ಬೆಂಗಳೂರು/ಕೋಲಾರ: ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ಅವರ ಪತ್ನಿ ವಿಧಿವಶರಾಗಿದ್ದಾರೆ. ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಅನಾರೋಗ್ಯಕ್ಕೆ ತುತ್ತಾಗಿದ್ದ ವಿಜಿಯಮ್ಮ ಅವರನ್ನು ಹೆಚ್ವಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತಿ, ಒಬ್ಬ ಮಗಳು, ಒಬ್ಬ ಮಗ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು. ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು.
ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. pic.twitter.com/55P2aHG0Kk— Siddaramaiah (@siddaramaiah) February 17, 2023
ಇನ್ನು ವಿಜಯಮ್ಮ ಅವರ ಅಂತ್ಯಕ್ರಿಯೆ ಯಾವಾಗ? ಎಲ್ಲಿ? ಎನ್ನುವ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
Published On - 3:38 pm, Fri, 17 February 23