ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಶಾಸಕನ ವಿರುದ್ಧ ಎಫ್​ಐಆರ್ ದಾಖಲು

TV9 Digital Desk

| Edited By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 03, 2021 | 10:37 PM

ಮತದಾರರಿಗೆ ಆಮಿಷವೊಡ್ಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಶಾಸಕನ ವಿರುದ್ಧ ಎಫ್​ಐಆರ್ ದಾಖಲು
ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ವಿಧಾನ ಪರಿಷತ್​ನ 25 ಕ್ಷೇತ್ರಗಳಿಗೆ ಚುನಾವಣೆ ನಡೆಯುವ ದಿನ ಸಮೀಪಿಸುತ್ತಿರುವಂತೆ ಪ್ರಚಾರವೂ ಕಾವೇರಿದೆ. ಡಿ.10ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಈ ನಡುವೆ ಬಂಗಾರಪೇಟೆಯ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಯಶವಂತ್ ಕುಮಾರ್ ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಗೋಡೆ ಕುಸಿದು ದಂಪತಿ ಸಾವು ಕೋಲಾರ: ಮಳೆಯಿಂದಾಗಿ ಮನೆ ಗೋಡೆ ಕುಸಿದು ದಂಪತಿ ಸಾವನ್ನಪ್ಪಿರುವ ಘಟನೆ ಕೋಲಾರ ತಾಲ್ಲೂಕಿನ ಕೆ.ಮಲ್ಲಂಡಹಳ್ಳಿ‌ ಗ್ರಾಮದಲ್ಲಿ ನಡೆದಿದೆ. ನಾಗರಾಜಪ್ಪ (65) ಮತ್ತು ಲಕ್ಷ್ಮಮ್ಮ (60) ಮೃತರು. ಸೀನಪ್ಪ ಎಂಬುವವರಿಗೆ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಚಾರಣಾಧೀನ ಕೈದಿ ಸಾವು ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಾದೇವ ಬಿರಾದಾರ ಮೃತರು. ಮಹಾರಾಷ್ಟ್ರದ ಜತ್ತ ತಾಲೂಕಿನ ಸೂಸಲಾದ ಗ್ರಾಮದ ನಿವಾಸಿ ಬಿರಾದಾರ ಕೇಂದ್ರ ಕಾರಾಗೃಹದಲ್ಲಿ ಕುಸಿದು ಬಿದ್ದಿದ್ದರು ಎಂದು ಕೇಂದ್ರ ಕಾರಾಗೃಹ ಅಧೀಕ್ಷಕ ಐ.ಜಿ.ಮ್ಯಾಗೇರಿ ಮಾಹಿತಿ ನೀಡಿದ್ದಾರೆ.

ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ: ಸವಾರ ಸಾವು ಬೆಳಗಾವಿ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾಮದುರ್ಗ ತಾಲ್ಲೂಕು ಹಲಗತ್ತಿ ಗ್ರಾಮದ ಬಳಿ ನಡೆದಿದೆ. ಶ್ರೀಕಾಂತ್ ಕಾಳಗಿ (36) ಮೃತರು. ಇವರು ರಾಮದುರ್ಗದ ನಿಂಗಾಪುರ ಪೇಟೆಯ ನಿವಾಸಿ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಧಾರವಾಡ ವಿಧಾನ ಪರಿಷತ್ ಚುನಾವಣೆ; ಸಿಎಂ ಬೊಮ್ಮಾಯಿಗೆ ರಾಜಕೀಯ ನೆಲೆ ಕಲ್ಪಿಸಿದ ಕ್ಷೇತ್ರ ಈ ಬಾರಿ ಯಾರ ಕೈ ಹಿಡಿಯುತ್ತೆ? ಇದನ್ನೂ ಓದಿ: ವಿಧಾನ ಪರಿಷತ್ ಸದಸ್ಯತ್ವಕ್ಕೆ ಜೆಡಿಎಸ್​ ನಾಯಕ ಸಿಆರ್ ಮನೋಹರ್​ ರಾಜೀನಾಮೆ

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada