ಕೋಚಿಮುಲ್ ಅವ್ಯವಹಾರ: ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇಡಿ ದಾಳಿ

ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಕೋಚಿಮುಲ್ ದ ಅಧ್ಯಕ್ಷ, ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಂಜೇಗೌಡ ಅವರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಕೋಚಿಮುಲ್ ಅವ್ಯವಹಾರ: ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇಡಿ ದಾಳಿ
ಕೋಚಿಮುಲ್​, ಕೆವೈ ನಂಜೇಗೌಡ
Edited By:

Updated on: Jan 08, 2024 | 9:27 AM

ಕೋಲಾರ, ಜನವರಿ 08: ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (Kochimul) ಕೋಚಿಮುಲ್ ದ ಅಧ್ಯಕ್ಷ, ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ (KY Nanjegowda) ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಂಜೇಗೌಡ ಅವರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದಲ್ಲಿರುವ ಮನೆ, ಹುತ್ತೂರು ಹೋಬಳಿ ಕೋಚಿಮುಲ್ ಕಚೇರಿಯಲ್ಲಿ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಂಜೇಗೌಡ ಅವರ ಆಪ್ತ ಸಹಾಯಕ ಹರೀಶ್, ಕೋಚಿಮುಲ್ ಅಡ್ಮಿನ್ ಮ್ಯಾನೇಜರ್ ನಾಗೇಶ್, ಕೋಚಿಮುಲ್​​ ವ್ಯವಸ್ಥಾಪಕ ನಿರ್ದೇಶಕ ಗೋಪಾಲ್​ಮೂರ್ತಿ ನಿವಾಸದ ಮನೆ ಮೇಲೂ ದಾಳಿ ಮಾಡಿದ್ದಾರೆ. ಕೆ.ವೈ.ನಂಜೇಗೌಡ ಅವರ ಬೆಂಗಳೂರು ನಿವಾಸ, ಮಾಲೂರು ಕೋಚಿಮುಲ್ ಕಚೇರಿ ಸೇರಿದಂತೆ ಒಟ್ಟು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:27 am, Mon, 8 January 24