AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಗಣೇಶ ಹಬ್ಬದ ಮೆರವಣಿಗೆಗೆ ಡಿಜೆ ಸೌಂಡ್ಸ್ ಬ್ಯಾನ್: ಸಾರ್ವಜನಿಕರಿಂದ ಆಕ್ರೋಶ

ಕರ್ನಾಟಕದೆಲ್ಲೆಡೆ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅನೇಕ ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವಗಳು ಗಮನ ಸೆಳೆಯುತ್ತಿವೆ. ಆದರೆ ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲಾಡಳಿತ ಹೊರಡಿಸಿರುವ ಹೊಸ ಆದೇಶವೊಂದು ಗಣೇಶೋತ್ಸವ ಆಯೋಜಕರನ್ನು ಸಂಕಷ್ಟಕ್ಕೆ ದೂಡಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಆದೇಶಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ.

ಕೋಲಾರದಲ್ಲಿ ಗಣೇಶ ಹಬ್ಬದ ಮೆರವಣಿಗೆಗೆ ಡಿಜೆ ಸೌಂಡ್ಸ್ ಬ್ಯಾನ್: ಸಾರ್ವಜನಿಕರಿಂದ ಆಕ್ರೋಶ
ಸಾಂದರ್ಭಿಕ ಚಿತ್ರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: Ganapathi Sharma|

Updated on: Sep 07, 2024 | 4:57 PM

Share

ಕೋಲಾರ, ಸೆಪ್ಟೆಂಬರ್ 7: ಕೋಲಾರ ಜಿಲ್ಲೆಯಾದ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಡಿಜೆ ಸೌಂಡ್ಸ್ ನಿಷೇಧಿಸಿ ಆದೇಶ ಹೊರಡಿಸಿದೆ. ಇದು ಸಾರ್ವಜನಿಕರ ಆಕ್ಷೇಪಕ್ಕೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಏಕಾಏಕಿ ಡಿಜೆ ಸೌಂಡ್ಸ್ ನಿಷೇಧಿಸಿರುವುದರಿಂದ ಅಪಾರ ನಷ್ಟವಾಗುತ್ತಿದೆ ಎಂದು ಡಿಜೆ ಮಾಲೀಕರು ಕೂಡ ಅಸಮಾಧಾನ ಹೊರಹಾಕಿದ್ದಾರೆ.

ಜಿಲ್ಲಾಡಳಿತದ ಕ್ರಮದಿಂದ ಡಿಜೆ ಸೌಂಡ್ಸ್ ಮಾಲೀಕರಿಗೆ ಸಂಕಷ್ಟ ಎದುರಾಗಿದೆ. ಏಕಾಏಕಿ ಡಿಜೆ ಬ್ಯಾನ್​ ಮಾಡಿರುವುದಕ್ಕೆ ಡಿಜೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವರ್ಷಕ್ಕೊಮ್ಮೆ ಬರುವ ಹಬ್ಬದಲ್ಲಿ ನಮ್ಮ ಹೊಟ್ಟೆ ಮೇಲೆ ಹೊಡೆಯುವ ನಿರ್ಧಾರ ತೆಗೆದಕೊಂಡಿದ್ದಾರೆ. ಸಾಲ ಸೋಲ ಮಾಡಿ ಡಿಜೆ ಸಿಸ್ಟಮ್​ಗಳನ್ನು ತಂದಿದ್ದೇವೆ. ಈಗಾಗಲೇ ಅಡ್ವಾನ್ಸ್ ತೆಗೆದುಕೊಂಡಿದ್ದೇವೆ. ಈಗ ಬ್ಯಾನ್​ ಮಾಡಿದ್ದಾರೆ. ಜಿಲ್ಲಾಡಳಿತದ ನಿರ್ಧಾರದಿಂದ ನಾವು ನಷ್ಟ ಅನುಭವಿಸುವಂತಾಗಿದೆ. ನಿಭಂದನೆಗಳನ್ನು ಹಾಕಿ ಅನುಮತಿ ಕೊಡಿ. ಅದರ ಬದಲು ನಿಷೇಧ ಹೇರಬೇಡಿ ಎಂದು ಡಿಜೆ ಮಾಲೀಕರು ಮನವಿ ಮಾಡಿದ್ದಾರೆ. ಕೋಲಾರ ಎಸ್​ಪಿ ನಿಖಿಲ್​ ಬಳಿ ಡಿಜೆ ಸೌಂಡ್ಸ್​ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಕುರುಡುಮಲೆ ವಿನಾಯಕನ ದರ್ಶನಕ್ಕೆ ಜನರ ದಂಡು

ಗಣೇಶ ಚತುರ್ಥಿ ಸಂದರ್ಭದಲ್ಲಿ ಕೋಲಾರದ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆ ವಿನಾಯಕನ ದರ್ಶನಕ್ಕೆ ಜನರ ದಂಡೇ ಬಂದಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಕೋಲಾರ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ ಹೊರ ರಾಜ್ಯದಿಂದಲೂ ಭಕ್ತರು ಬಂದಿದ್ದಾರೆ.

ಇದನ್ನೂ ಓದಿ: ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10,001 ಕರಿಗಡುಬಿನಲ್ಲಿ ಅರಳಿದ ಗಣಪತಿ!

ವಿಶ್ವದ ಏಕೈಕ ಏಕಶಿಲಾ ಸಾಲಿಗ್ರಾಮ ಶಿಲಾಗಣಪತಿ ಎಂಬುದು ಕುರುಡುಮಲೆ ವಿನಾಯಕನ ವಿಶೇಷತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?