ವಾಲ್ಮೀಕಿ ಹಗರಣದಲ್ಲಿ ಹಣ ತಿಂದವರಿಗೆ ಕುಷ್ಟರೋಗ ಬಂದು ಸಾಯಲಿ: ಕಾಂಗ್ರೆಸ್ ಶಾಸಕನಿಂದಲೇ ಶಾಪ!

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಕೋಲಾರ ಶಾಸಕ ಕೊತ್ತನೂರು ಮಂಜುನಾಥ್ ಅಚ್ಚರಿಯ ಮತ್ತು ತೀಕ್ಷ್ಣವಾದ ಹೇಳಿಕೆ ನೀಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಯಾಗಿರುವುದು ನಿಜ ಎಂದು ಒಪ್ಪಿಕೊಂಡಿರುವ ಅವರು ನೀಡಿರುವ ಗಂಭೀರ ಹೇಳಿಕೆ ಇಲ್ಲಿದೆ.

ವಾಲ್ಮೀಕಿ ಹಗರಣದಲ್ಲಿ ಹಣ ತಿಂದವರಿಗೆ ಕುಷ್ಟರೋಗ ಬಂದು ಸಾಯಲಿ: ಕಾಂಗ್ರೆಸ್ ಶಾಸಕನಿಂದಲೇ ಶಾಪ!
ಕೊತ್ತನೂರು ಮಂಜುನಾಥ್
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: Ganapathi Sharma

Updated on: Jul 06, 2024 | 1:52 PM

ಕೋಲಾರ, ಜುಲೈ 6: ವಾಲ್ಮೀಕಿ ಹಗರಣದಲ್ಲಿ ಹಣ ತಿಂದವರಿಗೆ ಕುಷ್ಟರೋಗ ಬಂದು ಹಾರ್ಟ್​ ಅಟ್ಯಾಕ್​ ಆಗಿ ಸಾಯಲಿ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜನಾಥ್ ಶಾಪ ಹಾಕಿದ್ದಾರೆ. ಕೋಲಾರದಲ್ಲಿ ಹಗರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಣ ವರ್ಗಾವಣೆ ಆಗಿರುವುದು. ಈ ಬಗ್ಗೆ ನಾವು ಮಾಧ್ಯಮಗಳಲ್ಲಿ ನೋಡಿದ್ದೇವೆ. ಹಗರಣದಲ್ಲಿ ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಲಿ. ಹಗರಣ ಕುರಿತು ಸಿಐಡಿ ತನಿಖೆ ಸರಿಯಾಗಿ ಆಗುತ್ತಿಲ್ಲ, ಇಲ್ಲಿ ನ್ಯಾಯ ಸಿಗುವುದು ಅನುಮಾನ ಎನಿಸಿದರೆ, ಸಿಬಿಐ ತನಿಖೆಗೆ ವಹಿಸಬೇಕು ಎಂದು ನಾನೂ ಕೂಡಾ ಒತ್ತಾಯ ಮಾಡುತ್ತೇನೆ ಎಂದರು.

ಮುಡಾ ಹಗರಣ ಕುರಿತು ಇನ್ನೂ ತನಿಖೆ ನಡೆಯುತ್ತಿದೆ. ಹೆಚ್ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅವರ ಸುದ್ದಿ ತೆಗಿಯಲೇ ಬೇಡಿ. ಅವರ ಸಹವಾಸವೇ ಬೇಡ ಎಂದರು. ಮುಡಾ ಆಗಲಿ ವಾಲ್ಮೀಕಿ ನಿಗಮದ್ದಾಗಲೀ ಸರಿಯಾದ ತನಿಖೆಯಾಗಿ ಸತ್ಯಾಂಶ ಹೊರಬರಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.

ಡಿಕೆ ಶಿವಕುಮಾರ್​​ಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಸ್ವಾಮೀಜಿ ಕೇಳಿದ ವಿಚಾರವಾಗಿ ಪ್ರತಿಕ್ರಿಯಿಸಿ, ಸ್ವಾಮೀಜಿಗಳೇ ನೀವು ನಿಮ್ಮ ಕೆಲಸ ಮಾಡಿ. ದಯಮಾಡಿ ರಾಜಕೀಯಕ್ಕೆ ಬರಬೇಡಿ. ಕರ್ನಾಟಕದಲ್ಲಿನ ಸರ್ವ ಜನಾಂಗದ ಸ್ವಾಮೀಜಿಗಳಲ್ಲಿ ಮನವಿ, ಯಾವುದೇ ಸ್ವಾಮೀಜಿ ಒಂದು ಜಾತಿಗೆ ಸಂಬಂಧಿಸಿದ ಸ್ವಾಮೀಜಿ ಆಗಿರುವುದಿಲ್ಲ. ಸ್ವಾಮೀಜಿಗಳಲ್ಲಿ ಪಾದಕ್ಕೆ ನಮಸ್ಕರಿಸಿ ಕೇಳಿಕೊಳ್ಳುತ್ತೇನೆ, ಸ್ವಾಮೀಜಿಗಳು ನೀವು ದಯಮಾಡಿ ರಾಜಕೀಯಕ್ಕೆ ಬರಬೇಡಿ. ಸ್ವಾಮೀಜಿಗಳ ಮೇಲಿರುವ ಗೌರವ ಕಡಿಮೆಯಾಗುತ್ತದೆ. ದಯವಿಟ್ಟು ಧರ್ಮವನ್ನು ಉಳಿಸಿ, ಬಡ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿ, ಕಷ್ಟ ಎಂದು ಬಂದ ಜನರಿಗೆ ಆಶೀರ್ವಾದ ಮಾಡಿ, ಪ್ರವಚನ ಮಾಡಿ ಎಂದು ಮನವಿ ಮಾಡಿದರು.

ಸ್ವಾಮೀಜಿಗಯಿಂದ ಯಾರೂ ಹೇಳಿಸಿರುವುದಲ್ಲ, ಅವರೇ ಪ್ರೀತಿಯಿಂದ ಹೇಳಿದ್ದಾರೆ. ದಯಮಾಡಿ ಸ್ವಾಮೀಜಿಗಳು ರಾಜಕೀಯಕ್ಕೆ ಬರಬೇಡಿ ಎಂದರು.

ಕೋಚಿಮುಲ್​ ನಿರ್ಧಾರ ಸರಿಯಲ್ಲ: ಮಂಜುನಾಥ್

ಕೋಚಿಮುಲ್​​ನಿಂದ ಹಾಲು ಉತ್ಪಾದಕರಿಗೆ 2 ರೂ. ಕಡಿತ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ಕೊತ್ತೂರು ಮಂಜುನಾಥ್, ಕೋಚಿಮುಲ್​ ನಿರ್ಧಾರ ಸರಿ ಇಲ್ಲ. ಈ ಬಗ್ಗೆ ಸೋಮವಾರ ಸಭೆ ಕರೆಯಲಾಗಿದೆ. ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಜೊತೆಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇವೆ ಎಂದರು. ಒಕ್ಕೂಟಕ್ಕೆ ನಷ್ಟವಾದರೂ ಪರವಾಗಿಲ್ಲ ರೈತರಿಗೆ ತೊಂದರೆಯಾಗಬಾರದು ಎಂದರು.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿಯ ಜಮೀನೇ ಇಲ್ಲ, ನಕಲಿ‌ ದಾಖಲೆ‌ ಸೃಷ್ಟಿ ಎಂದ ಆರ್​​ಟಿಐ ಕಾರ್ಯಕರ್ತ

ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಫಾಗಿಂಗ್ ಮಾಡಲು ಹಾಗೂ ಶುಚಿತ್ವ ಕಾಪಾಡಲು ಸೂಚನೆ ನೀಡಲಾಗಿದೆ. ಸೊಳ್ಳೆ ನಿಯಂತ್ರಣ ಮಾಡುವುದು ಕಷ್ಟ. ಅವುಗಳನ್ನು ಕಂಟ್ರೋಲ್​ ಮಾಡಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್