ಕೋಲಾರದಲ್ಲಿ 20ಕ್ಕೂ ಹೆಚ್ಚು ಜೆಸಿಬಿಗಳ ಅಬ್ಬರ, 15 ವರ್ಷಗಳ ಬಳಿಕ ಅತಿದೊಡ್ಡ ತೆರವು ಕಾರ್ಯಚರಣೆ

Edited By:

Updated on: Aug 23, 2023 | 8:43 AM

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿಗಳು ಅಬ್ಬರಿಸಿವೆ. ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಬಳಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ.

ಕೋಲಾರ, (ಆಗಸ್ಟ್ 23): ಜಿಲ್ಲೆಯ ಶ್ರೀನಿವಾಸಪುರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿಗಳು ಅಬ್ಬರಿಸಿವೆ. ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಬಳಿ ಅರಣ್ಯ ಭೂಮಿ ಒತ್ತುವರಿ(Encroachment) ತೆರವು ಕಾರ್ಯಾಚರಣೆ ನಡೆದಿದೆ. ಪೊಲೀಸ್ ಬಂದೋಬಸ್ತ್​ನಲ್ಲಿ ಡಿಎಫ್ಓ ಏಡುಕೊಂಡಲ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಜೆಸಿಬಿಗಳಿಂದ ತೆರವು ಕಾರ್ಯಾಚರಣೆ ನಡೆದಿದ್ದು, ಒಂದೇ ದಿನದಲ್ಲಿ ಸುಮಾರು 120 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಹದಿನೈದು ವರ್ಷಗಳ ನಂತರ ಇದು ಅತಿದೊಡ್ಡ ಕಾರ್ಯಾಚರಣೆಯಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: Aug 23, 2023 08:42 AM
Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More