Siddaramaiah: ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಾನ್ ಹರಿಶ್ಚಂದ್ರರಾ? ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ
HD Kumaraswamy: ನನ್ನ ಪಕ್ಷವನ್ನ ದುಡ್ಡಿಗಾಗಿ ಅಡಮಾನ ಇಟ್ಟಿಲ್ಲ ನಾನು. ಜೆಡಿಎಸ್ ಪಕ್ಷವನ್ನ ಹಣಕ್ಕಾಗಿ ಎಲ್ಲೂ ಅಡ ಇಟ್ಟಿಲ್ಲ, ಜನರ ಒಳಿತಿಗಾಗಿ ಇರುವ ಪಕ್ಷ ನಮ್ಮದು. ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ದ ಎಚ್.ಡಿ. ಕುಮಾರಸ್ವಾಮಿ ಹರಿಹಾಯ್ದರು.
ಕೋಲಾರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅರೇನು ಮಹಾನ್ ಹರಿಶ್ಚಂದ್ರರಾ? ಅವರಿಂದ ರಾಜಕೀಯ ಮಾಡೋದನ್ನು ನಾನು ಕಲಿಯಬೇಕಾಗಿಲ್ಲ ಎಂದು ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರು ಏನ್ ಮಹಾನ್ ಹರಿಶ್ಚಂದ್ರರಾ (Satya Harishchandra)? ಬೆಂಗಳೂರು ನಗರದಲ್ಲಿ 400 ಎಕರೆ ರೀಡೋ(Re Do) ಮಾಡಿದ್ರಲ್ಲಾ, ಕೆಂಪಣ್ಣ ಅಯೋಗ ವರದಿ ಮಾಡಿದ್ರಲ್ಲ, ಏನಾಯ್ತು ಅದು? ಲೂಟಿ ಹೊಡೆದ್ರಲ್ಲಾ 400-500 ಕೋಟಿ ರೂಪಾಯಿನಾ, ಅವರೇನ್ ಸಾಚಾನ? ಸಿದ್ದರಾಮಯ್ಯ ಅವರಿಂದ ರಾಜಕೀಯ ಮಾಡೋದನ್ನ ನಾನು ಕಲಿಯಬೇಕಿಲ್ಲ ಎಂದು ಎಚ್. ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
2008ರ ಚುನಾವಣೆಯಲ್ಲಿ ನೀವೆ ಯಡಿಯೂರಪ್ಪ ಅವರ ಬಳಿ ಹಣ ಪಡೆದಿದ್ದೀರಾ? ಇತಿಹಾಸ ಇದೆ, ನಿಮ್ಮ ಜಾಯಮಾನ ಅದು. 2008ರಲ್ಲಿ ಸಿದ್ದರಾಮಯ್ಯ ಆಪ್ತರೊಬ್ಬರು ಹಣ ಪಡೆದಿದ್ದಾರೆ. ನಿಮ್ಮ ಆಪ್ತರು ಎಷ್ಟು ಹಣ ಪಡೆದಿದ್ದರು. ಆಪರೇಷನ್ ಕಮಲದಲ್ಲಿ ಹಣವನ್ನು ಪಡೆದಿದ್ದರು. ಯಾವ ಯಾವ ಸಂಧರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಅಂತಾ ಗೊತ್ತು. ನನ್ನ ಪಕ್ಷದ ಬಗ್ಗೆಯಾಗಲಿ, ನನ್ನ ಬಗ್ಗೆಯಾಗಲಿ ಲಘುವಾಗಿ ಮಾತಾಡಿದ್ರೆ ಹುಷಾರ್ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.
ಚುನಾವಣೆಯಲ್ಲಿ ಎಷ್ಟು ಜೇಬಿಗೆ ಬಿಟ್ಟರೆ, ಎಷ್ಟು ಖರ್ಚು ಮಾಡಿದ್ರಿ? ನನ್ನ ಪಕ್ಷವನ್ನ ದುಡ್ಡಿಗಾಗಿ ಅಡಮಾನ ಇಟ್ಟಿಲ್ಲ ನಾನು. ಜೆಡಿಎಸ್ ಪಕ್ಷವನ್ನ ಹಣಕ್ಕಾಗಿ ಎಲ್ಲೂ ಅಡ ಇಟ್ಟಿಲ್ಲ, ಜನರ ಒಳಿತಿಗಾಗಿ ಇರುವ ಪಕ್ಷ ನಮ್ಮದು. ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ದ ಎಚ್.ಡಿ. ಕುಮಾರಸ್ವಾಮಿ ಹರಿಹಾಯ್ದರು.
(hd kumaraswamy criticises siddaramaiah in malur)