AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತೆ-ಸಿಎಂ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 25 ಗ್ಯಾರಂಟಿ ಘೋಷಿಸಿದೆ. ಜೊತೆಗೆ ಈ ಹಿಂದೆ​ ಕೊಟ್ಟ ಮಾತಿನಂತೆ ಎಲ್ಲಾ ಭರವಸೆ ಈಡೇರಿಸಿದ್ದೇವೆ. ಹಾಗಾಗಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಕಿತ್ತೊಗೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಕಿಡಿಕಾರಿದ್ದಾರೆ.

ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತೆ-ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 06, 2024 | 3:21 PM

ಕೋಲಾರ, ಏ.06: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಉಭಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದೆ. ಅದರಂತೆ ಇಂದು(ಏ.06) ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಅಭ್ಯರ್ಥಿ ಪರವಾಗಿ ರೋಡ್​ ಶೋ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ನಾವು ಘೋಷಣೆ ಮಾಡಿದ್ದ 5 ಗ್ಯಾರಂಟಿಗಳನ್ನು ಕೂಡ ಅನುಷ್ಠಾನಗೊಳಿಸಿದ್ದೇವೆ. ಜೊತೆಗೆ ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತೆ ಎನ್ನುವ ಮೂಲಕ ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಬಂದ್​ ಆಗುತ್ತದೆ ಎಂಬ ಊಹಾಪೋಹಗಳಿಗೆ ಉತ್ತರ ಕೊಟ್ಟಿದ್ದಾರೆ.

ಈ ಹಿಂದೆ ಸ್ವ-ಪಕ್ಷದ ಶಾಸಕರು ಸೇರಿದಂತೆ ಬಿಜೆಪಿ, ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿ ಎಂದು ಹೇಳಿತ್ತು. ಆದರೆ, ನಾವು ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ. ಬಿಜೆಪಿಯವರು ಹೇಳಿದ್ದು ಎಲ್ಲವೂ ಸುಳ್ಳು, ಲೋಕಸಭಾ ಚುನಾವಣೆಯ ನಂತರವೂ ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ‘ಅಧಿಕೃತವಾಗಿ ಹೈಕಮಾಂಡ್ ಅಭ್ಯರ್ಥಿ ಆಯ್ಕೆ ಮಾಡಿದೆ, ನಾವು ಕೂಡ ಅವರ ಪರವಾಗಿ ಮನವಿ ಮಾಡ್ತೀವಿ, ನೀವು ಮತಗಟ್ಟೆಗೆ ತೆರಳಿ ಹಸ್ತದ ಗುರುತಿಗೆ ಮತ ಹಾಕಿ ಎಂದು ಮನವಿ ಮಾಡುತ್ತೇವೆ. ನಾವು ಸುಮ್ಮನೆ ಮತ ಕೇಳುತ್ತಿಲ್ಲ, ನಾವು ಕೊಟ್ಟ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.

ಇದನ್ನೂ ಓದಿ:ಪ್ರಜಾಧ್ವನಿ 2.O ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ: ಕುರುಡುಮಲೆ ಸನ್ನಿಧಿಯಿಂದ ಕೈಪಡೆ ರಣಕಹಳೆ

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಕಿತ್ತೊಗೆಯಬೇಕು

ಐದು ಕೆಜಿ ಅಕ್ಕಿ ಕೊಡ್ತೀವಿ ಎಂದು ಹೇಳಿ ಬಿಜೆಪಿ ಅವರು‌ ಮೋಸ ಮಾಡಿದರು, ಕೇಂದ್ರ ಸರ್ಕಾರ ನಮಗೆ ಏನೂ ಮಾಡಿಲ್ಲ, ಅವರಿಗೆ ಓಟು ಹಾಕಬೇಡಿ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 25 ಗ್ಯಾರಂಟಿ ಘೋಷಿಸಿದೆ. ಜೊತೆಗೆ ಈ ಹಿಂದೆ​ ಕೊಟ್ಟ ಮಾತಿನಂತೆ ಎಲ್ಲಾ ಭರವಸೆ ಈಡೇರಿಸಿದ್ದೇವೆ. ಹಾಗಾಗಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಕಿತ್ತೊಗೆಯಬೇಕು. ಮೋದಿ ಅವರನ್ನು ಇಳಿಸಿ ರಾಹುಲ್ ಗಾಂಧಿ ಪ್ರಧಾನಿ ಮಾಡಬೇಕು.

ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ಜೊತೆಗೆ ಕೈಜೋಡಿಸಿದೆ. ಈ ಹಿಂದೆ ದೇವೇಗೌಡರು ಪ್ರಧಾನಿ ಆದರೆ ನಾನು ದೇಶ ಬಿಟ್ಟು ಹೋಗ್ತೀವಿ ಎಂದಿದ್ದರು. ಮುಂದಿನ ಜನ್ಮದಲ್ಲಿ‌‌ ನಾನು ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದಿದ್ದ ಮಿಸ್ಟರ್ ದೇವೇಗೌಡ, ಈಗ ಬಿಜೆಪಿ ಜೊತೆಗೆ ಕೈ ಜೋಡಿಸಿದ್ದಾರೆ. ಯಾವುದೇ ಕಾರಣಕ್ಕೂ ಮೈತ್ರಿ ಅಭ್ಯರ್ಥಿಗೆ ಮತ ಕೊಡಬೇಡಿ. ಕಾಂಗ್ರೆಸ್ ಸರ್ಕಾರ ಜಿಲ್ಲೆಗೆ ಕೆಸಿವ್ಯಾಲಿ ಯೋಜನೆ ಕೊಟ್ಟಿದೆ. ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಅವರನ್ನು ಸೋಲಿಸಿ ಕಾಂಗ್ರೆಸ್​ನ ಗೌತಮ್ ಅವರಿಗೆ ಆಶೀರ್ವಾದ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ