ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ರಾಜಕೀಯ ನಿವೃತ್ತಿ; ಶ್ರೀನಿವಾಸಗೌಡ

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂದು ಶಾಸಕ ಶ್ರೀನಿವಾಸಗೌಡ ಹೇಳಿದ್ದಾರೆ.

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ರಾಜಕೀಯ ನಿವೃತ್ತಿ; ಶ್ರೀನಿವಾಸಗೌಡ
ಸಿದ್ದರಾಮಯ್ಯ
Image Credit source: deccanherald.com

Updated on: Mar 18, 2023 | 5:32 PM

ಕೋಲಾರ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ಕೋಲಾರದಿಂದ ಸ್ಪರ್ಧಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂದು ಶಾಸಕ ಶ್ರೀನಿವಾಸಗೌಡ ಹೇಳಿದ್ದಾರೆ. ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ಹೈಕಮಾಂಡ್ ಸಲಹೆ ನೀಡಿದೆ ಎಂಬ ವಿಚಾರವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೋಲಾರದಲ್ಲಿ  (Kolar) ಅವರು ಸ್ಪರ್ಧಿಸಿದರೆ ಕೆಲಸ ಮಾಡುವೆ ಎಂದು ತಿಳಿಸಿದ್ದಾರೆ. ಕೋಲಾರದಿಂದ 2ನೇ ಮುಖ್ಯಮಂತ್ರಿಯನ್ನು ರಾಜ್ಯಕ್ಕೆ ಕೊಡಬೇಕು ಎಂಬ ಆಸೆ ಇತ್ತು. ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನನ್ನು ಕರೆದು ಮಾತಾಡಿದ ಬಳಿಕ ಕ್ಷೇತ್ರ ಬಿಟ್ಟು ಕೊಟ್ಟಿದ್ದೇನೆ. ಈಗ ನನ್ನನ್ನು ಕೇಳದೆ ನಿರ್ಧಾರ ಕೈಗೊಂಡರೆ ಮಾತನಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈಗ ನನ್ನನು ಏನೂ ಕೇಳದೆ ಈ ನಿರ್ಧಾರ ತೆಗೆದುಕೊಂಡರೆ ನಾನು ಆ ಬಗ್ಗೆ ಮಾತನಾಡುವ ಆವಶ್ಯಕತೆ ಇಲ್ಲ. ನಾನು ಅವರಷ್ಟು ದೊಡ್ಡ ಮಟ್ಟದಲ್ಲಿ ರಾಜಕೀಯವಾಗಿ ಬೆಳೆದಿಲ್ಲ ಎಂದು ಶ್ರೀನಿವಾಸಗೌಡ ಅಸಮಾಧಾನ ಹೊರಹಾಕಿದ್ದಾರೆ.

ಸಿದ್ದರಾಮಯ್ಯ ಅವರು ಈ ಬಾರಿ ವಿಧಾನಸಭೆ ಚುನಾವಣೆಗೆ ಕೋಲಾದಿಂದ ಸ್ಪರ್ಧಿಸುವುದು ಬಹುತೇಕ ಖಚಿತವೆಂದೇ ಹೇಳಲಾಗಿತ್ತು. ಆದರೆ, ಬಿಜೆಪಿ ನಾಯಕರು ಮತ್ತು ಮಾಧ್ಯಮಗಳು ಅವರು ಕೊನೇ ಕ್ಷಣದಲ್ಲಿ ಕ್ಷೇತ್ರ ಬದಲಾಯಿಸುವ ಸಾಧ್ಯತೆ ಇದೆ ಎಂದು ಹೇಳಿದ್ದರು. ಶುಕ್ರವಾರ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದಿದ್ದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ, ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಹಾಗೂ ಕೋಲಾರದಿಂದ ಹಿಂದೆ ಸರಿಯುವಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎನ್ನಲಾಗಿತ್ತು.

ಇದನ್ನೂ ಓದಿ: Siddaramaiah: ಕೋಲಾರ ಕಣದಿಂದ ಹಿಂದೆ ಸರಿದ ಸಿದ್ದರಾಮಯ್ಯ; ಎರಡು ದಿನಗಳಲ್ಲಿ ಅಂತಿಮ ನಿರ್ಧಾರ

ಇದರ ಬೆನ್ನಲ್ಲೇ ಶನಿವಾರ ಮಧ್ಯಾಹ್ನ ಬೆಂಗಳೂರಿನ ನಿವಾಸದಲ್ಲಿ ಬೆಂಬಲಿಗರ ಹಾಗೂ ಪಕ್ಷದ ನಾಯಕರ ಜತೆ ಸಭೆ ನಡೆಸಿದ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಿಲ್ಲ ಎಂಬ ಸುಳಿವು ನೀಡಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿಯೂ ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ