ಕೋಲಾರ: ದೇಗುಲದಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ; ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ

| Updated By: ganapathi bhat

Updated on: Jan 01, 2022 | 10:49 PM

ಆಡಳಿತ ಮಂಡಳಿ ಪ್ರಸಾದ ರೂಪದಲ್ಲಿ ಚಿತ್ರಾನ್ನ ಹಾಗೂ ಕೇಸರಿಬಾತ್ ನೀಡಿತ್ತು. ಇದೀಗ ಸ್ಥಳದಲ್ಲಿ ಟಿಹೆಚ್ಒ, ಶ್ರೀನಿವಾಸಪುರ ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಅಸ್ವಸ್ಥಗೊಂಡವರಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೋಲಾರ: ದೇಗುಲದಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ; ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ
ದೇಗುಲದಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ
Follow us on

ಕೋಲಾರ: ದೇವಾಲಯದಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬೀರಗಾನಹಳ್ಳಿಯ ಗಂಗಮ್ಮ ದೇವಾಲಯದಲ್ಲಿ ನಡೆದಿದೆ. ಪ್ರಸಾದ ಸೇವಿಸಿ 12 ಮಕ್ಕಳು ಸೇರಿ 30ಕ್ಕೂ ಹೆಚ್ಚು ಜನ ಅಸ್ವಸ್ಥ ಆಗಿದ್ದಾರೆ. ಹೊಸವರ್ಷಾಚರಣೆ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿತ್ತು. ಪ್ರಸಾದವಾಗಿ ಚಿತ್ರಾನ್ನ ಹಾಗೂ ಕೇಸರಿಬಾತ್ ಮಾಡಲಾಗಿತ್ತು. ಆಡಳಿತ ಮಂಡಳಿ ಪ್ರಸಾದ ರೂಪದಲ್ಲಿ ಚಿತ್ರಾನ್ನ ಹಾಗೂ ಕೇಸರಿಬಾತ್ ನೀಡಿತ್ತು. ಇದೀಗ ಸ್ಥಳದಲ್ಲಿ ಟಿಹೆಚ್ಒ, ಶ್ರೀನಿವಾಸಪುರ ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಅಸ್ವಸ್ಥಗೊಂಡವರಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕುಖ್ಯಾತ ಕಳ್ಳ ಎಸ್ಕೇಪ್​ ಕಾರ್ತಿಕ್​ನನ್ನ ಬಂಧಿಸಿದ ಪೊಲೀಸರು
ಕುಖ್ಯಾತ ಕಳ್ಳ ಎಸ್ಕೇಪ್​ ಕಾರ್ತಿಕ್​ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರಿಂದ ಕಳ್ಳನ ಬಂಧನ ಮಾಡಲಾಗಿದೆ. 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ‌ ಭಾಗಿಯಾಗಿರುವ ಆರೋಪದಲ್ಲಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಈ ಹಿಂದೆ 10ಕ್ಕೂ ಹೆಚ್ಚು ಬಾರಿ ಬಂಧಿತನಾಗಿದ್ದ ಕಾರ್ತಿಕ್​, ಬೆಂಗಳೂರು, ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡ್ತಿದ್ದ. ಇದೀಗ ಆತನನ್ನು ಬಂಧಿಸಲಾಗಿದ್ದು ಬಂಧಿತನಿಂದ 11 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ 5 ಮನೆಗಳಲ್ಲಿ ಕಳ್ಳತನ ನಡೆದಿತ್ತು. ಘಟನೆ ಸಂಬಂಧ ಆರೋಪಿಯನ್ನು ಸೆರೆ ಹಿಡಿಯಲಾಗಿದೆ.

ರಾಮನಗರ: ದೇವರ ಮೆರವಣಿಗೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ
ದೇವರ ಮೆರವಣಿಗೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ ಉಂಟಾದ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಟಿ.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಟಿ.ಹೊಸಳ್ಳಿಯಲ್ಲಿ ಮಾರಮ್ಮ ದೇವಿ ಮೆರವಣಿಗೆ ವೇಳೆ ಘಟನೆ ನಡೆದಿದೆ. ಹಾರೋಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರೋ ಸೇತುವೆ ಮೇಲೆ ಅಪಘಾತ; ಮಹಿಳೆ ಸಾವು
ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದ ಹೊರ ಭಾಗದಲ್ಲಿರೋ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರೋ ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ಕೃಷಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಏಸರ್ ವಾಹನಕ್ಕೆ 407 ಗೂಡ್ಸ್ ವಾಹನ ಡಿಕ್ಕಿ ಆಗಿದೆ. ಏಸರ್ ವಾಹನದಲ್ಲಿದ್ದ ಕೃಷಿ ಕಾರ್ಮಿಕ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರೆ ಏಳು ಜನ ಕಾರ್ಮಿಕರಿಗೆ ಗಾಯವಾಗಿದೆ. ಮೃತ ಮಹಿಳೆಯ ಹೆಸರು ವಿಳಾಸ ಪತ್ತೆಯಾಗಿಲ್ಲ. ಗಾಯಾಳುಗಳು ಬಾಗಲಕೋಟೆಯ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಏಸರ್​ನಲ್ಲಿ ಪ್ರಯಾಣ ಮಾಡುತ್ತಿದ್ದವರು ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಹೊನ್ಯಾಳ‌ ಗ್ರಾಮದವರು ಎನ್ನಲಾಗಿದೆ. ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Crime News: ಹಿಟಾಚಿ ಹರಿದು ಮಗು ಮೃತ್ಯು, ಮನೆಗೆಲಸದ ಯುವತಿ ಅನುಮಾನಾಸ್ಪದ ಸಾವು, ಮೂವರು ದರೋಡೆಕೋರರ ಬಂಧನ

ಇದನ್ನೂ ಓದಿ: ಹಾಸ್ಟೆಲ್​ನ ಕುಡಿಯುವ ನೀರಿಗೆ ವಿಷ ಹಾಕಲು ಯತ್ನಿಸಿದ ಪ್ರಕರಣ; ಅಪರಾಧಿಗೆ 7 ವರ್ಷ ಜೈಲು, 10 ಸಾವಿರ ರೂ. ದಂಡ

Published On - 10:13 pm, Sat, 1 January 22