AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ದ್ವೇಷ ಹಿನ್ನೆಲೆ ಗ್ಯಾಂಗ್ ವಾರ್; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ

ಹಳೇ ದ್ವೇಷಕ್ಕೆ ಗ್ಯಾಂಗ್ವಾರ್ ನಡೆದು ಕುಮಾರ್ ಅಲಿಯಾಸ್ ರಾಜಕುಮಾರ್ ಮೃತಪಟ್ಟಿದ್ದಾರೆ. ಹಾಗೂ ಅಜಯ್ ಸೇರಿದಂತೆ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹಳೇ ದ್ವೇಷ ಹಿನ್ನೆಲೆ ಗ್ಯಾಂಗ್ ವಾರ್; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ
ಪ್ರಾತಿನಿದಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Oct 24, 2021 | 11:25 AM

Share

ಕೋಲಾರ: ಹಳೇ ದ್ವೇಷ ಹಿನ್ನೆಲೆ ತಡರಾತ್ರಿ ಲಾಂಗ್ ಹಿಡಿದು ಗುಂಪೊಂದು ಗ್ಯಾಂಗ್ವಾರ್ ಮಾಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನ ಇಟಿ ಬ್ಲಾಕ್ನಲ್ಲಿ ತಡರಾತ್ರಿ ಗ್ಯಾಂಗ್ವಾರ್ ನಡೆದಿದೆ. ಘಟನೆಯಲ್ಲಿ ಕುಮಾರ್ ಅಲಿಯಾಸ್ ರಾಜಕುಮಾರ್(28) ಬರ್ಬರ ಹತ್ಯೆಯಾಗಿದೆ.

ಹಳೇ ದ್ವೇಷಕ್ಕೆ ಗ್ಯಾಂಗ್ವಾರ್ ನಡೆದು ಕುಮಾರ್ ಅಲಿಯಾಸ್ ರಾಜಕುಮಾರ್ ಮೃತಪಟ್ಟಿದ್ದಾರೆ. ಹಾಗೂ ಅಜಯ್ ಸೇರಿದಂತೆ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶ್ರೀಕಾಂತ್, ಜಯಕಾಂತ್, ಮೆರಿಯನ್, ಲಾರೆನ್ಸ್, ಸರವಣ, ರಮೇಶ್, ವೆಂಕಟೇಶ್ ಗುಂಪಿನಿಂದ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಶ್ರೀಕಾಂತ್ ಗ್ಯಾಂಗ್ಗಾಗಿ ಹುಡುಕಾಟ ನಡೆಯುತ್ತಿದೆ.

ಭೀಮಾತೀರದಲ್ಲಿ ಮರ್ಯಾದೆ ಹತ್ಯೆ ಭೀಮಾತೀರದಲ್ಲಿ ಮರ್ಯಾದೆ ಹತ್ಯೆ ಆರೋಪ ಕೇಳಿ ಬಂದಿದೆ. ಯುವತಿಯನ್ನು ಪ್ರೀತಿಸಿದ್ದಕ್ಕೆ ಅನ್ಯ ಕೋಮಿನ ಯುವಕನ ಕೊಲೆ ನಡೆದಿದೆ. ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದ ರವಿ ನಿಂಬರಗಿ(32) ಕೊಲೆಯಾದ ಯುವಕ. ಈ ಸಂಬಂಧ ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆಲಮೇಲ ಪೊಲೀಸರು ಯುವತಿಯ ಪೋಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸದ್ಯ ಗ್ರಾಮದ ಬಾವಿಯಲ್ಲಿ ರವಿ ನಿಂಬರಗಿ ಶವ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಶವ ಹೊರತೆಗೆದಿದ್ದಾರೆ. ಅನ್ಯಕೋಮಿನ ಯುವತಿ ಪ್ರೀತಿಸುತ್ತಿದ್ದ ಹಿನ್ನೆಲೆ ರವಿ ನಿಂಬರಗಿಯನ್ನು ಯುವತಿ ಮನೆಯವರು ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರವಿ ಹತ್ಯೆಗೈದು ಶವವನ್ನು ಬಾವಿಯಲ್ಲಿ ಎಸೆದು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಹಳೇ ದ್ವೇಷ ಸಾವಿನಲ್ಲಿ ಅಂತ್ಯ; ರೋಹಿಣಿ ಕೋರ್ಟ್​​ನಲ್ಲಿ ಹತ್ಯೆಯಾದ ಗ್ಯಾಂಗ್​​ಸ್ಟರ್ ಜಿತೇಂದರ್ ಗೋಗಿ ಯಾರು?

Published On - 11:09 am, Sun, 24 October 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು