AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಡಿವೈಡರ್​ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳೆದ ರಾತ್ರಿ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಐವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಭೀಕರ ಅಪಘಾತ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 09, 2025 | 11:21 AM

Share

ಕೋಲಾರ್​, ಜೂನ್​ 09: ನೂತನ ಚೆನೈ ಟು ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಮತ್ತೊಂದು ಭೀಕರ ಅಪಘಾತ (accident) ಸಂಭವಿಸಿದ್ದು, ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ (death) ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಎಡಗಿನಬೆಲೆ ಟೋಲ್​​ ಬಳಿ ನಡೆದಿದೆ. ರಾಜಾಸ್ಥಾನ ಮೂಲದ ಅಶೋಕ್(28) ಮತ್ತು ಮೋಹನ್ ಲಾಲ್(32) ಮೃತರು. ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರು ಟು ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ಸಾವು

ಬೆಂಗಳೂರು ಟು ಮೈಸೂರು ಹೆದ್ದಾರಿಯಲ್ಲಿ ಕಳೆದ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ ಇಬ್ಬರು ಸಾವನ್ನಪ್ಪಿದ್ದು, ಐವರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಮಸೂದ್ ಮತ್ತು ಅಯಾನ್ ಮೃತ ವ್ಯಕ್ತಿಗಳು.

ಇದನ್ನೂ ಓದಿ: ಸೂಟ್​​ಕೇಸ್​ನಲ್ಲಿ ಬಾಲಕಿ ಶವ ಕೇಸ್: ಲೈಂಗಿಕ ಕ್ರಿಯೆಗೆ ಸಹಕರಿಸಿಲ್ಲವೆಂದು ಹತ್ಯೆ, ಆರೋಪಿಗಳ ಬಂಧನ

ಇದನ್ನೂ ಓದಿ
Image
ನೂಕು ನುಗ್ಗಲಿನಲ್ಲಿ ಬಸ್ ಹತ್ತುವ ಮುನ್ನ ಹುಷಾರ್... ಓದಲೇ ಬೇಕಾದ ಸುದ್ದಿ!
Image
ಇಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಇಡೀ ಕುಟುಂಬಕ್ಕೆ ವಿಷ ಹಾಕಿದ್ಲು
Image
55ರ ಮಹಿಳೆ ಜತೆ ಅಕ್ರಮ ಸಂಬಂಧ, ಆಕೆಯ ಪತಿಯನ್ನೇ ಕೊಲೆ ಮಾಡಿದ 33 ರ ಯುವಕ
Image
ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿಯ ತಲೆಕಡಿದ ಪತಿ

ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು ಮತ್ತು ಪಾರ್ವತಿ ಎಂಬುವವರಿಗೆ ಗಾಯಗಳಾಗಿದ್ದು, ಬೆಂಗಳೂರು ಮತ್ತು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಅನುಮಾನಾಸ್ಪದ ರೀತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ

ಬೆಂಗಳೂರಿನ ಏರ್​ಪೋರ್ಟ್​​ನ ಮಾಲ್​ ಆಫ್ ಏಷಿಯಾ ಮುಂಭಾಗದ​ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಫ್ಲೈಓವರ್ ಮೇಲೆ ಬೈಕ್ ನಿಲ್ಲಿಸಿ ಬಳಿಕ ಕೆಳಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕೊಡಿಗೆಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಧ್ಯರಾತ್ರಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ

ಮಧ್ಯರಾತ್ರಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ಮಾಡಿಕೊಂಡಿರುವಂತಹ ಘಟನೆ ಕೋರಮಂಗಲ ಜ್ಯೋತಿನಿವಾಸ ಕಾಲೇಜು ಬಳಿ ಜೂನ್ 7 ರಂದು ಮಧ್ಯರಾತ್ರಿ‌ 1.30 ಸುಮಾರಿಗೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಓರ್ವ ಯುವಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಇಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಇಡೀ ಕುಟುಂಬಕ್ಕೆ ವಿಷ ಹಾಕಿದ್ಲು! ಮುಂದಾಗಿದ್ದೇನು?

ಕುಡಿದ ಮತ್ತಿನಲ್ಲಿ ಕಿರಿಕ್ ನಡೆದಿದೆ. ಮೇಲ್ನೋಟಕ್ಕೆ ಹುಡುಗಿ ವಿಚಾರವಾಗಿ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ಆರೋಪಿಗಳ ಪತ್ತೆಗೆ ಕೋರಮಂಗಲ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ಡೆಡ್ಲಿ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.