Constable Suicide Attempt: ವಿಚಾರಣೆಗೆ ಹೆದರಿ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್ಟೇಬಲ್

ಮುಳಬಾಗಿಲು ನಗರ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಗುರುಪ್ರಸಾದ್ ಫಿನಾಯಿಲ್(Phenyl) ಸೇವಿಸಿ ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥ ಗುರುಪ್ರಸಾದ್ಗೆ R.L.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Constable Suicide Attempt: ವಿಚಾರಣೆಗೆ ಹೆದರಿ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್ಟೇಬಲ್
ಕಾನ್ಸ್ಟೇಬಲ್ ಗುರುಪ್ರಸಾದ್
Follow us
TV9 Web
| Updated By: ಆಯೇಷಾ ಬಾನು

Updated on:Jun 16, 2022 | 11:12 AM

ಕೋಲಾರ: ಪ್ರಕರಣವೊಂದರಲ್ಲಿ ಆರೋಪಿಗೆ ಸಹಾಯ ಮಾಡಿದ ಆರೋಪ ಹಿನ್ನೆಲೆ ವಿಚಾರಣೆಗೆ ಹೆದರಿ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಯತ್ನಿಸಿದ(Constable Suicide Attempt) ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ನಗರ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಗುರುಪ್ರಸಾದ್ ಫಿನಾಯಿಲ್(Phenyl) ಸೇವಿಸಿ ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥ ಗುರುಪ್ರಸಾದ್ಗೆ R.L.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಪೊಲೀಸ್ ಕಾನ್ಸಟೆಬಲ್ ಗುರುಪ್ರಸಾದ್ ಆರೋಪಿಯೊಬ್ಬನ ಕುರಿತು ಮಾಹಿತಿ ನೋಡಿಲ್ಲ ಅನ್ನೋ ಕಾರಣಕ್ಕೆ ಹಿರಿಯ ಅಧಿಕಾರಿಯೊಬ್ಬರು ಬೈದಿದ್ದಾರೆ ಎಂದು ಮನ ನೊಂದಿರುವ ಗುರುಪ್ರಸಾದ್ ಪೊಲೀಸ್ ಠಾಣೆಯ ಶೌಚಾಲಯದಲ್ಲಿದ್ದ ಫೆನಾಯಲ್ ಕುಡಿದು ಅಸ್ವಸ್ಥನಾಗಿದ್ದ ಈ ವೇಳೆ ವಿಷಯ ತಿಳಿಸಿದ ಪೊಲೀಸರು ಕೂಡಲೇ ಗುರುಪ್ರಸಾದ್ ನನ್ನು ಕೋಲಾರದ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲು ಮಾಡಿ‌ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಗುರುಪ್ರಸಾದ್ ಗೆ ಏನೂ ತೊಂದರೆಯಿಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂದ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:11 am, Thu, 16 June 22