AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಜವರಾಯನಾದ ಕೃಷಿ ಹೊಂಡ, ಈಜು ಕಲಿಸಲು ಹೋದ ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನಕ್ಕನಹಳ್ಳಿಯ ಕೃಷಿ ಹೊಂಡದಲ್ಲಿ ನಡೆದ ದುರಂತದಲ್ಲಿ ತಂದೆ ಸೇರಿದಂತೆ ಇಬ್ಬರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಕ್ಕಳಿಗೆ ಈಜು ಕಲಿಸಲು ಹೋಗಿದ್ದಾಗ ಕಾಲು ಜಾರಿ ಬಿದ್ದು ದಾರುಣ ಘಟನೆ ಸಂಭವಿಸಿದೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ: ಜವರಾಯನಾದ ಕೃಷಿ ಹೊಂಡ, ಈಜು ಕಲಿಸಲು ಹೋದ ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ
ಕೃಷಿ ಹೊಂಡImage Credit source: tv9 kannada
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:May 17, 2026 | 5:12 PM

Share

ಕೋಲಾರ, ಮೇ 17: ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದ ತಂದೆ (Father) ಹಾಗೂ ಇಬ್ಬರು ಮುದ್ದಿನ ಮಕ್ಕಳು ನೀರು ಪಾಲಾಗಿರುವ (death) ದಾರುಣ ಘಟನೆ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ಶ್ರೀನಿವಾಸ್ (40), ಮಕ್ಕಳಾದ ಚೇತನ್ (13) ಹಾಗೂ ರಾಜೇಶ್ (8) ಮೃತ ದುರ್ದೈವಿಗಳು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಘೋರ ದುರಂತ
  • ಕೃಷಿ ಹೊಂಡದಲ್ಲಿ ಮುಳುಗಿ ತಂದೆ, ಇಬ್ಬರು ಮಕ್ಕಳು ಸಾವು
  • ಮಕ್ಕಳಿಗೆ ಈಜು ಕಲಿಸಲು ಹೋಗಿದ್ದಾಗ ಕಾಲು ಜಾರಿಬಿದ್ದು ದುರ್ಮರಣ

ಕಾಲು ಜಾರಿ ಬಿದ್ದು ದುರಂತ

ಭಾನುವಾರ ರಜಾದಿನವಾಗಿದ್ದರಿಂದ ತಂದೆ ಶ್ರೀನಿವಾಸ್​​, ತಮ್ಮಿಬ್ಬರು ಮಕ್ಕಳಿಗೆ ಈಜು ಕಲಿಸಿಕೊಡಲು ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಗ್ರಾಮದ ಭೈರಪ್ಪ ಎಂಬುವರಿಗೆ ಸೇರಿದ ಕೃಷಿ ಹೊಂಡದ ಬಳಿ ತೆರಳಿದ್ದಾಗ, ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾರೆ. ದುರದೃಷ್ಟವಶಾತ್ ಮೂವರೂ ಕೃಷಿ ಹೊಂಡದಲ್ಲೇ ಮುಳುಗಿ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ.

ಕಾರು-ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರರ ದುರ್ಮರಣ

ಇನ್ನು ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಗೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಎನಮರೇಪಲ್ಲಿ ಕ್ರಾಸ್ ಸಮೀಪ ಈ ಘಟನೆ ನಡೆದಿದೆ.

ಇದನ್ನೂ ಓದಿ: ಕೇವಲ 200 ರೂ.ಗಾಗಿ ನಡೀತು ಕೊಲೆ! ತಾಯಿಗೇ ಚಾಕು ಇರಿದಿದ್ದವನಿಂದ ಮತ್ತೊಂದು ಹೇಯ ಕೃತ್ಯ

ಎನಮರೇಪಲ್ಲಿ ಗ್ರಾಮದ ಮುನಿರಾಜು (43) ಹಾಗೂ ಪಣಸಮಾಕಲಹಳ್ಳಿ ಗ್ರಾಮದ ಸತೀಶ್ (38) ಮೃತ ದುರ್ದೈವಿಗಳು. ಮುನಿರಾಜು ಮತ್ತು ಸತೀಶ್ ಇಬ್ಬರೂ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬಂದ ಕಾರು, ಬೈಕ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕಾರಿನಲ್ಲಿದ್ದವರಿಗೂ ಗಾಯ, ಆಸ್ಪತ್ರೆಗೆ ದಾಖಲು

ಇನ್ನು ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೂ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:03 pm, Sun, 17 May 26

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!