Rahul Gandhi: ಏ.16ರಿಂದ ರಾಹುಲ್​ ಗಾಂಧಿ ಎರಡು ದಿನ ರಾಜ್ಯ ಪ್ರವಾಸ: ಕೋಲಾರದಲ್ಲಿ ಬೃಹತ್​ ಸಮಾವೇಶ

ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ನಾಳೆಯಿಂದ 2 ದಿನಗಳ ಕಾಲ ರಾಜ್ಯ ಪವಾಸ ಕೈಗೊಳ್ಳಲಿದ್ದಾರೆ.

Rahul Gandhi:  ಏ.16ರಿಂದ ರಾಹುಲ್​ ಗಾಂಧಿ ಎರಡು ದಿನ ರಾಜ್ಯ ಪ್ರವಾಸ: ಕೋಲಾರದಲ್ಲಿ ಬೃಹತ್​ ಸಮಾವೇಶ
ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ
Follow us
|

Updated on:Apr 15, 2023 | 12:34 PM

ಬೆಂಗಳೂರು: ಎರಡು ಬಾರಿ ನಿಗದಿಯಾಗಿ ಮುಂದೂಡಲಾಗಿದ್ದ ಕೋಲಾರದ ಕಾಂಗ್ರೆಸ್​​ (Congress) ನಾಯಕ ರಾಹುಲ್​ ಗಾಂಧಿ (Rahul Gandhi) ಸಮಾವೇಶಕ್ಕೆ ಕೊನೆಗೂ ಮುಹೂರ್ತ ಫಿಕ್ಸ್​ ಆಗಿದೆ. ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Election) ದಿನಾಂಕ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಎಐಸಿಸಿ (AICC) ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ನಾಳೆಯಿಂದ (ಏ.16) 2 ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ದೆಹಲಿ ಏರ್​​ಪೋರ್ಟ್​ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರನತ್ತ (Bengaluru) ಪ್ರಯಾಣ ಬೆಳಸುವ ರಾಹುಲ್​ ಗಾಂಧಿ 11.50ಕ್ಕೆ ಬೆಂಗಳೂರು ಏರ್​ಪೋರ್ಟ್​​ಗೆ ತಲಪುತ್ತಾರೆ.

ನಂತರ ಮಧ್ಯಾಹ್ನ 12.25ಕ್ಕೆ ಕೋಲಾರಕ್ಕೆ ಆಗಮಿಸಿ, ಜಿಲ್ಲೆಯ ಹೊರವಲಯದ ಟಮಕ ಬಳಿ ನಡೆಯುವ ಜೈ ಭಾರತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ 2.40ಕ್ಕೆ ಕೋಲಾರದಿಂದ ಬೆಂಗಳೂರಿಗೆ ಹೊರಡಲಿದ್ದಾರೆ. ಸಂಜೆ 5 ಗಂಟೆವರೆಗೆ ಶಾಂಗ್ರಿಲಾ ಹೋಟೆಲ್​ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ 5.30ಕ್ಕೆ ಜೆ.ಪಿ.ನಗರದಲ್ಲಿನ ಬೀದಿಬದಿ ವ್ಯಾಪಾರಿಗಳು, ಪೌರಕಾರ್ಮಿಕರ ಜತೆ ಸಂವಾದ ನಡೆಸಲಿದ್ದಾರೆ. ಸಂಜೆ 6.45ಕ್ಕೆ ಇಂದಿರಾ ಗಾಂಧಿ ಭವನ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ: ಪೂರಕ ಸಾಕ್ಷ್ಯ ಕರ್ನಾಟಕದಿಂದ ಸೂರತ್​ಗೆ ಹೋದ ಬಗೆ ಹೀಗಿದೆ ನೋಡಿ

ಕೋಲಾರಕ್ಕೆ ಡಿಕೆ ಶಿವಕುಮಾರ್ ಭೇಟಿ

ಕೋಲಾರದಲ್ಲಿ ನಾಳೆ ರಾಹುಲ್ ಗಾಂಧಿಯವರು ಭಾಗವಹಿಸುವ ಜೈ ಭಾರತ್ ಸಮಾವೇಶ ಹಿನ್ನೆಲೆ, ಇಂದು ಕೋಲಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ವೇದಿಕೆ ಸೇರಿದಂತೆ ವ್ಯವಸ್ಥೆಗಳ ಪರಿಶೀಲನೆಗೆ ಆಗಮಿಸಿದ್ದಾರೆ. ಕೋಲಾರ ಹೊರವಲಯದ ಟಮಕ ಬಳಿ ಬೃಹತ್ ವೇದಿಕೆ ಹಾಕಲಾಗಿದ್ದು, ಸುಮಾರು ಒಂದುವರೆ ಲಕ್ಷ ಜನ ಸೇರುವ ನಿರೀಕ್ಷೆದೆ.

ಏಪ್ರಿಲ್​ 17 ರಾಹುಲ್​ ಗಾಂಧಿ ಬೀದರ್​ ಪ್ರವಾಸ

ಏ.17ರಂದು ರಾಹುಲ್​ ಗಾಂಧಿ ಬೀದರ್​ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಭಾಲ್ಕಿ, ಹುಮ್ನಾಬಾದ್​ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಅನರ್ಹತೆ ಬಗ್ಗೆ ಕೋಲಾರದಿಂದಲೇ ಉತ್ತರ ಸಾಧ್ಯತೆ

2019ರ ಲೋಕಸಭಾ ಚುನಾವಣೆ ವೇಳೆ ಮೋದಿ ಸಮುದಾಯ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ನ್ಯಾಯಾಲಯದಿಂದ ಶಿಕ್ಷೆ ಮತ್ತು ಸಂಸದ ಸ್ಥಾನದಿಂದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಅನರ್ಹಗೊಂಡಿದ್ದರು. ಇದಕ್ಕೆ ಕೋಲಾರದಿಂದಲೇ ಪ್ರತ್ಯುತ್ತರ ನೀಡುವ ಸಾಧ್ಯತೆ ಇದೆ. ರಾಹುಲ್​ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹವಾಗಿದ್ದು ಕೋಲಾರದಲ್ಲಿ ಮಾಡಿದ ಭಾಷಣದಿಂದ. ಹೀಗಾಗಿ ಕೋಲಾರದಿಂದಲೇ ಪ್ರಚಾರ ಆರಂಭಿಸಿ, ಅನರ್ಹಗೊಳಿಸಿದ್ದನ್ನೇ ಪ್ರಚಾರದ ಪ್ರಭಲ‌ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ಮತ್ತು ಬಿಜೆಪಿ ಸರ್ಕಾರಕ್ಕೆ ಉತ್ತರ ನೀಡಲು ಸಿದ್ದವಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:05 am, Sat, 15 April 23

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​