AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆ ವಿಚಾರಕ್ಕೆ ಗಂಡ-ಹೆಂಡತಿ ಮಧ್ಯೆ ಜಗಳ: ಗಲಾಟೆ ಬಿಡಿಸಲು ಹೋದವ ಬರ್ಬರ ಹತ್ಯೆ

ಕೋಲಾರದ ಜೋಡಿಕೃಷ್ಣಾಪುರ ಗ್ರಾಮದಲ್ಲೊಂದು ಭೀಕರ ಘಟನೆ ನಡೆದಿದೆ. ಅಡುಗೆ ಮಾಡುವ ವಿಚಾರಕ್ಕೆ ಗಂಡ-ಹೆಂಡತಿ ಜಗಳದಲ್ಲಿ ಮಧ್ಯಪ್ರವೇಶಿಸಿದ ಬಾವನನ್ನೇ ಬಾಮೈದ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಡುಗೆ ವಿಚಾರಕ್ಕೆ ಗಂಡ-ಹೆಂಡತಿ ಮಧ್ಯೆ ಜಗಳ: ಗಲಾಟೆ ಬಿಡಿಸಲು ಹೋದವ ಬರ್ಬರ ಹತ್ಯೆ
ವಿಘ್ನೇಶ್, ಏಳುಮಲೈ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Oct 18, 2026 | 8:45 PM

Share

ಕೋಲಾರ, ಅಕ್ಟೋಬರ್​​ 18: ಅಡುಗೆ ಮಾಡುವ ವಿಚಾರವಾಗಿ ಗಂಡ, ಹೆಂಡತಿ ಮಧ್ಯೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ಬಾವನನ್ನೇ ಬಾಮೈದ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಜೋಡಿಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ತಮಿಳುನಾಡು ಮೂಲದ ಏಳುಮಲೈ ಕೊಲೆಯಾದ ವ್ಯಕ್ತಿ. ಬಾಮೈದ ವಿಘ್ನೇಶ್​ ಕೊಲೆ ಮಾಡಿ ಪರಾರಿಯಾಗಿದ್ದು, ಆರೋಪಿಗಾಗಿ ವೇಮಗಲ್​ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಡೆದಿದ್ದೇನು?

ತಮಿಳುನಾಡು ಮೂಲದ ತಿರುಮಣ್ಣಾಮಲೈ ಮೂಲದವರಾದ ವಿಘ್ನೇಶ್, ಕಸ್ತೂರಿ ಮತ್ತು ಏಳುಮಲೈ ಕೋಲಾರ ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶಲ್ಲಿನ ಹೊಸದಾಗಿ ನಿರ್ಮಾಣವಾಗುತ್ತಿದ್ದ ಕಟ್ಟಡ ಕಾಮಗಾರಿಗೆ ಕಳೆದ ಆರು ತಿಂಗಳ ಹಿಂದೆಯಷ್ಟೇ ಬಂದಿದ್ದರು. ಮೂವರು ನಿರ್ಮಾಣ ಹಂತದ ಕಟ್ಟಡದ ಬಳಿ  ಶೆಡ್ ನಿರ್ಮಾಣ ಮಾಡಿಕೊಂಡು ವಾವಿದ್ದರು.

ಚಾಕುವಿನಿಂದ ಇರಿದು ಕೊಲೆ 

ವಿಘ್ನೇಶ್ ಹಾಗೂ ಕಸ್ತೂರಿ ಒಂದು ಶೆಡ್​ನಲ್ಲಿದ್ದರೆ, ಏಳುಮಲೈ ಪಕ್ಕದ ಶೆಡ್​ನಲ್ಲಿ ವಾಸವಿದ್ದ. ಊಟ, ತಿಂಡಿ ಮಾತ್ರ ಕಸ್ತೂರಿ ಶೆಡ್​ಗೆ ಹೋಗುತ್ತಿದ್ದ. ಭಾನುವಾರ ಹಿನ್ನೆಲೆ ಏಳುಮಲೈ ಚಿಕನ್​ ತಂದುಕೊಟ್ಟಿದ್ದ. ಆದರೆ ಕಸ್ತೂರಿ ಕೂಡ ಭಾನುವಾರ ಎನ್ನುವ ಕಾರಣಕ್ಕೆ ಅಡುಗೆ ಮಾಡದೆ ಇನ್ನು ಮಲಗಿದ್ದಳಂತೆ. ಆಗ ಬೇಗ ಎದ್ದು ಅಡುಗೆ ಮಾಡು ಎಂದು ವಿಘ್ನೇಶ್​ ಜಗಳ ಶುರು ಮಾಡಿದ್ದು, ಕಸ್ತೂರಿಯನ್ನ ಹೊಡೆಯಲು ಮುಂದಾಗಿದ್ದಾನೆ. ಈ ವೇಳೆ ಏಳುಮಲೈ ಅಕ್ಕನನ್ನ ಹೊಡೆಯಬೇಡ ಎಂದು ಅಡ್ಡ ಹೋಗಿದ್ದಾನೆ. ಈ ವೇಳೆ ಕೋಪಗೊಂಡ ವಿಘ್ನೇಶ್, ಏಕಾಏಕಿ ಚಾಕುವಿನಿಂದ ಇರಿದಿದ್ದು, ಏಳುಮಲೈ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ.

LIVE TV

ಪರಾರಿಯಾಗಿರುವ ಆರೋಪಿಗಾಗಿ ಖಾಕಿ ಶೋಧ

ಘಟನೆಯಿಂದ ಗಾಬರಿಗೊಂಡ ವಿಘ್ನೇಶ್​ ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾನೆ. ಸದ್ಯ ವಿಷಯ ತಿಳಿದ ಕೋಲಾರ ಎಸ್ಪಿ ಕನ್ನಿಕಾ ಸಿಕ್ರಿವಾಲ್​​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರೆ. ಕೊಲೆ ಮಾಡಿ ಪರಾರಿಯಾಗಿರುವ ವಿಘ್ನೇಶ್​​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಕಾಮುಕ ಕಾರ್ತಿಕ್‌ಗೆ ಗಲ್ಲು ಶಿಕ್ಷೆ!

ಒಟ್ಟಾರೆ ಗಂಡ, ಹೆಂಡತಿ ಮಧ್ಯೆ ಜಗಳ ಉಂಡು ಮಲಗುವವರೆಗೆ ಎನ್ನುವ ಮಾತಿದೆ. ಆದರೆ ಇಲ್ಲಿ ಗಂಡ ಹೆಂಡತಿ ಜಗಳ ಬಿಡಿಸಲು ಹೋದವ ಹತ್ಯೆಗೊಳಗಾಗಿದ್ದಾನೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬದಲ್ಲಿ ದುರಂತ ಸಂಭವಿಸಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ