AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Organ Donation: ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು, ಬ್ರೈನ್ ಡೆಡ್ – ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

Brain dead: ಚೈತ್ರಾ (26) ಬ್ರೈನ್ ಡೆಡ್ ಆಗಿ ಅಸ್ವಸ್ಥಳಾದ ಮದುಮಗಳು. ಈ ಯುವತಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದವರು. ಆಕೆಯ ನಿಧನಾನಂತರ ಚೈತ್ರಾಳ ಅಂಗಾಂಗ ದಾನಕ್ಕೆ ನಿರ್ಧಾರ ಮಾಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

Organ Donation: ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು, ಬ್ರೈನ್ ಡೆಡ್ - ಅಂಗಾಂಗ ದಾನ ಮಾಡಿದ ಕುಟುಂಬಸ್ಥರು
ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು, ಬ್ರೈನ್ ಡೆಡ್ - ಅಂಗಾಂಗ ದಾನ ಮಾಡಿದ ಕುಟುಂಬಸ್ಥರು
TV9 Web
| Edited By: |

Updated on:Feb 12, 2022 | 11:49 AM

Share

ಕೋಲಾರ: ಮದುವೆಯಾಗಿ ಸುಖ ಜೀವನ ಕಾಣಬೇಕಿದ್ದ ಯುವತಿಯೊಬ್ಬಳ ಜೀವನದಲ್ಲಿ ವಿಧಿ ತನ್ನ ಲೀಲೆ ತೋರಿದೆ. ಆ ಯುವತಿಯ ಸುಂದರ ಬದುಕನ್ನು ಮದುವೆ ರಿಸೆಪ್ಷನ್ ವೇಳೆಯೇ ಚಿವುಟಿಹಾಕಿದೆ. ತನ್ನ ಮದುವೆಯ ಆರತಕ್ಷತೆಯಲ್ಲಿ ಕುಸಿದು ಬಿದ್ದು ಮದುಮಗಳು (bride) ಅಸ್ವಸ್ಥಳಾಗಿದ್ದಾಳೆ. ತಕ್ಷಣ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ (nimhans) ಸೇರಿಸಲಾಗಿ, ಅಲ್ಲಿನ ವೈದ್ಯರು ಆಕೆಯನ್ನು ಬ್ರೈನ್ ಡೆಡ್ (brain dead) ಎಂದು ಘೋಷಣೆ ಮಾಡಿರುವ ಮನಕಲಕುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

MSc ಓದಿದ್ದ ಚೈತ್ರಾ ಕೈವಾರದಲ್ಲಿ ಉಪನ್ಯಾಸಕಿ: ಚೈತ್ರಾ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೊಡಚೆರವು ಗ್ರಾಮದ ಕೃಷಿಕ ರಾಮಪ್ಪ ಎಂಬುವರ ಮಗಳು. ಎಂಎಸ್ಸಿ ಬಯೋಕೆಮಿಸ್ಟ್ರಿ ಮಾಡಿ, ಕೈವಾರದಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಫೆಬ್ರವರಿ 6 ರಂದು ಸಂಜೆ ಶ್ರೀನಿವಾಸಪುರ ಪಟ್ಟಣದಲ್ಲಿ ಆರತಕ್ಷತೆ ನಡೆದಿತ್ತು. ಹೊಸಕೋಟೆ ಮೂಲದ ಯುವಕನೊಂದಿಗೆ ಚೈತ್ರಾ ಮದುವೆ ನಿಶ್ಚಯವಾಗಿತ್ತು. ಆದರೆ ಮದುವೆಯ ಮನೆಯಿಂದ ನೇರ ಆಸ್ಪತ್ರೆಗೆ ಹೋಗಿದ್ದ ಚೈತ್ರಾ. ಚಿಕಿತ್ಸೆ ಫಲಿಸದೆ ನಿನ್ನೆ ನಿಮ್ಹಾನ್ಸ್ ವೈದ್ಯರು ಬ್ರೈನ್ ಡೆಡ್ ಎಂದು ಘೋಷಣೆ ಮಾಡಿದ್ದಾರೆ. ಬಳಿಕ ಕುಟುಂಬಸ್ಥರು ಚೈತ್ರಾಳ ಅಂಗಾಂಗ ದಾನ ಮಾಡಿದ್ದಾರೆ.

ಚೈತ್ರಾ (26) ಬ್ರೈನ್ ಡೆಡ್ ಆಗಿ ಅಸ್ವಸ್ಥಳಾದ ಮದುಮಗಳು. ಈ ಯುವತಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದವರು. ಆಕೆಯ ನಿಧನಾನಂತರ ಚೈತ್ರಾಳ ಅಂಗಾಂಗ ದಾನಕ್ಕೆ ನಿರ್ಧಾರ ಮಾಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ  ಎಂದು  ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿ, ಕರುಣಾಜನಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಸಾರಾಂಶ ಹೀಗಿದೆ: It was a big day for the 26-year Chaitra but destiny had other plans. She collapsed during her wedding reception at Srinivasapur in Kolar district. She was later declared as brain dead at NIMHANS. Despite the heart breaking tragedy, her parents have decided to donate her organs.

ಇದನ್ನೂ ಓದಿ: Hijab Row: ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್​ ನಿವಾಸಕ್ಕೆ ಶಾಸಕ ಭೇಟಿ – ಐ ಫೋನ್, ಸ್ಮಾರ್ಟ್​ವಾಚ್​ ಗಿಫ್ಟ್​

ಇದನ್ನೂ ಓದಿ: Sidlaghatta: ಶಿಡ್ಲಘಟ್ಟದ ಇತಿಹಾಸದಲ್ಲಿಯೇ ದಂಪತಿಯ ಭೀಕರ ಕೊಲೆ, ಗವಾಕ್ಷಿಯಿಂದ ಇಳಿದು ಕುಕೃತ್ಯ, ನಗನಾಣ್ಯ ದರೋಡೆ

Published On - 6:22 am, Sat, 12 February 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!