AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶಾಸಕ ನಂಜೇಗೌಡಗೆ ಬಿಗ್ ಶಾಕ್: ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ

ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ನಂಜೇಗೌಡಗೆ (K.Y Nanjegowda) ಸೇರಿದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ. ಕೋಲಾರ ಹಾಲು ಒಕ್ಕೂಟದ (ಕೋಮುಲ್‌) ನೇಮಕಾತಿ ಹಗರಣ ಸಂಬಂಧ ಇಡಿ ದಾಳಿ ನಡೆಸಿದ್ದು, 2023ರಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಬಗ್ಗೆ ಇಡಿ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಕಾಂಗ್ರೆಸ್ ಶಾಸಕ ನಂಜೇಗೌಡಗೆ ಬಿಗ್ ಶಾಕ್: ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ
Ky Nanjegowda
TV9 Web
| Edited By: |

Updated on: Jul 17, 2025 | 7:27 PM

Share

ಬೆಂಗಳೂರು, (ಜುಲೈ 17): ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ (K.Y Nanjegowda) ಅವರ ಆಸ್ತಿಯನ್ನು ಇ.ಡಿ (ED) ಮುಟ್ಟುಗೋಲು ಹಾಕಿಕೊಂಡಿದೆ. ಕೆ.ವೈ.ನಂಜೇಗೌಡ ಹಾಗೂ ಇತರರಿಗೆ ಸೇರಿದ ಒಟ್ಟು 1.32 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿದೆ. 2023ರಲ್ಲಿ ಕೋಮುಲ್ ನೇಮಕಾತಿ ಹಗರಣ ಸಂಬಂಧ 1.32 ಕೋಟಿ ರೂ. ಮೌಲ್ಯದ ಸ್ಥಿರ-ಚರಾಸ್ತಿಯನ್ನು ಜಪ್ತಿ ಮಾಡಿದೆ. ಈ ಬಗ್ಗೆ ಇಡಿ ಎಕ್ಸ್​​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

2023ರ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ (KOMUL) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ (money laundering) ಪ್ರಕರಣಕ್ಕೆ ಸಂಬಂಧಪಟ್ಟಿದ್ದು, ಜುಲೈ 16, 2025ರಂದು ಅಧಿಕೃತವಾಗಿ ಈ ಮೌಲ್ಯದ ಆಸ್ತಿಯನ್ನು ಜಪ್ತಿಗೊಳಿಸಲಾಗಿದೆ ಎಂದು ED ಅಧಿಕೃತ ಎಕ್ಸ್​ ಖಾತೆಯಲ್ಲಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಕೋಲಾರ ಹಾಲು ಒಕ್ಕೂಟ ಚುನಾವಣೆ: ಮೂರನೇ ಬಾರಿಗೆ ಅಧ್ಯಕ್ಷರಾದ ಕೆವೈ ನಂಜೇಗೌಡ

ಕೋಮುಲ್‌ ನೇಮಕಾತಿಯಲ್ಲಿ ಹಗರಣ ಸಂಬಂಧ ಸುಮಾರು 75 ಅಭ್ಯರ್ಥಿಗಳಿಂದ ಹಣ ಪಡೆದಿದ್ದಾರೆ. ಮಂಗಳೂರು ಯೂನಿವರ್ಸಿಟಿಯ ಸಿಬ್ಬಂದಿ ಜೊತೆಗೆ ಅವ್ಯಹಾರ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ರಾಜಕಾರಣಿಗಳ ಶಿಫಾರಸು ಪತ್ರ ನೀಡಲಾಗಿತ್ತು. ಇ.ಡಿ ದಾಳಿ ವೇಳೆ ಶಿಫಾರಸು ಪತ್ರ ಸಮೇತ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದರು. ಅಲ್ಲದೇ ಅಕ್ರಮ ಹಣ ವರ್ಗಾವಣೆ ಹಿನ್ನೆಲೆಯಲ್ಲಿ ನಂಜೇಗೌಡ ಮನೆ ಮೇಲೆ ಇಡಿ ದಾಳಿ ಮಾಡಿತ್ತು.

ಕೋಮುಲ್ ಒಕ್ಕೂಟದ 13 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 9 ಮಂದಿ ಜಯ ಸಾಧಿಸುವುದರೊಂದಿಗೆ ಕೋಮುಲ್‌ ಕಾಂಗ್ರೆಸ್‌ ವಶವಾಗಿತ್ತು. ಜೆಡಿಎಸ್‌ – ಬಿಜೆಪಿ ಮೈತ್ರಿಕೂಟದ 4 ಜನ ನಿರ್ದೇಶಕರು ಮಾತ್ರ ಗೆದ್ದಿದ್ದರು. ಇನ್ನು ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್‌) ಅಧ್ಯಕ್ಷರಾಗಿ ಕಾಂಗ್ರೆಸ್‌ ಶಾಸಕ ಮಾಲೂರಿನ ಕೆ.ವೈ. ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸತತ ಮೂರನೇ ಬಾರಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು, ಕೆಎಂಎಫ್​ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ