ಕೋಲಾರದಲ್ಲಿ ಸಂಸದ-ಶಾಸಕರ ನಡುವೆ ಜಟಾಪಟಿ, ರಾಜ್ಯಪಾಲರಿಗೆ ದೂರು ನೀಡುವುದಾಗಿ ಹೇಳಿದ ಮುನಿಸ್ವಾಮಿ

ಕೋಲಾರದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಮತ್ತು ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್​.ನಾರಾಯಣಸ್ವಾಮಿ ನಡುವೆ ಜಟಾಪಟಿ ನಡೆದಿದ್ದು, ಏಕವಚನದಲ್ಲಿ ಶಾಸಕರು ನಿಂದಿಸಿದ್ದಾರೆ. ಈ ಬಗ್ಗೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುವುದಾಗಿ ಮುನಿಸ್ವಾಮಿ ಹೇಳಿದ್ದಾರೆ.

ಕೋಲಾರದಲ್ಲಿ ಸಂಸದ-ಶಾಸಕರ ನಡುವೆ ಜಟಾಪಟಿ, ರಾಜ್ಯಪಾಲರಿಗೆ ದೂರು ನೀಡುವುದಾಗಿ ಹೇಳಿದ ಮುನಿಸ್ವಾಮಿ
ಸಂಸದ ಮುನಿಸ್ವಾಮಿ ಮತ್ತು ಶಾಸಕ ಎಸ್​ ನಾರಾಯಸ್ವಾಮಿ ನಡುವೆ ಜಟಾಪಟಿ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: Rakesh Nayak Manchi

Updated on: Sep 26, 2023 | 5:34 PM

ಕೋಲಾರ, ಸೆ.26: ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾ‌ ಉಸ್ರುವಾರಿ ಸಚಿವ ಬೈರತಿ ಸುರೇಶ್ ಎದುರಲ್ಲೇ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ (S.Muniswamy) ಮತ್ತು ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್​.ನಾರಾಯಣಸ್ವಾಮಿ (S.N.Narayanaswamy) ನಡುವೆ ಜಟಾಪಟಿ ನಡೆದಿದ್ದು, ಏಕವಚನದಲ್ಲಿ ಶಾಸಕರು ನಿಂದಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಮುನಿಸ್ವಾಮಿ, ಶಾಸಕರ ವಿರುದ್ಧ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.

ಕೋಲಾರದಲ್ಲಿ ಟಿವಿ9 ಜೊತೆ ಮಾತನಾಡಿದ ಮುನಿಸ್ವಾಮಿ, ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹಾಗೂ ಎಸ್​ಪಿ ನಾರಾಯಣ್ ವಿರುದ್ಧ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇನೆ. ಎಸ್​ಪಿ ನಾರಾಯಣ್ ಅವರ ಮೇಲೆ ಹಕ್ಕು ಚ್ಯುತಿ ಮಂಡಿಸಲಾಗುವುದು‌ ಎಂದರು.

ಎಸ್.ಎನ್.ನಾರಾಯಣಸ್ವಾಮಿ ಅವರು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸರ್ಕಾರಿ ಭೂಮಿಯನ್ನ ಕಬಳಿಕೆ ಮಾಡಿದ್ದಾರೆ. ಎಸ್​ಪಿ ನಾರಾಯಣ್ ಅವರು ಕಾಂಗ್ರೇಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಕಾಂಗ್ರೇಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕೋಲಾರದಲ್ಲಿ ಹದಿನೈದು ಮರ್ಡರ್, ವೇಶ್ಯಾವಾಟಿಕೆ, ಜೂಜು, ಬೆಟ್ಟಿಂಗ್ ದಂಧೆ ಜೋರಾಗಿದೆ. ಅವ್ಯಾಚ್ಯ ಶಬ್ದಗಳಿಂದ ಬೈದರನ್ನ ಬಿಟ್ಟು, ಕಾಂಗ್ರೇಸ್​ನವರಿಂದ ಶಹಬ್ಬಾಸ್ ಗಿರಿ ಗಿಟ್ಟಿಸಿಕೊಳ್ಳಲು ನನ್ನ ಹೊರಕಳಿಸಿದ್ದಾರೆ ಎಂದು ಎಸ್​ಪಿ ವಿರುದ್ಧ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ಕೋಲಾರ: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ, MP ಮುನಿಸ್ವಾಮಿ ಸೇರಿ 20ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು

ಕಾಂಗ್ರೇಸ್ ಪಕ್ಷದ ಏಜೆಂಟರಂತಿರುವ ಎಸ್ಪಿ ನಾರಾಯಣ್ ಅವರು ನಮ್ಮ ಜಿಲ್ಲೆಗೆ ಬೇಕಾಗಿಲ್ಲ. ಚುನಾವಣೆಗೆ ಬರಬಾರದೆಂದು ಅಂಬೇಡ್ಕರ್ ಅವರನ್ನ ಆಗ ಕಾಂಗ್ರೇಸ್ ಪಕ್ಷ ಪಿತೂರಿ ಮಾಡಿ ತುಳಿದರು. ಹಾಗೆಯೇ ಕೋಲಾರದಲ್ಲಿ ನನ್ನ ವಿರುದ್ಧ ಮಾಡಲು ಮುಂದಾಗಿದ್ದಾರೆ ಎಂದರು.

ಬಿಜೆಪಿ ಯುವ ಮೂರ್ಚಾದಿಂದ ದೂರು

ಬಿಜೆಪಿ‌ ಯುವ ಮೋರ್ಚಾ ವತಿಯಿಂದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮತ್ತು ಎಸ್​ ವಿರುದ್ಧ ದೂರು ನೀಡುವ ಬಗ್ಗೆ ಮಾತನಾಡಿದ ಮೋರ್ಚಾ ಅಧ್ಯಕ್ಷ ಬಾಲಾಜಿ, ನಿನ್ನೆ ನಡೆದಿದ್ದು ಜನತಾ ದರ್ಶನವಲ್ಲ, ಕಾಂಗ್ರೆಸ್ ದರ್ಶನವಾಗಿತ್ತು. ಸಂಸದರು ರೈತರ ಪರ ಮನವಿ ನೀಡಲು ಬಂದಿದ್ದರು. ಈ ಸಂದರ್ಭದಲ್ಲಿ ಶಾಸಕರು ಸಂಸದರನ್ನು ಏಕ ವಚನದಲ್ಲಿ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದರು.

ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಎಸ್​ಪಿ ನಾರಾಯಣ್ ಅವರು ಸಂಸದರ ಮೇಲೆ ದೌರ್ಜನ್ಯ ಮಾಡಿದ್ದು, ಅವರ ಮೇಲೂ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಕ್ರಮ‌ ಕೈಗೊಳ್ಳದಿದ್ದರೆ ಯುವ‌ ಮೋರ್ಚಾ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮೇಲ್ಮೆನೆ ಮತ್ತು ಕೆಳ ಮನೆಯಲ್ಲಿ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡಲು ಅವರಿಂದ ಆಗುತ್ತಿಲ್ಲ. ಸರ್ಕಾರಿ ಸಭೆ ನಡೆಯಬೇಕಾದರೆ ಸಂಸದರು ನಡೆದುಕೊಳ್ಳುವ ರೀತಿ ಹೇಗಿರಬೇಕು? ಯಾವುದೇ ಸಮುದಾಯದವರು ಆಗಿರಲಿ ಅವರು ಒಬ್ಬ ಜನಪ್ರತಿನಿಧಿ. ಅವರು ವಾಗ್ವಾದ ಮಾಡಿದವರು ಯಾವ ಸಮುದಾಯದ ಜನಪ್ರತಿನಿಧಿ‌‌? ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದಲ್ಲಿ ಒಂದೇ ಒಂದು ಜನತಾ ದರ್ಶನ ಕಾರ್ಯಕ್ರಮ ಮಾಡಲಿಲ್ಲ. ಜನಸ್ವಂದನಾ ಮಾಡಿ ಜನರ ಬಳಿ ಹೋಗುವ ಪ್ರಯತ್ನ ಬಿಜೆಪಿಯವರು ಮಾಡಲಿಲ್ಲ. ಮೂರೂವರೆ ನಾಲ್ಕು ವರ್ಷದಲ್ಲಿ ಒಂದು ಸಭೆ ಮಾಡಲಿಲ್ಲ. ನಮ್ಮ ಕಡೆ ಉಸ್ತುವಾರಿ ಸಚಿವರು ತಲೆಯು ಹಾಕಿ ಮಲಗಲಿಲ್ಲ. ನಾವು ಜನರ ಸಮಸ್ಯೆ ಆಲಿಸಿ ಪರಿಹಾರ ಹುಡುಕಲು ಹೋದರೆ ಇವರು ಈ ರೀತಿ ಮಾಡುತ್ತಿದ್ದಾರೆ. ಇದು ಜನಪ್ರತಿನಿಧಿಗಳು ನಡೆದುಕೊಳ್ಳುವ ರೀತಿಯಾ ಎಂದು ಪ್ರಶ್ನಿಸಿದರು.

ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಎಸ್.ಮುನಿಸ್ವಾಮಿ ಅವರು ಅರಣ್ಯ ಜಮೀನು ಒತ್ತುವರಿ ವಿಚಾರವಾಗಿ ಮಾತನಾಡುತ್ತಾ ಪರೋಕ್ಷವಾಗಿ ಶಾಸಕ ನಾರಾಯಣಸ್ವಾಮಿ ವಿರುದ್ಧ ಟೀಕೆ ಮಾಡಿದರು. ಭೂಗಳ್ಳರನ್ನು ಪಕ್ಕದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ಮಾಡುತ್ತಿರುವುದಾಗಿ ಹೇಳಿ ಕ್ಯಾತೆ ತೆಗೆದಿದ್ದಾರೆ.

ಸಂಸದರ ಮಾತಿಗೆ ಕೆರಳಿದ ನಾರಾಯಣಸ್ವಾಮಿ, ಏಕವಚನದಲ್ಲಿ ನಿಂದಿಸಿದ್ದಾರೆ. ಈ ವೇಳೆ ಶಾಸಕರು ಮತ್ತು ಸಂಸದರ ನಡುವೆ ಜಟಾಪಟಿ ನಡೆದಿದ್ದು, ಪರಸ್ಪರ ನಿಂದಿಸಿಕೊಂಡಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಸಮಾಧಾನ ಪಡಿಸಿದರೂ ಸ‌ಂಸದ ಮತ್ತು ಶಾಸಕರು ಸಮಾಧಾನಗೊಳ್ಳಲಿಲ್ಲ. ನಂತರ ವೇದಿಕೆಗೆ ದೌಡಾಯಿಸಿದ ಪೊಲೀಸರು ಜನಪ್ರತಿನಿಧಿಗಳನ್ನು ಸಮಾಧಾನ ಮಾಡಲು ಹರಸಾಹಸಪಟ್ಟರು. ಸ್ವತಃ ಎಸ್​ಪಿ ನಾರಾಯಣ್ ಅವರು ಬಂದು ಸಂಸದರನ್ನು ಕರೆದೊಯ್ದರು.

ಶಾಸಕ, ಎಸ್​ಪಿ ವಿರುದ್ಧ ಬಿಜೆಪಿ ಪ್ರತಿಭಟನೆ

ವೇದಿಕೆಯಲ್ಲಿ ಕಿತ್ತಾಟದ ವಿಚಾರವಾಗಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹಾಗೂ ಎಸ್​ಪಿ ನಾರಾಯಣ್ ವಿರುದ್ಧ ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೋಪಾಲ್ ನೇತೃತ್ವದಲ್ಲಿ ಇಂದು ಕೋಲಾರ ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ಶಾಸಕರು ಹಾಗೂ ಎಸ್​ಪಿ ವಿರುದ್ಧ ಆಕ್ರೋಶ ಹೊರಹಾಕಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್