AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಬ್ರಿಡ್ಜ್‌ನಿಂದ ಕೆಳಗುರುಳಿದ ಕಾರು; ನಾಲ್ವರು ದುರ್ಮರಣ

Bengaluru-Chennai Expressway: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸ್ಪೀಡ್ ಆಗಿ ಹೋಗುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಬ್ರಿಡ್ಜ್​​ ಮೇಲಿಂದ ಕೆಳಗೆ ಬಿದ್ದಿದೆ. ಪರಿಣಾಮ ಈ ದುರ್ಘಟನೆಯಲ್ಲಿ ನಾಲ್ವರು ಯುವಕರು ದುರಂತ ಸಾವು ಕಂಡಿದ್ದಾರೆ.

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಬ್ರಿಡ್ಜ್‌ನಿಂದ ಕೆಳಗುರುಳಿದ ಕಾರು; ನಾಲ್ವರು ದುರ್ಮರಣ
ಬ್ರಿಡ್ಜ್​ ಮೇಲಿಂದ ಬಿದ್ದ ಕಾರು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 24, 2025 | 3:02 PM

Share

ಕೋಲಾರ, (ನವೆಂಬರ್ 24): ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ (Bengaluru-Chennai Expressway) ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು (Maluru) ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ. ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಳಿಕ ಬ್ರಿಡ್ಜ್ ನಿಂದ ಕೆಳಗೆ ಬಿದ್ದಿದೆ. ಈ ದುರ್ಘಟನೆಯಲ್ಲಿಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತಟ್ಟಿದ್ದು, ಇವರೆಲ್ಲರೂ ಚೆನ್ನೈ ಮೂಲದವರು ಎಂದು ತಿಳಿದುಬಂದಿದೆ.

ಕಾರು ಬ್ರಿಡ್ಜ್​​ ಮೇಲಿಂದ ಕೆಳಗೆ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಯುವಕರನ್ನು ಕೋಲಾರದ ಅರ್ ಎಲ್ ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಿಡ್ಜ್​ ಮೇಲಿಂದ ನಾಲ್ಕು ಗಾಲಿಗಳು ಮೇಲೆ ಮಾಡಿ ಕಾರು ಬಿದ್ದಿದೆ. ಇನ್ನು  ಡಿವೈಡರ್​​​ಗೆ ಡಿಕ್ಕಿ ಹೊಡೆದು ಬಳಿಕ ಬ್ರಿಡ್ಜ್​​ ಮೇಲಿಂದ ಕೆಳಗುರುಳಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.