಿ ಕಡಿತ

ಹಾಲಿನ ಶೇಖರಣೆ ಹೆಚ್ಚಿಗೆ ಹಾಗೂ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಮುಂದಾಗಿದ್ದು, ಈ ಹಿನ್ನಲೆ ಕೋಚಿಮುಲ್‌ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್​ ಹಾಲಿಗೆ 2 ರೂಪಾಯಿ ಕಡಿತಗೊಳಿಸಿದೆ. ಕೋಚಿಮುಲ್ ನಿರ್ಧಾರದಿಂದ ರೈತರಿಗೆ ಗಾಯದ ಮೇಲೆ ಬರೆ ಹಾಕಿದಂತಾಗಿದೆ.

ಹಾಲು ಉತ್ಪಾದಕರಿಗೆ ಬಿಗ್ ಶಾಕ್; ಕೋಚಿಮುಲ್‌ನಿಂದ ಪ್ರತಿ ಲೀಟರ್​ಗೆ 2 ರೂಪಾಯಿ ಕಡಿತ
ಕೋಚಿಮುಲ್‌ನಿಂದ ಪ್ರತಿ ಲೀಟರ್​ಗೆ 2 ರೂಪಾಯಿ ಕಡಿತ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 04, 2024 | 9:31 PM

ಕೋಲಾರ, ಜು.04: ಮೊದಲಿನಿಂದಲೂ ರೈತರಿಗೆ ತೊಂದರೆ ತಪ್ಪಿದ್ದಲ್ಲ. ಒಮ್ಮೆ ಮಳೆ ಕೈಕೊಟ್ಟರೆ, ಇನ್ನೊಮ್ಮೆ ಬೆಲೆ ಕೈಕೊಡುತ್ತದೆ. ಅದರಂತೆ ಇದೀಗ ಹಾಲು ಉತ್ಪಾದಕರಿಗೆ ಕೋಚಿಮುಲ್​(Kochimul) ಬಿಗ್ ಶಾಕ್ ನೀಡಿದೆ. ಹೌದು, ಹಾಲು ಉತ್ಪಾದಕರಿಗೆ ದಿಢೀರನೆ 2 ರೂಪಾಯಿ ಕಡಿತ ಮಾಡಿ ಕೋಚಿಮುಲ್ ಆಡಳಿತ ಮಂಡಳಿ ಆದೇಶಿಸಿದೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರುಪಾಯಿ ಕಡಿತ ಮಾಡಿದ್ದು, ನಾಳೆ(ಜು.05) ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಸೂಚಿಸಿದೆ.

ನಾಳೆಯಿಂದ ಪರಿಷ್ಕೃತ ದರ

ಈ ಮೊದಲು ಹಾಲು ಉತ್ಪಾದಕರಿಗೆ 33.40 ರೂ ನೀಡಲಾಗುತ್ತಿತ್ತು, ಆದರೆ, ನಾಳೆಯಿಂದ ಹಾಲು ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್​ಗೆ 31.40 ರೂ ನೀಡಲು ಆದೇಶಿಸಿದೆ.  ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್​ಗೆ ಬರೋಬ್ಬರಿ 9.65 ಲಕ್ಷ ಲೀಟರ್ ಹಾಲು ಸಂಗ್ರಹವಾಗಿತ್ತು. ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್​ಗೆ 12.37 ಲಕ್ಷ ಲೀಟರ್ ಹಾಲು ಸಂಗ್ರಹ ಹಿನ್ನೆಲೆ, ಕೋಲಾರ – ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ 2.50 ಲಕ್ಷ ಲೀಟರ್​ನಷ್ಟು ಹಾಲು ಹೆಚ್ಚಳವಾಗಿತ್ತು. ಆದರೆ, ಹಾಲಿನ ಶೇಖರಣೆ ಹೆಚ್ಚಿಗೆ ಹಾಗೂ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದ್ದು, ಕೋಚಿಮುಲ್ ನಿರ್ಧಾರದಿಂದ ರೈತರಿಗೆ ಗಾಯದ ಮೇಲೆ ಬರೆ ಹಾಕಿದಂತಾಗಿದೆ. ಈಗಾಗಲೇ ಲೀಟರ್‌ಗೆ 4 ರೂ ಹೆಚ್ಚಳ ಮಾಡಿ ಗ್ರಾಹಕರ ಜೇಬಿಗೂ ಕತ್ತರಿ ಹಾಕಲಾಗಿತ್ತು.

ಇದನ್ನೂ ಓದಿ:ಕೋಚಿಮುಲ್ ನೇಮಕಾತಿ ಹಗರಣಕ್ಕೆ ಮಂಗಳೂರು ವಿವಿ ಲಿಂಕ್! ಪರೀಕ್ಷಾಂಗ ಕುಲಸಚಿವರ ವಿಚಾರಣೆ

ಇನ್ನು ಇತ್ತೀಚೆಗಷ್ಟೇ ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಕೈಗೊಂಡಿತ್ತು. ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್​​ಗೆ 50 ಎಂಎಲ್​​ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಈ ಹಿನ್ನಲೆ ಸದ್ಯ ಇರುವ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದರ ಬೆನ್ನಲ್ಲೇ ಕೋಚಿಮುಲ್ ಹಾಲು ಉತ್ಪಾದಕರಿಗೆ ಬಿಗ್ ಶಾಕ್ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು