ಕೊವಿಡ್ ತಡೆ ನಿಯಮ ಉಲ್ಲಂಘನೆ: ಮಾಜಿ ಸಚಿವ ವರ್ತೂರ್ ಪ್ರಕಾಶ್ ವಿರುದ್ಧ ಪ್ರಕರಣ ದಾಖಲು
ಈವೇಳೆ ಮಾಸ್ಕ್ ಧರಿಸದೆ, ದೈಹಿಕ ಅಂತರ ಮರೆತಿದ್ದ ಕಾರ್ಯಕರ್ತರು ಕೊವಿಡ್ ನಿಯಮವನ್ನು ಗಾಳಿಗೆ ತೂರಿದ್ದರು. ಹೀಗಾಗಿ ಸಭೆ ಆಯೋಜಿಸಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ವಿರುದ್ಧ ಕೊರೊನಾ ನಿಯಮ ಉಲ್ಲಂಘನೆ (Covid 19 Guidelines) ಆರೋಪದಡಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಕೋಲಾರ ನಗರದ (Kolar) ಚೊಕ್ಕ ಕನ್ವೆನ್ಷನ್ ಹಾಲ್ನಲ್ಲಿ ಸಭೆ ಮಾಜಿ ಸಚಿವ ವರ್ತೂರು ಪ್ರಕಾಶ್ ನಡೆಸಿದ್ದರು. ಸಭೆಯ ನಂತರ ನೂರಾರು ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ್ದರು.
ಈವೇಳೆ ಮಾಸ್ಕ್ ಧರಿಸದೆ, ದೈಹಿಕ ಅಂತರ ಮರೆತಿದ್ದ ಕಾರ್ಯಕರ್ತರು ಕೊವಿಡ್ ನಿಯಮವನ್ನು ಗಾಳಿಗೆ ತೂರಿದ್ದರು. ಹೀಗಾಗಿ ಸಭೆ ಆಯೋಜಿಸಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ (Varthur Prakash) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದವರಿಗೆ ವರ್ತೂರು ಪ್ರಕಾಶ್ರಿಂದ ಭರ್ಜರಿ ಬಾಡೂಟ
(Covid 19 Guidelines Violation case filed against Former Minister Varthur Prakash in Kolar)
Published On - 8:46 pm, Mon, 2 August 21