ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ಮಾರಾಮಾರಿ

| Updated By: ಆಯೇಷಾ ಬಾನು

Updated on: Feb 13, 2024 | 12:46 PM

ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ. ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಗಲಾಟೆ ನಡೆದಿದೆ. ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.

ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ಮಾರಾಮಾರಿ
ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ಮಾರಾಮಾರಿ
Follow us on

ಕೋಲಾರ, ಫೆ.13: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ (Kolar Congress Office) ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ (kothur Manjunath) ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ (KH Muniyappa) ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.

ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಪರಸ್ಪರ ಬಡಿದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಂದ ಜಿಲ್ಲಾ ಕಾಂಗ್ರೆಸ್‌‌ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆದಿದೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ. ಸಭೆಯಿಂದ ಹೊರ ನಡೆದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಮೇಲೆ ಹಲ್ಲೆ ನಡೆಸಲಾಗಿದೆ.

ಕಾಂಗ್ರೆಸ್ ವೀಕ್ಷಕರಾದ ರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರನ್ನ ನೇಮಿಸುವ ಸಲುವಾಗಿ ಸಭೆ ಕರೆಯಲಾಗಿತ್ತು. ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಗಲಾಟೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ