ಒಂದೇ ಕುಟುಂಬದ ಐವರ ಆತ್ಮಹತ್ಯೆ ಕೇಸ್; ಮಗು ಹಾಗೂ ಮಗು ಪಡೆದಿದ್ದ ಮಹಿಳೆಯನ್ನು ವಶಕ್ಕೆ ಪಡೆದ ಪೊಲೀಸ್
ಕೋಲಾರ ತಾಲೂಕಿನ ಕಲ್ಲಂಡೂರು ಗ್ರಾಮದ ಆರೋಪಿ ನಾಗಮಣಿ ಮತ್ತು ಮಗುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವೆಂಬರ್ 7 ರಂದು ಕೋಲಾರದ ಕಾರಂಜಿಕಟ್ಟೆಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಕೋಲಾರ: ಕಳೆದ ಕೆಲ ತಿಂಗಳ ಹಿಂದೆ ಕೋಲಾರದಲ್ಲಿ ನಡೆದ ಒಂದೇ ಕುಟುಂಬದ ಐವರ ಆತ್ಮಹತ್ಯೆ ಕೇಸ್ಗೆ ಸಂಬಂಧಿಸಿ ಮಾರಾಟವಾಗಿದ್ದ ಮಗು ಹಾಗೂ ಮಗು ಪಡೆದಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಲಾರ ತಾಲೂಕಿನ ಕಲ್ಲಂಡೂರು ಗ್ರಾಮದ ಆರೋಪಿ ನಾಗಮಣಿ ಮತ್ತು ಮಗುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವೆಂಬರ್ 7 ರಂದು ಕೋಲಾರದ ಕಾರಂಜಿಕಟ್ಟೆಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗು ಅಪಹರಣ ಪ್ರಕರಣ ದಾಖಲಾದ ಹಿನ್ನೆಲೆ ಕುಟುಂಬ ಹೆದರಿ ಆತ್ಮಹತ್ಯೆ ಮಾಡಿಕೊಂಡಿತ್ತು. ಪ್ರಕರಣದ ಪ್ರಮುಖ ಆರೋಪಿ ಗೀತಾ ಇನ್ನೂ ನಾಪತ್ತೆಯಾಗಿದ್ದಾರೆ.
ಸತ್ಯ ಹಾಗೂ ಸುಮಿತ್ರ ದಂಪತಿಯಿಂದ ಆರೋಪಿ ಗೀತಾ 9 ದಿನದ ಮಗುವನ್ನು ಪಡೆದಿದ್ದರು. ನಂತರ ಮಗುವನ್ನು ನಾಗಮಣಿಗೆ ಮಾರಾಟ ಮಾಡಿದ್ದರು. ಈ ಸಂಬಂಧ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ನಾಗಮಣಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣದ ಹಿನ್ನೆಲೆ ಏನು? ಕೋಲಾರ ತಾಲೂಕಿನ ಹೊನ್ನೇನಹಳ್ಳಿಯ ಸತ್ಯ ಹಾಗೂ ಸುಮಿತ್ರ ಎಂಬುವವರು ಪ್ರೀತಿಸಿ ಗುಟ್ಟಾಗಿ ಮದುವೆಯಾಗಿದ್ದರು. ಈ ನಡುವೆ ಅವರಿಗೆ ಒಂದು ಹೆಣ್ಣು ಮಗುವಾಗಿತ್ತು. ಆಗ ಮನೆಯವರಿಗೆ ವಿಷಯ ತಿಳಿಯುತ್ತದೆ ಎನ್ನುವ ಭಯದಲ್ಲಿ ಮಗುವನ್ನು ತಮ್ಮ ಪರಿಚಯಸ್ಥರಾದ ಕಾರಂಜಿಕಟ್ಟೆ ನಿವಾಸಿ ಗೀತಾ ಎನ್ನುವವರಿಗೆ ಸತ್ಯ ಹಾಗೂ ಸುಮಿತ್ರ ಅಕ್ಟೋಬರ್ 18 ರಂದು ಕೊಟ್ಟಿದ್ದರು. ಈ ವೇಳೆ ಗೀತಾರ ಜೊತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬದ ಪುಷ್ಪಾ ಎಂಬಾಕೆ ಹೋಗಿದ್ದರು ಎನ್ನುವ ಕಾರಣಕ್ಕೆ ಸತ್ಯ ಹಾಗೂ ಸಮಿತ್ರ ಮಗು ಅಪಹರಣ ಪ್ರಕರಣದಲ್ಲಿ ಪುಷ್ಪಾ ಅವರ ಹೆಸರನ್ನೂ ಉಲ್ಲೇಖಿಸಿದ್ದಾರೆ. ಈ ಪರಿಣಾಮವಾಗಿ ಹೆದರಿದ ಪುಷ್ಪಾ ಹಾಗೂ ಅವರ ಕುಟುಂಬದವರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದನ್ನೂ ಓದಿ: ಮಗು ಅಪರಹಣ ಪ್ರಕರಣ; ಕೋಲಾರದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರು ಸಾವು