ಕೋಲಾರದಲ್ಲಿ ನಿರಂತರ ಮಳೆ: ಕುಸಿದು ಬಿದ್ದ ಸರ್ಕಾರಿ ಶಾಲೆ ಗೋಡೆ, ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಭೇಟಿ
ಶಾಲೆಯಲ್ಲಿ ನಾಲ್ಕು ಕೊಠಡಿಗಳಿದ್ದು, ಇದರಲ್ಲಿ 2 ಹಳೆಯದಾಗಿ ಕುಸಿಯುವ ಭೀತಿ ಎದುರಾಗಿದ್ದರೆ, ಉಳಿದ ಎರಡು ಮಾತ್ರ ಚನ್ನಾಗಿದೆ. ಇನ್ನೂ ಅದೃಷ್ಠವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ, ಕೊಠಡಿಗಳಿಲ್ಲದೆ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣ ವಾಗಿತ್ತು.
ಕೋಲಾರ: ಕೋಲಾರದಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸರ್ಕಾರಿ ಶಾಲೆಗಳ ಗೋಡೆಗಳು ಕುಸಿಯಲಾರಂಭಿಸಿವೆ. ಇದರಿಂದ ಜಿಲ್ಲೆಯ 300 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಕಟ್ಟಡಗಳನ್ನು ದುರಸ್ಥಿ ಮಾಡಬೇಕಿದ್ದು, ಆತಂಕದಲ್ಲೆ ವಿದ್ಯಾರ್ಥಿಗಳು ಪಾಠ ಕೇಳಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.
ಕೋಲಾರ ತಾಲ್ಲೂಕಿನ ದೊಡ್ಡ ಹಸಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಡೆ ಕುಸಿದು ಬಿದ್ದಿದೆ. 1942ರಲ್ಲಿ ನಿರ್ಮಾಣವಾಗಿರುವ ಶಾಲಾ ಕಟ್ಟಡ ಸಾಕಷ್ಟು ಹಳೆಯದಾದ ಹಿನ್ನೆಲೆ ನಿರಂತರ ಮಳೆಯ ಪರಿಣಾಮ ಸರ್ಕಾರಿ ಶಾಲೆ ಗೋಡೆ ಕುಸಿದು ಬಿದ್ದಿದೆ. ಇನ್ನೂ ಶಾಲೆಯಲ್ಲಿ ನಾಲ್ಕು ಕೊಠಡಿಗಳಿದ್ದು, ಇದರಲ್ಲಿ 2 ಹಳೆಯದಾಗಿ ಕುಸಿಯುವ ಭೀತಿ ಎದುರಾಗಿದ್ದರೆ, ಉಳಿದ ಎರಡು ಮಾತ್ರ ಚನ್ನಾಗಿದೆ. ಇನ್ನೂ ಅದೃಷ್ಠವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ, ಕೊಠಡಿಗಳಿಲ್ಲದೆ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣ ವಾಗಿತ್ತು. ಇನ್ನೂ ಕೋಲಾರ ತಹಶೀಲ್ದಾರ್ ನಾಗರಾಜ್ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಕೂಡಲೇ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿ ಮಕ್ಕಳೊಂದಿಗೆ ಊಟ ಸವಿದು ನಂತರ ಕೆಲ ಕಾಲ ಮಕ್ಕಳೊಂದಿಗೆ ಕಾಲ ಕಳೆದರು. ಇನ್ನು ಶಿಕ್ಷಣ ಇಲಾಖೆ ಉಪನಿರ್ದೇಶಕರು ಸ್ಥಳಕ್ಕೆ ಬೇಟಿ ನೀಡಿ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡೋದಕ್ಕೆ ಮುಂದಾಗಿದ್ದಾರೆ. ಇನ್ನೂ ನಮಗೆ ಇಲಾಖೆ ಅಥವಾ ಜನ ಪತಿನಿಧಿಗಳು ಪರ್ಯಾಯ ವ್ಯವಸ್ಥೆ ಜೊತೆಗೆ ನೂತನ ಕಟ್ಟಡ ಮಾಡಿಕೊಟ್ರೆ ಅನುಕೂಲವಾಗುತ್ತೆ ಅನ್ನೋದು ಗ್ರಾಮಸ್ಥರ ಮಾತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 3:35 pm, Wed, 7 September 22