Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇಗುಲದಲ್ಲಿ ಕಾಲಿಡಲು ಅವಕಾಶವಿಲ್ಲ: ಮರ್ಯಾದಾ ಹತ್ಯೆ ಬಗ್ಗೆ ಸಿಎಂ ಟ್ವೀಟ್

ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ 2 ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆಗಳು‌‌ ನಡೆದಿವೆ. ಇದು ನಮ್ಮಲ್ಲರ‌ ಮನ ಕಲುಕಿದೆ. ಸಮಾಜದಲ್ಲಿ ಅಂತರ್ಗತ ಜಾತಿ ವ್ಯವಸ್ಥೆ, ಸಮಾಜಿಕ ಕಟ್ಟುಪಾಡುಗಳ‌ ಹೀನ‌ ಮನಸ್ಥಿತಿ ಇಂತಹ ಘಟನೆಗಳು ಪ್ರತಿಫಲಿಸುತ್ತವೆ. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ಕಾನೂನಾತ್ಮಕ ಕಟ್ಟು ನಿಟ್ಟಿನ ಕ್ರಮ‌ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇಗುಲದಲ್ಲಿ ಕಾಲಿಡಲು ಅವಕಾಶವಿಲ್ಲ: ಮರ್ಯಾದಾ ಹತ್ಯೆ ಬಗ್ಗೆ ಸಿಎಂ ಟ್ವೀಟ್
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಆಯೇಷಾ ಬಾನು

Updated on: Aug 29, 2023 | 2:50 PM

ಕೋಲಾರ, ಆ.29: ಕೋಲಾರದಲ್ಲಿ ನಡೆದ ಮರ್ಯಾದಾ ಹತ್ಯೆ(Honor Killing) ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ(Siddaramaiah) ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನಿಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ 2 ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆಗಳು‌‌ ನಡೆದಿವೆ. ಇದು ನಮ್ಮಲ್ಲರ‌ ಮನ ಕಲುಕಿದೆ. ಸಮಾಜದಲ್ಲಿ ಅಂತರ್ಗತ ಜಾತಿ ವ್ಯವಸ್ಥೆ, ಸಮಾಜಿಕ ಕಟ್ಟುಪಾಡುಗಳ‌ ಹೀನ‌ ಮನಸ್ಥಿತಿ ಇಂತಹ ಘಟನೆಗಳು ಪ್ರತಿಫಲಿಸುತ್ತವೆ. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ಕಾನೂನಾತ್ಮಕ ಕಟ್ಟು ನಿಟ್ಟಿನ ಕ್ರಮ‌ಕೈಗೊಳ್ಳಲಿದೆ. ಪ್ರಕರಣದ ತನಿಖೆ, ವಿಚಾರಣೆಯಲ್ಲಿ ಯಾವುದೆ ಲೋಪವಾಗದಂತೆ ಎಚ್ಚರವಹಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ನವರು ಟ್ವೀಟ್ ಮಾಡಿದ್ದಾರೆ.

ಕೋಲಾರದ ತೊಟ್ಲಿ ಗ್ರಾಮದಲ್ಲಿ ವರಮಹಾಲಕ್ಷ್ಮೀ ಹಬ್ಬದ ದಿನವೇ ವೆಂಕಟೇಶಗೌಡ ಎಂಬುವರು ತಮ್ಮ 19 ವರ್ಷದ ಮಗಳನ್ನೇ ಕೊಂದು ಹಾಕಿದ್ದರು. ಮಗಳು ಬೇರೆ ಸಮುದಾಯದ ಅಪ್ರಾಪ್ತ ಹುಡುಗನನ್ನು ಪ್ರೀತಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಮಗಳ ಪ್ರಾಣ ತೆಗೆದಿದ್ದರು. ರಾಜ್ಯದಲ್ಲಿ ಎರಡು ಕಡೆಗಳಲ್ಲಿ ಮರ್ಯಾದೆಗೇಡು ಪ್ರಕರಣಗಳು ನಡೆದಿವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇಂತಹ ಮನಸ್ಥಿತಿ ಸೃಷ್ಠಿಸಿರುವ ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇವಸ್ಥಾನ, ಮನೆಗಳಲ್ಲಿ ಕಾಲಿರಿಸಲು ಅವಕಾಶ ನೀಡದ ಆಚರಣೆ, ಸಂಪ್ರದಾಯ ನಮ್ಮಲ್ಲಿವೆ. ಜಾತಿ ಸಂರಚನೆಯ ಕಟ್ಟು ಪಾಡುಗಳನ್ನ ಮೀರಲು ಮಾನವೀಯತೆ, ವಿಚಾರಪರತಯೆ ದಾರಿ, ಜಾಗೃತಿಯೇ ಅಸ್ತ್ರ. ಸಮಾಜವನ್ನ ಜಾತಿ ಸಂಕೋಲೆಗಳಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ ಎಲ್ಲಾ ಸಮಾಜ ಸುಧಾರಕರ ಆಶಯಗಳನ್ನ ವ್ಯಾಪಕವಾಗಿ ಪ್ರಚುರಪಡಿಸುವುದು ಅಗತ್ಯ. ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮ ಗಳಿಗೆ ಮುಂದಾಗಲಿದೆ. ಹೀಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕೋಲಾರದ ಮರ್ಯಾದೆ ಹತ್ಯೆ ಕುರಿತು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದ ಹತ್ಯೆ: ತಂದೆಯಿಂದಲೇ ಮಗಳ ಕೊಲೆ

ಕೋಲಾರದಲ್ಲಿ ಅನ್ಯಜಾತಿ ಯುವಕನನ್ನು ಪ್ರೀತಿಸುತ್ತಿದ್ದಕ್ಕೆ ಮಗಳನ್ನೇ ತಂದೆ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸರು ತಂದೆ ವೆಂಕಟೇಶ್ ಗೌಡ, ಅಣ್ಣ ಮೋಹನ್ ಕುಮಾರ್, ಚಿಕ್ಕಪ್ಪ ಚೌಡೆಗೌಡ ರನ್ನ ಬಂಧಿಸಿದ್ದಾರೆ.

ಕೋಲಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?