ಕಾಂಗ್ರೆಸ್ ಸೇರ್ಪಡೆ ಸುಳಿವು ಬಿಟ್ಟುಕೊಟ್ಟ ಮಾಜಿ ಶಾಸಕ ಕೊತ್ತೂರು ಮಂಜುನಾಥ್
ಕೋಲಾರದಿಂದ ಸ್ಪರ್ಧೆ ಮಾಡುವುದು ನನ್ನ ಕನಸಾಗಿದೆ ಎಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.
ಕೋಲಾರ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದೇನೆ ಎಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಕೋಲಾರ ಶಾಸಕ ಶ್ರೀನಿವಾಸಗೌಡರು ಸ್ಪರ್ಧಿಸದಿದ್ದರೆ ನಾನೇ ಸ್ಪರ್ಧೆ ಮಾಡುತ್ತೇನೆ. ಕೋಲಾರದಿಂದ ಸ್ಪರ್ಧೆ ಮಾಡುವುದು ನನ್ನ ಕನಸಾಗಿದೆ ಎಂದು ಹೇಳಿದರು.
ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಅವರು, ಕಾಂಗ್ರೆಸ್ ಪಕ್ಷಕ್ಕಿಂತ ಕಾಂಗ್ರೇಸ್ ಅಭ್ಯರ್ಥಿ ಎಂ.ಎಲ್.ಅನಿಲ್‌ಕುಮಾರ್ ನನಗೆ ಮುಖ್ಯ. ಹಾಗಾಗಿ ಅವರಿಗೆ ನಾನು ಮತ್ತು ಚಿಂತಾಮಣಿ ಸುಧಾಕರ್ ಬೆಂಬಲ ಸೂಚಿಸಿದ್ದೆವು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿರ್ಧಾರ ಮಾಡಲಾಗುವುದು ಎಂದರು.
ಅನಿಲ್ ಕುಮಾರ್ ಅವರನ್ನು ಎಂಎಲ್‌ಎ ಮಾಡುವುದು ನನ್ನ ಕನಸಾಗಿತ್ತು. ಅವರನ್ನು ಎಂಎಲ್‌ಸಿ ಮಾಡಿರುವುದು ಖುಷಿ ತಂದಿದೆ. ಕೋಲಾರ ಶಾಸಕ ಶ್ರೀನಿವಾಸಗೌಡ ಅಭ್ಯರ್ಥಿ ಆಗಿಲ್ಲ ಎಂದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ನಾನು ಕೋಲಾರದಿಂದ ಸ್ಪರ್ಧೆ ಮಾಡುವೆ. ಕೋಲಾರದಿಂದ ಸ್ಪರ್ಧೆ ಮಾಡುವುದು ನನ್ನ ಕನಸು, ಹಿರಿಯರ ನಿರ್ದೇಶನದಂತೆ ಮುಂದೆ ನಿರ್ಧಾರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಕೋಲಾರ ರಾಜಕಾರಣ: ಬಿಜೆಪಿ ಜೆಡಿಎಸ್ ಅಬ್ಬರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲ, ಮುಂದಿನ ಬೆಳವಣಿಗೆಗೆ ಇದು ದಿಕ್ಸೂಚಿಯೇ? ಇದನ್ನೂ ಓದಿ: MLC Election Results: ಈ 10 ಕಾರಣಗಳಿಂದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಬಿಜೆಪಿಗೆ ಸಮಸ್ಯೆ ತಂದೊಡ್ಡಲಿದೆ