AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರಕ್ಕೆ ಹೊಂದಿಕೊಂಡಿರುವ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ; ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ

ಈ ಬೆಟ್ಟದಲ್ಲಿ ನವಿಲು,ಚಿರತೆ, ಜಿಂಕೆಗಳು ಸೇರಿದಂತೆ ಹಲವು ಪ್ರಾಣಿಗಳು ವಾಸವಿದೆ. ಇಷ್ಟಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸದೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ. ಕೋಲಾರ ಗ್ರಾಮಾಂತರ ರಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೋಲಾರಕ್ಕೆ ಹೊಂದಿಕೊಂಡಿರುವ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ; ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ
ಅಂತರಗಂಗೆ ಬೆಟ್ಟದಲ್ಲಿ ಬೆಂಕಿ
TV9 Web
| Updated By: preethi shettigar|

Updated on:Jan 19, 2022 | 10:56 PM

Share

ಕೋಲಾರ: ಜಿಲ್ಲೆಗೆ ಹೊಂದಿಕೊಂಡಿರುವ ಅಂತರಗಂಗೆ ಬೆಟ್ಟದಲ್ಲಿ(antara gange hills) ಬೆಂಕಿ ಕಾಣಿಸಿಕೊಂಡಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ (forest area) ಬೆಂಕಿಯ ಕೆನ್ನಾಲಿಗೆ ಸಿಲುಕಿ ಸುಟ್ಟು ಭಸ್ಮವಾಗಿದೆ. ಅಂತರಗಂಗೆ ಬೆಟ್ಟದಲ್ಲಿ ಆಕಸ್ಮಿಕ ಬೆಂಕಿ (Fire) ಕಾಣಿಸಿಕೊಂಡಿದ್ದು, ಕಿಡಿಗೇಡಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ತೆರಳಲು ಸಾಧ್ಯವಾಗದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಬೆಟ್ಟದಲ್ಲಿ ನವಿಲು,ಚಿರತೆ, ಜಿಂಕೆಗಳು ಸೇರಿದಂತೆ ಹಲವು ಪ್ರಾಣಿಗಳು ವಾಸವಿದೆ. ಇಷ್ಟಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸದೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ. ಕೋಲಾರ ಗ್ರಾಮಾಂತರ ರಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೈಸೂರು: ಥರ್ಮಾಕೋಲ್​ ಫ್ಯಾಕ್ಟರಿಯಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ

ಲಕ್ಷಾಂತರ ರೂಪಾಯಿ ಮೌಲ್ಯದ ಥರ್ಮಾಕೋಲ್ ಅಗ್ನಿಗಾಹುತಿಯಾದ ಘಟನೆ ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣ ಬಳಿ ನಡೆದಿದೆ. ಥರ್ಮಾಕೋಲ್​ ಫ್ಯಾಕ್ಟರಿಯಲ್ಲಿ ಕೂದಲೆಳೆ ಅಂತರದಲ್ಲಿ ಮೂವರು ಕೂಲಿಕಾರ್ಮಿಕರು ಪಾರಾಗಿದ್ದಾರೆ. ಸಂಜೆ ಸುಮಾರು 5 ಗಂಟೆ ವೇಳೆಗೆ ಶಾರ್ಟ್ ಸರ್ಕ್ಯೂಟ್ ಆಗಿದೆ. ಸದ್ಯ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದ ವಾಹನ ಬಂದಿದ್ದು, ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕೊಪ್ಪಳ: ಕಿಡಿಗೇಡಿಗಳ ಕೃತ್ಯಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯದ ಕಡಲೆ ಬೆಂಕಿಗಾಹುತಿ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ದ್ಯಾಂಪುರ ಗ್ರಾಮದಲ್ಲಿ ರಾಶಿ ಮಾಡಿಟ್ಟಿದ್ದ ಕಡಲೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ. ಈ ಘಟನೆಯಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಕಡಲೆ ಬೆಂಕಿಗಾಹುತಿಯಾಗಿದೆ. ಗ್ರಾಮದ ರೈತ ಮಹಿಳೆ ಪ್ರೇಮಾ ಎಂಬುವರಿಗೆ ಸೇರಿದ ಕಡಲೆ ಬೆಳೆ ಸುಟ್ಟು ಕರಕಲಾಗಿದೆ. ಹತ್ತು ಎಕರೆ ಜಮೀನಿನಲ್ಲಿ‌ ಬೆಳೆದಿದ್ದ ಕಡಲೆಗೆ ಬೆಂಕಿ ಹಾಕಲಾಗಿದೆ. ರಾತ್ರಿ ಸಮಯದಲ್ಲಿ ಕಿಡಿಗೇಡಿಗಳು ಕಡಲೆ ಬೆಳೆಗೆ ಬೆಂಕಿ ಹಚ್ಚಿರುವ ಶೆಂಕೆ ವ್ಯಕ್ತವಾಗಿದೆ. ಕುಕನೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Fire Accident: ಕೊಲ್ಕತ್ತಾದ ಸಿನಿಮಾ ಹಾಲ್​ನಲ್ಲಿ ಅಗ್ನಿ ಅವಘಡ; ಬೆಂಕಿ ಆರಿಸಿದ ಅಗ್ನಿಶಾಮಕ ವಾಹನಗಳು

ದಾವಣಗೆರೆಯಲ್ಲಿ ಮೊಬೈಲ್ ಟವರ್ ಜನರೇಟರ್​ಗೆ ಆಕಸ್ಮಿಕ ಬೆಂಕಿ! ಭಾರಿ ಪ್ರಮಾಣದಲ್ಲಿ ಆವರಿಸಿದ ಹೊಗೆ

Published On - 10:50 pm, Wed, 19 January 22