9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು
ಬಾಲಕಿಯನ್ನ ಪುಸಲಾಯಿಸಿ ಸಾಮೂಹಿಕ ಅತ್ಯಾಚಾರ ವೆಸಗಿರುವ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಪೊಲೀಸರು ವಿದ್ಯಾರ್ಥಿನಿ ಹೇಳಿಕೆ ಪಡೆದಿದ್ದಾರೆ.
ಕೋಲಾರ: 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯನ್ನ ಪುಸಲಾಯಿಸಿ ಸಾಮೂಹಿಕ ಅತ್ಯಾಚಾರ(Gang rape) ವೆಸಗಿರುವ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು(Accused) ಪೊಲೀಸರು(Karnataka police) ವಶಕ್ಕೆ ಪಡೆದಿದ್ದಾರೆ. ಸದ್ಯ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಪೊಲೀಸರು ವಿದ್ಯಾರ್ಥಿನಿ ಹೇಳಿಕೆ ಪಡೆದಿದ್ದಾರೆ.
ಆ ಬಾಲಕಿ ತನ್ನ ಹುಟ್ಟು ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಿಲ್ಲ ಅನ್ನೋ ಕಾರಣಕ್ಕೆ ಮನೆಯಲ್ಲಿ ಮುನಿಸಿಕೊಂಡು ಪಟ್ಟಣಕ್ಕೆ ಹೋಗಿ, ಅವಳು ತಾನು ಕೆಲಸಕ್ಕೆ ಸೇರಿ ಹೊಸ ಬಟ್ಟೆ ಖರೀದಿ ಮಾಡಬೇಕೆಂದು ಹೋಗಿದ್ದಳು, ಆದರೆ ಅಲ್ಲಿ ಆಗಿದ್ದೇ ಬೇರೆ ನಾಲ್ಕು ಜನ ಕಾಮುಕರು ಕೆಲಸ ಕೊಡಿಸುವುದಾಗಿ ನಂಬಿಸಿ ಬಾಲಕಿಯ ಮೇಲೆ ತಮ್ಮ ಕಾಮತೃಷೆ ತೀರಿಸಿಕೊಂಡರು.
ತನ್ನ ಬಳಿ ಇದ್ದ 20 ರೂಪಾಯಿ ತೆಗೆದುಕೊಂಡು ಪಟ್ಟಣಕ್ಕೆ ಬಂದಿದ್ದ ಬಾಲಕಿ ಬಸ್ ನಿಲ್ದಾಣದ ಬಳಿ ಇದ್ದಳು. ಇಡೀ ದಿನ ಬಸ್ ನಿಲ್ದಾಣದಲ್ಲೇ ಕಳೆದಿದ್ದ ಬಾಲಕಿಗೆ ಸಂಜೆ ವೇಳೆ ನಾಲ್ಕು ಜನ ಕಾಮುಕರು ಬಂದು ಮಾತನಾಡಿಸಿದರು. ಆಕೆ ತನಗೆ ಕೆಲಸ ಬೇಕು ಎಂದಾಗ ಕೆಲಸ ಕೊಡಿಸುವ ಆಸೆ ತೋರಿಸಿ ಹಳ್ಳಿಯೊಂದರ ನಿರ್ಜನ ಪ್ರದೇಶ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದರು. ಗ್ರಾಮಸ್ಥರೊಬ್ಬರು ಇವರನ್ನು ಹಿಡಿದು ಕಾಮಸಮುದ್ರ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದರು. ಪೊಲೀಸರು ನಾಲ್ವರನ್ನು ಬಂಧಿಸಿ ಬಾಲಕಿಯನ್ನು ವಿಚಾರಣೆ ನಡೆಸಿದಾಗ ಅಸಲಿ ವಿಷಯ ಬೆಳಕಿಗೆ ಬಂತು.
ತುಮಕೂರು: ಮದುವೆಯಾಗಿ ವಂಚನೆ, ಮಗು ಬೇಡವೆಂದು ಗಲಾಟೆ: ಪಿಡಿಓ ವಿರುದ್ಧ ದೂರು ಮದುವೆಯಾಗಿ ಗರ್ಭಿಣಿಯಾದ ನಂತರ ನನ್ನ ಪತಿ ವಂಚಿಸಿದ್ದಾರೆ ಎಂದು ಆರೋಪಿಸಿ ಟಿ. ನರಸೀಪುರ ತಾಲೂಕಿನ ಮಹಿಳೆಯೊಬ್ಬರು ಕುಣಿಗಲ್ ಪೊಲೀಸ್ ಠಾಣೆ ಗೆ ದೂರು ನೀಡಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ (Kunigal) ತಾಲೂಕಿನ ತೆರೆದಕುಪ್ಪೆ ಗ್ರಾಮ ಪಂಚಾಯತ್ನ ಪಿಡಿಓ (PDO) ಸುದರ್ಶನ್ ವಿರುದ್ಧ ದೂರು ನೀಡಿದ್ದು, 2011 ರಲ್ಲಿ ದೇವರಾಯನದುರ್ಗ ಬೆಟ್ಟದಲ್ಲಿ ನನ್ನ ವಿವಾಹವಾಗಿತ್ತು. 2016 ರಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹದ ನೊಂದಣಿಯಾಗಿದೆ. 2021 ರಲ್ಲಿ ಮದುವೆಯಾಗಿರುವ ವಿಚಾರ ನನ್ನ ಪತಿಯ ತಾಯಿ ಮತ್ತು ಸಹೋದರರಿಗೆ ತಿಳಿದಾಗ ಅವರು ಆಕ್ಷೇಪಿಸಿದ್ದಾರೆ. ಬಳಿಕ ಸುದರ್ಶನ್ ಮನೆಗೆ ಬರುವುದನ್ನ ನಿಲ್ಲಿಸಿದ್ದರು ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ಸುದರ್ಶನ್ ರನ್ನ ಹುಡುಕಿಕೊಂಡು ಗ್ರಾಮ ಪಂಚಾಯತ್ ಗೆ ಜನವರಿ 27 ರಂದು ಭೇಟಿ ನೀಡಿದ್ದು ಅವರು ಅಲ್ಲಿ ಇರಲಿಲ್ಲ. ಇದರಿಂದ ಬೇಸತ್ತು ಕುಣಿಗಲ್ ದೊಡ್ಡಕೆರೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದೆ. ಜೊತೆಯಲ್ಲಿ ಇದ್ದ ಮಗು ಕೂಗಿಕೊಂಡ ಕಾರಣ ದಾರಿಯಲ್ಲಿ ಹೋಗುತ್ತಿದ್ದವರು ನನ್ನ ಪಾರು ಮಾಡಿದ್ದರು. ಬಳಿಕ ಚಿಕಿತ್ಸೆ ಪಡೆದು ತಂದೆ ಮನೆಗೆ ಹೋಗಿ ಆರೋಗ್ಯ ಸುಧಾರಣೆ ಬಳಿಕ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದೇನೆ ಅಂತಾ ತಿಳಿಸಿದ್ದಾರೆ.
ಇನ್ನು, ಗರ್ಭಿಣಿಯಾದಗಿಂದಲೂ ಮಗು ಬೇಡವೆಂದು ಗಲಾಟೆ ಮಾಡಿ ಸುದರ್ಶನ್ ಬೈದು ಹೊಡೆಯುತ್ತಿದ್ದರು ಅಂತಾ ಮಹಿಳೆ ಆರೋಪಿಸಿದ್ದಾರೆ. ಹತ್ತು ದಿನಗಳಿಂದ ಮನೆಗೆ ಬಾರದೆ ಮಾನಸಿಕ ಹಿಂಸೆ ನೀಡಿರುವ ಪತಿ ಸುದರ್ಶನ್, ಅತ್ತೆ ಹಾಗೂ ನಾದಿನಿ ವಿರುದ್ಧ ಕ್ರಮ ವಹಿಸುವಂತೆ ಮಹಿಳೆ ದೂರು ನೀಡಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆ ಯಲ್ಲಿ ದೂರು ನೀಡಲಾಗಿದೆ.
ಇದನ್ನೂ ಓದಿ: ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ: ಜಮೀರ್ ಅಹ್ಮದ್ ಖಾನ್ ವಿವಾದಾತ್ಮಕ ಹೇಳಿಕೆ
Published On - 11:36 am, Sat, 19 February 22