ಕೋಲಾರ: ಕಾಂಗ್ರೆಸ್ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿ ಅನಾಥ ಶವವಾಗಿ ಪತ್ತೆಯಾಗಿದ್ದರು. ಆ.16ರಂದು ಅನಾಥ ಶವವೆಂದು ಪೊಲೀಸರು ಅಂತ್ಯಕ್ರಿಯೆ ನಡೆಸಿದ್ದರು. ಆದ್ರೆ ಈಗ ಮಾಹಿತಿ ತಿಳಿದು ಕುಟುಂಬಸ್ಥರು ಠಾಣೆಗೆ ಭೇಟಿ ನೀಡಿದ್ದಾರೆ.
ಕೋಲಾರದಿಂದ ಕಾಂಗ್ರೆಸ್ ಆಯೋಜನೆ ಮಾಡಿದ್ದ 75ನೇ ಸ್ವತಂತ್ರ್ಯೋತ್ಸವದ ಅಮೃತ ಮಹೋತ್ಸವ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ ಸಂಬಂಧ ಆತನ ಸುಳಿವು ಸಿಕ್ಕಿದ್ದು, ಕಾಣಿಯಾಗಿದ್ದ ವ್ಯಕ್ತಿ ಅನಾಥ ಶವವಾಗಿ ಪತ್ತೆಯಾದ ಹಿನ್ನೆಲೆ ಆಗಸ್ಟ್ 16 ರಂದೆ ಅನಾಥ ಶವ ಎಂದು ಪೊಲೀಸರು ಅಂತ್ಯಕ್ರಿಯೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸರು 8 ದಿನಗಳ ಹಿಂದೆಯೆ ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದಾರೆ. ಆದರೆ ಇವತ್ತು ಹೊಸಕೋಟೆ ಪೊಲೀಸರು ಆತನ ಕುಟುಂಬಸ್ಥರಿಗೆ ವಿಷಯ ಮುಟ್ಟಿಸಿದ್ದಾರೆ.
75 ನೇ ಸ್ವತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆ ಕಾಂಗ್ರೇಸ್ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಕೋಲಾರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದ 47 ವರ್ಷದ ಗೋವಿಂದಪ್ಪ ತೆರಳಿದ್ದ. ಆದ್ರೆ ಅಂದಿನಿಂದ ಆತನ ಸುಳಿವೇ ಸಿಕ್ಕಿರಲಿಲ್ಲ ನಿಗೂಡವಾಗಿ ಕಾಣೆಯಾಗಿದ್ದ, ಪಾದಯಾತ್ರೆಯಲ್ಲಿ ಭಾಗಿಯಾಗಿ ಮನೆಗೆ ವಾಪಸ್ ಬಾರದ ಹಿನ್ನೆಲೆ ಕುಟುಂಬಸ್ಥರು ಆತಂಕಗೊಂಡಿದ್ದರು. ಗೋವಿಂದಪ್ಪ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿತಲ್ಲದೆ, ಆತನ ಬರುವಿಕೆಗಾಗಿ ಕಾದು ಕುಳಿತಿದ್ದರು. ಎರಡು ಮೂರು ದಿನ ನೋಡಿ ಆಗಸ್ಟ್-18 ರಂದು ಕೋಲಾರ ಗ್ರಾಮಾಂತರ ಪೋಲೀಸ್ ಠಾಣೆಗೆ ಕಾಣೆಯಾಗಿರುವ ಕುರಿತು ದೂರು ನೀಡಲಾಗಿತ್ತು. ಈ ನಡುವೆ ಇಂದು ಹೊಸಕೋಟೆ ಪೊಲೀಸರು ಕಾಣಿಯಾಗಿದ್ದ ವ್ಯಕ್ತಿಯ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಾರೆ, ಹಾಗಾಗಿ ಕುಟುಂಬಸ್ಥರು ಶವ ನೀಡುವಂತೆ ಹೊಸಕೋಟೆ ಪೊಲೀಸ್ ಠಾಣೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಏನಾದರೂ ಮಾಡಿ ನಮಗೆ ಗೋವಿಂದಪ್ಪನವರ ಶವ ನೀಡುವಂತೆ ಮನವಿ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:46 pm, Thu, 25 August 22