ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್ ಎಲ್ ಜಾಲಪ್ಪ: ಸ್ವಗ್ರಾಮದಲ್ಲಿ ನಾಳೆ ಅಂತ್ಯಕ್ರಿಯೆ
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ(96) ಇಂದು ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ನಿಧನರಾದರು. ನೇತ್ರದಾನ ಮಾಡಿರುವ ಕೇಂದ್ರದ ಮಾಜಿ ಸಚಿವ ಜಾಲಪ್ಪ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ(96) ಇಂದು ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ನಿಧನರಾದರು. ನೇತ್ರದಾನ ಮಾಡಿರುವ ಕೇಂದ್ರದ ಮಾಜಿ ಸಚಿವ ಜಾಲಪ್ಪ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕೋಲಾರದ ಟಮಕದಲ್ಲಿನ ದೇವರಾಜ ಅರಸು ಮೆಡಿಕಲ್ ಕಾಲೇಜು ಕ್ಯಾಂಪಸ್ ನಲ್ಲಿ ಜಾಲಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ರಾತ್ರಿ ಹತ್ತು ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಬಳಿಕ ಇಂದು ರಾತ್ರಿಯೇ ಜಾಲಪ್ಪ ಪಾರ್ಥೀವ ಶರೀರವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಜಾಲಪ್ಪನವರ ಸ್ವಗ್ರಾಮ ತೂಬಗೆರೆ ತೆಗೆದುಕೊಂಡು ಹೋಗಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತೂಬಗೆರೆ ಆರ್ ಎಲ್ ಜಾಲಪ್ಪ ಅವರ ಸ್ವಗ್ರಾಮ.
ಅನಾರೋಗ್ಯದಿಂದ ವಿಧಿವಶರಾದ ಹಿರಿಯ ರಾಜಕಾರಣಿ ಜಾಲಪ್ಪ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ನಾಳೆ ಸಂಜೆ ನಾಲ್ಕು ಗಂಟೆಗೆ ತೂಬುಗೆರೆ ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಇಂಜಿನಿಯರಿಂಗ ಕ್ಯಾಂಪಸ್ ನಲ್ಲಿ , ಅಂತಿಮ ವಿಧಿವಿಧಾನ ನಡೆಯಲಿದ್ದು ಈಡಿಗ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಆರ್.ಎಲ್.ಜಾಲಪ್ಪ ವಿಧಿವಶ ಹಿನ್ನೆಲೆ, ಕೋಲಾರ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ಕಿಶೋರ್ ಬಾಬು ದೇವರಾಜ ಅರಸು ಮೆಡಿಕಲ್ ಕಾಲೇಜು ಕ್ಯಾಂಪಸ್ ಗೆ ಆಗಮಿಸಿದ್ದು ಅಂತಿಮ ದರ್ಶನಕ್ಕೆ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ.
ಕಳೆದ ನಲವತ್ತು ದಿನಗಳಿಂದ ಬಹು ಅಂಗಾಂಗ ವೈಫಲ್ಯಗಳಿಂದ ಬಳಲುತ್ತಿದ್ದ ಜಾಲಪ್ಪ, ವೆಂಟಿಲೇಟರ್ ನಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಾಕಾರಿಯಾಗದೆ ಕೊನೆಯುಸಿರೆಳೆದಿದ್ದಾರ. ಆಕ್ಟೋಬರ್ 19, 1925 ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ಆರ್ ಲಕ್ಷ್ನೀನಾರಯಣಪ್ಪ ಜಾಲಪ್ಪ ಜನಿಸಿದ್ದರು.
ರಾಜಕೀಯದೆಡೆಗೆ ನಡೆದು ಬಂದ ದಾರಿ 1980 ರಲ್ಲಿ ದೇವರಾಜ್ ಅರಸು ಕಾಲದಲ್ಲಿ ಮೆಲ್ಮನೆ ಸದಸ್ಯರಾಗಿ ರಾಜಕೀಯ ಎಂಟ್ರಿಯಾದ ಅವರು 1983, 1985, 1989 ರಲ್ಲಿ ಮೂರು ಭಾರಿ ದೊಡ್ಡಬಳ್ಳಾಪುರ ಕ್ಷೇತ್ರದಿಂದ ಮೂರು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ 1991, 1996, 2004 ವರೆಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೂರು ಭಾರಿ ಸಂಸದರಾಗಿ ಆಯ್ಕೆಯಾಗಿ ರಾಜ್ಯದಲ್ಲಿ ಸಹಕಾರ, ಗೃಹ ಸಚಿವರಾಗಿ ಸೇವೆ ಸಲ್ಲಿದ್ದರು. ಅಲ್ಲದೆ ಕೇಂದ್ರದಲ್ಲಿ ಜವಳಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ ಅವರು ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಹಕಾರ ಸಚಿವರಾಗಿ ಕೆಲಸ ಮಾಡಿದ್ದರು ಜೆಹೆಚ್ ಪಟೇಲ್ ಸಂಪುಟದಲ್ಲಿ ಗೃಹ ಸಚಿವರಾಗಿ ಕೆಲಸ ನಿರ್ವಹಿಸಿದ್ದ ಅವರು ದೇವೆಗೌಡರು ಪ್ರಧಾನಿಯಾಗಿದ್ದ ವೇಳೆ ಜವಳಿ ಸಚಿವರಾಗಿ ಸೇವೆ ಸಲ್ಲಿಸಿದ ಕೀರ್ತಿ ಜಾಲಪ್ಪ ಅವರಿಗೆ ಅಲ್ಲುತ್ತದೆ. ನಾಲ್ವರು ಪುತ್ರಿಯರು, ಮೂವರು ಪುತ್ರರನ್ನ ಅಗಲಿರುವ ಆರ್.ಎಲ್ ಜಾಲಪ್ಪ, ಹಲವು ಶಿಕ್ಷಣ ಸಂಸ್ಥೆಗಳು ಹುಟ್ಟು ಹಾಕಿದ್ದ ಕೀರ್ತಿ ಜಾಲಪ್ಪ ಅವರದ್ದಾಗಿದೆ. 96 ವರರ್ಷಗಳ ತುಂಬು ಜೀವನ ನಡೆಸಿ ಇಂದು ನಿಧನಾರಧ ಹಿರಿಯ ರಾಜಕಾರಣಿ ಆರ್ ಎಲ್ ಜಾಲಪ್ಪ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ.
ಇದನ್ನೂ ಓದಿ:
RL Jalappa: ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಆರ್ಎಲ್ ಜಾಲಪ್ಪ ನಿಧನ
Published On - 8:28 pm, Fri, 17 December 21