ಅಮೆಜಾನ್ ಕಂಪನಿಗೆ ಸೇರಿದ ಕಂಟೇನರ್ ಅಪಹರಣ; ಒಂದೂವರೆ ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ದರೋಡೆ
ಮೊಬೈಲ್ ಸ್ವಿಚ್ ಆಫ್ ಮಾಡಿ ಕಂಟೇನರ್ ಚಾಲಕ ನಾಪತ್ತೆಯಾಗಿದ್ದು, ಸ್ಥಳಕ್ಕೆ ಕೋಲಾರ ಎಸ್‌ಪಿ ಕಿಶೋರ್ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ: ಅಮೆಜಾನ್ ಕಂಪನಿಗೆ ಸೇರಿದ ಕಂಟೇನರ್ ಲಾರಿ ಅಪಹರಿಸಿ ದರೋಡೆ ಮಾಡಿದ ಘಟನೆ ಕೋಲಾರ ತಾಲ್ಲೂಕಿನ ನಾಗಲಾಪುರ ಗೇಟ್ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಕಡೆಯಿಂದ ಹೊಸಕೋಟೆ ತಾಲೂಕಿನ ಅನಗೊಂಡನಹಳ್ಳಿ ಬಳಿಯ ಫ್ಯಾಕ್ಟರಿಗೆ ತೆರಳುತ್ತಿದ್ದ ಕಂಟೇನರ್ ಲಾರಿಯನ್ನು ಅಪಹರಿಸಿದ್ದು, ಒಂದೂವರೆ ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಲಾಗಿದೆ.
ಕೋಲಾರ ತಾಲ್ಲೂಕಿನ ನಾಗಲಾಪುರ ಗೇಟ್ ಬಳಿ ಲಾರಿ ಬಿಟ್ಟು ಪರಾರಿಯಾದ ದರೋಡೆಕೋರರು, ಅಮೆಜಾನ್ ಕಂಪನಿಗೆ ಸೇರಿದ ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳು, ಹೊಂ ಅಪ್ಲೇಯನ್ಸಸ್ ವಸ್ತುಗಳು ಸೇರಿ ಒಂದೂವರೆ ಕೋಟಿ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ. ಕಳ್ಳರು ಕಂಟೇನರ್‌ನಲ್ಲಿದ್ದ ಜಿಪಿಎಸ್ ಕಿತ್ತು ಎಸೆದು ಕೃತ್ಯವೆಸಗಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಮಾಡಿ ಕಂಟೇನರ್ ಚಾಲಕ ನಾಪತ್ತೆಯಾಗಿದ್ದು, ಸ್ಥಳಕ್ಕೆ ಕೋಲಾರ ಎಸ್‌ಪಿ ಕಿಶೋರ್ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!
ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರ ಬಂಧನ: 2 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಶಕ್ಕೆ