ಕೋಲಾರ: ಶ್ರೀಗಂಧದ ಮರ ಕಳವಿಗೆ ಬಂದಿದ್ದ ಖದೀಮರ ಮೇಲೆ ಫೈರಿಂಗ್

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಶಿಪುರ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರ ಕಳ್ಳತನಕ್ಕೆ ಬಂದಿದ್ದ ಆರು ಜನರ ಪೈಕಿ ಇಬ್ಬರ ಕಾಲಿಗೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ನರಳಾಡುತ್ತಿದ್ದ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಮತ್ತೋರ್ವ ಪರಾರಿಯಾಗಿದ್ದಾನೆ.

ಕೋಲಾರ: ಶ್ರೀಗಂಧದ ಮರ ಕಳವಿಗೆ ಬಂದಿದ್ದ ಖದೀಮರ ಮೇಲೆ ಫೈರಿಂಗ್
ಗುಂಡೇಟು ತಿಂದ ಭತ್ಯಪ್ಪ
Follow us
| Updated By: ವಿವೇಕ ಬಿರಾದಾರ

Updated on:Jul 02, 2024 | 12:09 PM

ಕೋಲಾರ, ಜುಲೈ 02: ಮುಳಬಾಗಿಲು (Mulabagilu) ತಾಲೂಕಿನ ಕಾಶಿಪುರ ಅರಣ್ಯ ಪ್ರದೇಶದಲ್ಲಿದ್ದ ಶ್ರೀಗಂಧ ಕಳ್ಳತನಕ್ಕೆ ಯತ್ನಿಸಿದವರ ಕಾಲಿಗೆ ಅರಣ್ಯ ಇಲಾಖೆ (Forest Department) ಸಿಬ್ಬಂದಿ ಗುಂಡು ಹಾರಿಸಿದ್ದಾರೆ (Firing). ಮುಳಬಾಗಿಲು ತಾಲೂಕಿನ ತಾಯಲೂರು ಗ್ರಾಮದ ಭತ್ಯಪ್ಪ ಎಂಬುವನ ಕಾಲಿಗೆ ಗುಂಡು ತಾಗಿದೆ. ಮತ್ತೋರ್ವ ಪರಾರಿಯಾಗಿದ್ದಾನೆ. ಇಂದು (ಜು.02) ಮುಂಜಾನೆ 5 ಗಂಟೆ ಸುಮಾರಿಗೆ ಭತ್ಯಪ್ಪ ಆಂಧ್ರ ಪ್ರದೇಶದ ಐವರೊಂದಿಗೆ ಜೊತೆಗೂಡಿ ಶ್ರೀಗಂಧ ಕಳ್ಳತನಕ್ಕೆ ಬಂದಿದ್ದನು. ಶ್ರೀಗಂಧ ಮರ ಕಳ್ಳತನ ಮಾಡುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಗಾರ್ಡ್ ಅನಿಲ್ ಬಂದಿದ್ದಾರೆ. ಬಳಿಕ, ಶ್ರೀಗಂಧ ಕಳ್ಳತನವನ್ನು ತಡೆಯಲು ಮುಂದಾಗಿದ್ದು, ಶರಣಾಗುವಂತೆ ಆರೋಪಿಗಳಿಗೆ ಸೂಚಿಸಿದ್ದಾರೆ.

ಆದರೆ, ಭತ್ಯಪ್ಪ ಮತ್ತು ಈತನ ಸಹಚರ ಗಾರ್ಡ್​​​​ ಅನಿಲ್ ಅವರ​​​ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಗಾರ್ಡ್​​ ಅನಿಲ್​ ಭತ್ಯಪ್ಪ ಹಾಗೂ ಈತನ ಸಹಚರನ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟು ತಿಂದ ಭತ್ಯಪ್ಪನ ಸಹಚರ ಪರಾರಿಯಾಗಿದ್ದಾನೆ. ಗುಂಡೇಟಿನಿಂದ ನರಳಾಡುತ್ತಿದ್ದ ಭತ್ಯಪ್ಪನನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆ ಕೆರೆಯಂಗಳದಲ್ಲಿನ ಮರಗಳು ಕಳ್ಳರ ಪಾಲು

ಮುಳಬಾಗಿಲು ತಾಲೂಕಿನ ಜಮ್ಮನಹಳ್ಳಿ ದೊಡ್ಡಕೆರೆಯ ದಡದಲ್ಲಿರುವ ಮರಗಳು ಕಳ್ಳಕಾಕರ ಪಾಲಾಗುತ್ತಿವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ 40 ಎಕರೆ ಕೆರೆಯಂಗಳದಲ್ಲಿ ಮರಗಳನ್ನು ಬೆಳೆಸಲಾಗಿದೆ. ಬೇಸಿಗೆ ಕಾಲದಲ್ಲಿ ಮರಗಳು ಸಂಪೂರ್ಣ ಒಣಗಿ ಹೋಗಿವೆ. ಕೆರೆಯಂಗಳವೂ ಕಾಲಿಯಾಗಿದೆ. ಹೀಗಾಗಿ, ಕಳ್ಳರು ರಾತ್ರೋರಾತ್ರಿ ಮರಗಳನ್ನು ಕಳುವು ಮಾಡಿಕೊಂಡು ಹೋಗುತ್ತಿದ್ದಾರೆ. ಬೆಲೆಬಾಳುವ ಮರ ಕಳ್ಳರ ಪಾಲಾಗುತ್ತಿರುವ ಹಿನ್ನೆಲೆಯಲ್ಲಿ ಕೂಡಲೆ ಮರಗಳನ್ನು ಕಟಾವು ಮಾಡುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋಲಾರ ರೈತರನ್ನ ಸಂಕಷ್ಟಕ್ಕೆ ಸಿಲುಕಿಸಿದ ಬಿಂಗಿ ರೋಗ! ಮಣ್ಣು ಪಾಲಾಗುತ್ತಿರವ ಟೊಮ್ಯಾಟೊ ಬೆಳೆ

ಮಂಚೂರಿ, ಕಬಾಬ್ ಸೆಂಟರ್​ಗಳ ಮೇಲೆ‌ ಅಧಿಕಾರಿಗಳ ದಾಳಿ

ಕೆಜಿಎಫ್ ನಗರದಲ್ಲಿನ ರಾಬರ್ಟ್ ಸನ್ ಪೇಟೆಯಲ್ಲಿರುವ ಗೋಬಿ ಮಂಚೂರಿ, ಕಬಾಬ್ ಸೆಂಟರ್​ಗಳ ಮೇಲೆ‌ ಕೆಜಿಎಫ್ ನಗರಸಭೆ ಅಧಿಕಾರಿಗಳಿಂದ ದಾಳಿ ಮಾಡಿದ್ದಾರೆ. ಸರ್ಕಾರದ ಆದೇಶದಂತೆ ನಿಷೇಧಿತ ಕಲರ್ ಬಳಸದಂತೆ ಸೂಚನೆ ನೀಡಿದರು. ಕಲರ್‌‌ ಬಳಸುವ ಕಬಾಬ್, ಗೋಬಿಮಂಚೂರಿ, ಸಿಹಿ ತಿಂಡಿ ತಯಾರಿಕಾ ಅಂಗಡಿಗಳಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದರು. ಕೆಜಿಎಫ್ ನಗರಸಭೆ ಪೌರಾಯುಕ್ತ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಯಿತು. ದಾಳಿಯಲ್ಲಿ ಕಲರ್ ಬಳಸಿ ತಯಾರಿಸಿದ್ದ ತಿಂಡಿ ಹಾಗೂ ಅಂಗಡಿಯಲ್ಲಿದ್ದ ಮಾರಕ ಕಲರ್​ ಅನ್ನು ವಶಕ್ಕೆ ಪಡೆದುಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:09 pm, Tue, 2 July 24

ತಾಜಾ ಸುದ್ದಿ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ