ಕೊವಿಡ್ ನಿಯಮ ಉಲ್ಲಂಘಿಸಿ ಸಭೆ, ಬಿರಿಯಾನಿ ಊಟ; ವರ್ತೂರು ಪ್ರಕಾಶ್ ಸೇರಿ 105 ಜನರ ಮೇಲೆ ಎಫ್ಐಆರ್ ದಾಖಲು
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಕೋಲಾರ ನಗರದ ಚೊಕ್ಕ ಕನ್ವೆನ್ಷನ್ ಹಾಲ್ನಲ್ಲಿ ಸಭೆ ಮಾಜಿ ಸಚಿವ ವರ್ತೂರು ಪ್ರಕಾಶ್ ನಡೆಸಿದ್ದರು. ಸಭೆಯ ನಂತರ ನೂರಾರು ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ್ದರು.
ಕೋಲಾರ: ಕೊವಿಡ್ ನಿಯಮ ಉಲ್ಲಂಘನೆ ((Covid 19 Guidelines) ಮಾಡಿ ಸಭೆ ನಡೆಸಿ ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ್ದ ಪ್ರಕರಣದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ (Varthur Prakash) ಸೇರಿ ಒಟ್ಟು 105 ಜನರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕೊರೊನಾ ನಿಯಮ ಉಲ್ಲಂಘನೆ ಹಿನ್ನೆಲೆ ಕರ್ನಾಟಕ ಎಪಿಡೆಮಿಕ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ‘ನಮ್ಮ ಕಾಂಗ್ರೆಸ್ ಪಕ್ಷ’ದ ರಾಜ್ಯಾಧ್ಯಕ್ಷ ಬೆಗ್ಲಿ ಪ್ರಕಾಶ್ ಎ-1, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಸೂಲೂರು ಅಂಜಿನಪ್ಪ ಎ-2, ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ ಸಿಎಸ್ ವೆಂಕಟೇಶ್ ಎ-3, ಮಾಜಿ ಸಚಿವ ವರ್ತೂರು ಪ್ರಕಾಶ್ ಎ-4 ಆರೋಪಿಗಳು ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಕೋಲಾರ ನಗರದ (Kolar) ಚೊಕ್ಕ ಕನ್ವೆನ್ಷನ್ ಹಾಲ್ನಲ್ಲಿ ಸಭೆ ಮಾಜಿ ಸಚಿವ ವರ್ತೂರು ಪ್ರಕಾಶ್ ನಡೆಸಿದ್ದರು. ಸಭೆಯ ನಂತರ ನೂರಾರು ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ್ದರು.
ಈವೇಳೆ ಮಾಸ್ಕ್ ಧರಿಸದೆ, ದೈಹಿಕ ಅಂತರ ಮರೆತಿದ್ದ ಕಾರ್ಯಕರ್ತರು ಕೊವಿಡ್ ನಿಯಮವನ್ನು ಗಾಳಿಗೆ ತೂರಿದ್ದರು. ಹೀಗಾಗಿ ಸಭೆ ಆಯೋಜಿಸಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:
ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದವರಿಗೆ ವರ್ತೂರು ಪ್ರಕಾಶ್ರಿಂದ ಭರ್ಜರಿ ಬಾಡೂಟ
(Covid 19 Guidelines Violation FIR registered on 105 people including Former Minister Varthur Prakash)