ಕೋಲಾರ ಶಾಸಕ-ಸಂಸದ ಜಟಾಪಟಿ: ಎಸ್ ಮುನಿಸ್ವಾಮಿ, ಎಸ್.ಎನ್ ನಾರಾಯಣಸ್ವಾಮಿ ವಿರುದ್ಧ FIR ದಾಖಲು
ಕೋಲಾರ ಸಂಸದ ಹಾಗೂ ಶಾಸಕರು ಪರಸ್ಪರರ ಮೇಲೆ ದೂರು ದಾಖಲಿಸಿದ್ದಾರೆ. ಸಂಸದ ಮುನಿಸ್ವಾಮಿ, ನಾರಾಯಣಸ್ವಾಮಿ ದೂರು ಹಿನ್ನೆಲೆ ಇಬ್ಬರ ವಿರುದ್ಧವೂ FIR ದಾಖಲಾಗಿದೆ. ಶಾಸಕರ ವಿರುದ್ದ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ದೂರು ಸಲ್ಲಿಸಿದ್ದು ಎಫ್ಐಆರ್ ದಾಖಲಾಗಿದೆ. ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದನ ಮೇಲೆ FIR ದಾಖಲಾಗಿದೆ.
ಕೋಲಾರ, ಸೆ.30: ಜಿಲ್ಲೆಯಲ್ಲಿ ಬಿಜೆಪಿ ಸಂಸದ, ಕಾಂಗ್ರೆಸ್ ಶಾಸಕ ನಡುವೆ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿ ಕೋಲಾರ ಸಂಸದ ಮುನಿಸ್ವಾಮಿ (S Muniswamy), ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ (SN Narayanaswamy) ಪರಸ್ಪರ ದೂರು-ಪ್ರತಿ ದೂರು ದಾಖಲಿಸಿದ್ದಾರೆ. ಕೋಲಾರದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ನಾರಾಯಣಸ್ವಾಮಿ ಹಾಗೂ ಸಂಸದ ಮುನಿಸ್ವಾಮಿ ಮಧ್ಯೆ ಜಗಳ ನಡೆದಿತ್ತು. ಅಲ್ಲದೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಮುನಿಸ್ವಾಮಿ ಅವರು ದೂರು ನೀಡಿದ್ದರು. ಸದ್ಯ ಈಗ ಇಬ್ಬರ ವಿರುದ್ಧವೂ FIR ದಾಖಲಾಗಿದೆ.
ಕೋಲಾರ ಸಂಸದ ಹಾಗೂ ಶಾಸಕರು ಪರಸ್ಪರರ ಮೇಲೆ ದೂರು ದಾಖಲಿಸಿದ್ದಾರೆ. ಸಂಸದ ಮುನಿಸ್ವಾಮಿ, ನಾರಾಯಣಸ್ವಾಮಿ ದೂರು ಹಿನ್ನೆಲೆ ಇಬ್ಬರ ವಿರುದ್ಧವೂ FIR ದಾಖಲಾಗಿದೆ. ಶಾಸಕರ ವಿರುದ್ದ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ದೂರು ಸಲ್ಲಿಸಿದ್ದು ಎಫ್ಐಆರ್ ದಾಖಲಾಗಿದೆ. ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದನ ಮೇಲೆ FIR ದಾಖಲಾಗಿದೆ.
ಇದನ್ನೂ ಓದಿ: ನಿಲ್ಲದ ಕಾಂಗ್ರೆಸ್ ಶಾಸಕ-ಬಿಜೆಪಿ ಸಂಸದರ ಜಟಾಪಟಿ: ನಾರಾಯಣಸ್ವಾಮಿ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದ ಮುನಿಸ್ವಾಮಿ
ಸೆ.25 ರಂದು ನಗರದ ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಸಂಸದ ಹಾಘೂ ಶಾಸಕರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದರು. ಎಸ್ಪಿ ನಾರಾಯಣ್ ಮಧ್ಯ ಪ್ರವೇಶದಿಂದ ಪರಿಸ್ಥಿತಿ ಹತೋಟಿಗೆ ಬಂದಿತ್ತು. ಸಂಸದ ಎಸ್.ಮುನಿಸ್ವಾಮಿ ಭೂಗಳ್ಳರನ್ನ ಅಕ್ಕ ಪಕ್ಕದಲ್ಲಿ ಕೂರಿಸಿಕೊಂಡು ಸಣ್ಣ ರೈತರಿಗೆ ಹೇಗೆ ನ್ಯಾಯ ಕೊಡಿಸುತ್ತೀರ ಎಂದು ಹೇಳಿದ ಮಾತು ರಂಪಾಟಕ್ಕೆ ಕಾರಣವಾಯಿತು. ಆಗ ನಿನ್ನನ್ನು ಇವತ್ತು ಮುಗಿಸುತ್ತೇನೆ ಎಂದು ಸಂಸದ ಮುನಿಸ್ವಾಮಿ ಹಲ್ಲೆಗೆ ಮುಂದಾಗಿದ್ದರು. ಎಸ್ಪಿ ನಾರಾಯಣ ಅವರು ಪರಿಸ್ಥಿತಿ ಅರಿತು ಅನಾಹುತ ತಡೆದಿದ್ದರು. ಜಿಲ್ಲಾ ಮಂತ್ರಿ ಭೈರತೀ ಸುರೇಶ್ ಮಧ್ಯ ಪ್ರವೇಶಿಸಿ ಸಂಸದರಿಂದ ಆಗಬಹುದಾದಂತಹ ಮಾರಣಾಂತಿಕ ಹಲ್ಲೆಯನ್ನು ತಪ್ಪಿಸಿದ್ದರು. ಸಂಸದ ಮುನಿಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಶಾಸಕ ಎಸ್.ಎನ್ ನಾರಾಯಣಸ್ವಾಮಿ ದೂರು ಸಲ್ಲಿಸಿದ್ದು ದೂರಿನ ಅನ್ವಯ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಸಂಸದ ಮುನಿಸ್ವಾಮಿ ಅವರು ಒಂದೇ ತಿಂಗಳಲ್ಲಿ ಎರಡನೇ ಬಾರಿ FIR ಹಾಕಿಸಿಕೊಂಡಿದ್ದಾರೆ. ಅರಣ್ಯ ಇಲಾಖೆ ತೆರವು ಕಾರ್ಯಾಚರಣೆ ವಿಚಾರದಲ್ಲಿ ಮುನಿಸ್ವಾಮಿ ವಿರುದ್ಧ FIR ಆಗಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ A1 ಆರೋಪಿಯಾಗಿ FIR ಆಗಿತ್ತು. ಮುನಿಸ್ವಾಮಿ ಅವರು ಈಗಾಗಲೇ ಎಸ್.ಎನ್ ನಾರಾಯಣಸ್ವಾಮಿ ಹಾಗೂ ಎಸ್ಪಿ ನಾರಾಯಣ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸೆ.27ರಂದು ರಾಜ್ಯಪಾಲರನ್ನು ಭೇಟಿ ಮಾಡಿ ದೂರು ನೀಡಿದ್ದರು.
ಕೋಲಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ