ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಶಾಸಕ ಸಿ.ವೆಂಕಟೇಶಪ್ಪ ನಿಧನ

ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್​ನ ಹಿರಿಯ ಮುಖಂಡ ಸಿ.ವೆಂಕಟೇಶಪ್ಪ ಅವರಿಗೆ ಶುಕ್ರವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೋಲಾರದ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಶಾಸಕ ಸಿ.ವೆಂಕಟೇಶಪ್ಪ ನಿಧನ
ಮಾಜಿ ಶಾಸಕ ಸಿ. ವೆಂಕಟೇಶಪ್ಪ
Follow us
| Updated By: ವಿವೇಕ ಬಿರಾದಾರ

Updated on:Nov 11, 2023 | 8:13 AM

ಕೋಲಾರ ನ.11: ಬಂಗಾರಪೇಟೆ (Bangarpete) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಕಾಂಗ್ರೆಸ್​ನ ಹಿರಿಯ ಮುಖಂಡ ಸಿ.ವೆಂಕಟೇಶಪ್ಪ ಅವರಿಗೆ ಕಳೆದ ರಾತ್ರಿ (ನ.10) ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೋಲಾರದ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸಿ.ವೆಂಕಟೇಶಪ್ಪ ಅವರು ಅಪಾರ ಅಭಿಮಾನಿಗಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ರವಾನೆ ಮಾಡಲಾಗಿದೆ. ವೆಂಕಟೇಶಪ್ಪ ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಬಲಿಗರು ಹಾಗೂ ಸಾರ್ವಜನಿಕರು‌ ಪಾರ್ಥೀವ ಶರೀರದ ದರ್ಶನ ಪಡೆದಿದ್ದಾರೆ.

ಸಿ.ವೆಂಕಟೇಶಪ್ಪ ಬಂಗಾರಪೇಟೆ ತಾಲೂಕಿನ ಬುವನಹಳ್ಳಿ ಗ್ರಾಮದವರು. ಇವರು ಮೂರು ಬಾರಿ ಶಾಸಕರಾಗಿದ್ದರು. ಆಗಿನ ಬೇತಮಂಗಲ ವಿಧಾನಸಭಾ ಕ್ಷೇತ್ರದಿಂದ 1978, 1983, 1999 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಿ. ವೆಂಕಟೇಶಪ್ಪ ಅವರಿಗೆ 73 ವರ್ಷ ವಯಸ್ಸಾಗಿತ್ತು. ನವೆಂಬರ್ 9 ರಂದು ಅವರ ಹುಟ್ಟು ಹಬ್ಬ ಆಚರಣೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:40 am, Sat, 11 November 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ