ವಿದ್ಯುತ್ ತಂತಿ ತುಂಡಾಗಿರುವ ಹಿನ್ನೆಲೆ, ಚೆನ್ನೈ-ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ

ವಿದ್ಯುತ್ ತಂತಿ ತುಂಡಾಗಿರುವ ಹಿನ್ನೆಲೆ ಚೆನ್ನೈ-ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿವಾಗಿದೆ. ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿ ಬ್ಯಾಟರಾಯನಹಳ್ಳಿ ಬಳಿ ವಿದ್ಯುತ್ ಲೈನ್​ ತುಂಡಾಗಿ ಬಿದ್ದಿದೆ.

ವಿದ್ಯುತ್ ತಂತಿ ತುಂಡಾಗಿರುವ ಹಿನ್ನೆಲೆ, ಚೆನ್ನೈ-ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Feb 22, 2023 | 6:42 PM

ಕೋಲಾರ: ವಿದ್ಯುತ್ ತಂತಿ ತುಂಡಾಗಿರುವ ಹಿನ್ನೆಲೆ ಚೆನ್ನೈ-ಬೆಂಗಳೂರು ಮಾರ್ಗದ ರೈಲು (train) ಗಳ ಸಂಚಾರ ಸ್ಥಗಿತವಾಗಿದೆ. ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿ ಬ್ಯಾಟರಾಯನಹಳ್ಳಿ ಬಳಿ ವಿದ್ಯುತ್ ಲೈನ್​ ತುಂಡಾಗಿ ಬಿದ್ದಿದೆ.​ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಸುಮಾರು 8ಕ್ಕೂ ಹೆಚ್ಚು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರಮುಖವಾಗಿ ಮಾರಿಕುಪ್ಪಂ ಬೆಂಗಳೂರು, ಬೆಂಗಳೂರು ಮೈಸೂರು ತಿರುಪತಿ, ಬೆಂಗಳೂರು ಚೆನೈ, ಜೋಲಾರ್​ಪೇಟ್​ ಬೆಂಗಳೂರು, ಸೇರಿದಂತೆ ಸುಮಾರು ಎಂಟು ರೈಲುಗಳ ಸಂಚಾರ ಸ್ಥಗಿತವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

ಜಿಲ್ಲೆಯ ಮಾಲೂರು ತಾಲ್ಲೂಕು ಬ್ಯಾಟರಾಯನಹಳ್ಳಿ ಬಳಿ ವಿದ್ಯುತ್​ ರೈಲು ತುಂಟಾಗಿ ಬಿದ್ದಿದೆ. ಮಧ್ಯಾಹ್ನ ಸುಮಾರಿಗೆ ವಿದ್ಯುತ್​ ಲೈನ್​ ತುಂಡಾಗಿರುವ ಕುರಿತು ಮಾಹಿತಿ ಸಿಕ್ಕ ತಕ್ಷಣ ಬಂಗಾರಪೇಟೆ ಹಾಗೂ ಕಂಟ್ರೋನ್​ಮೆಂಟ್​ ರೈಲ್ವೇ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ಬಂದು ವಿದ್ಯುತ್​ ಸಂಪರ್ಕ ಕಡಿತಗೊಳಿಸಿ, ಆಗಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ.

ಇದನ್ನೂ ಓದಿ: ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಒಂದೇ ತಿಂಗಳಲ್ಲಿ 7 ಲಕ್ಷ ರೂ. ದಂಡ ಸಂಗ್ರಹಿಸಿದ BMTC

ಜೊತೆಗೆ ತಕ್ಷಣವೇ ದುರಸ್ಥಿ ಕಾರ್ಯ ಆರಂಭ ಮಾಡಿದ್ದು ಸತತವಾಗಿ ನಾಲ್ಕು ಗಂಟೆಗಳಿಂದಲೂ ದುರಸ್ಥಿ ಕಾರ್ಯ ನಡೆಯುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ದುರಸ್ಥಿ ಕಾರ್ಯ ಪೂರ್ಣಗೊಳ್ಳಲಿದ್ದು, ರಾತ್ರಿ ಅಥವಾ ಮುಂಜಾನೆ ವೇಳೆಗೆ ಈ ಮಾರ್ಗದಲ್ಲಿ ಎಂದಿನಂತೆ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

ಬಿಎಂಟಿಸಿ ಪ್ರಯಾಣಿಕರಿಗೆ ಬಿಗ್​​ ಶಾಕ್​

ಬೆಂಗಳೂರು: ಇತ್ತೀಚೆಗೆ ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್​ ನೀಡಿತ್ತು. ಆದರೆ ಈಗ ನಿಯಮ ಉಲ್ಲಂಘಿಸಿದ ಪ್ರಯಾಣಿಕರಿಂದ ದಂಡ ವಸೂಲಿ ಮಾಡುವ ಮೂಲಕ ಮತ್ತೆ ಶಾಕ್​ ನೀಡಿದೆ. ಬಿಎಂಟಿಸಿ ಬಸ್​ನಲ್ಲಿ ಟಿಕೆಟ್ ರಹಿತ 3,591 ಪ್ರಯಾಣಿಕರು ಪತ್ತೆಯಾಗಿದ್ದು, 16,226 ಟ್ರಿಪ್​ ತಪಾಸಣೆ ನಡೆಸಿ 6,77,190 ರೂ. ದಂಡ ವಸೂಲಿ ಮಾಡಲಾಗಿದೆ. ಜನವರಿ ತಿಂಗಳಲ್ಲಿ ಒಟ್ಟು 7,09,390 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಧಾರವಾಡ: ಅಗ್ನಿಕುಂಡಗಳಂತಾದ ಬಿ.ಆರ್.ಟಿ.ಎಸ್ ಬಸ್; ಉಸಿರಾಡೋದೆ ಕಷ್ಟ ಅಂತೀರೋ ಪ್ರಯಾಣಿಕರು

ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94ರ ಪ್ರಕಾರ ದಂಡ ವಸೂಲಿ ಮಾಡಲಾಗಿದೆ. ಜೊತೆಗೆ BMTC ಬಸ್ ನಿರ್ವಾಹಕರ ವಿರುದ್ಧ 1521 ಕೇಸ್ ದಾಖಲು ಮಾಡಲಾಗಿದೆ. ಮಹಿಳೆಯರಿಗೆ ಮೀಸಲಿರುವ ಸೀಟ್​ನಲ್ಲಿ ಪುರುಷರ ಪ್ರಯಾಣ ಹಿನ್ನೆಲೆ 322 ಪುರುಷ ಪ್ರಯಾಣಿಕರಿಂದ 32,200 ರೂ. ದಂಡ ವಸೂಲಿ ಮಾಡುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಬಿಗ್​ ಶಾಕ್ ನೀಡಿದೆ.​ ಇನ್ಮುಂದೆ ಮಹಿಳಾ ಆಸನಗಳಲ್ಲಿ ಕುಳಿತು ಪ್ರಯಾಣಿಸದಿರಲು ಸೂಚನೆ ಕೂಡ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:15 pm, Wed, 22 February 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್