ಆಶ್ಲೆ ಇಂಟರ್ ನ್ಯಾಷನಲ್ ಸ್ಕೂಲ್ ವಿರುದ್ಧ ಮತಾಂತರ ಯತ್ನ ಆರೋಪ, ಶಾಲೆ ವಿರುದ್ದ ಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ

ಆಶ್ಲೆ ಇಂಟರ್ ನ್ಯಾಷನಲ್ ಸ್ಕೂಲ್ನ ಆಡಳಿತ ಮಂಡಳಿ ಬೈಬಲ್ ನಲ್ಲಿರುವ ಪದ್ಯವನ್ನು ಮಕ್ಕಳ‌ ಪೋಷಕರಿಗೆ ಕಳುಹಿಸಿ ಮಕ್ಕಳಿಗೆ ಹೇಳಿಕೊಡುವಂತೆ ತಿಳಿಸಿದ್ದಾರೆ. ಈ ಮೂಲಕ ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕ್ಷೇತ್ರ ಶಿಕ್ಷಣಾಧಿಕಾಗಳಿಗೆ ದೂರು ನೀಡಿದ್ದಾರೆ.

ಆಶ್ಲೆ ಇಂಟರ್ ನ್ಯಾಷನಲ್ ಸ್ಕೂಲ್ ವಿರುದ್ಧ ಮತಾಂತರ ಯತ್ನ ಆರೋಪ, ಶಾಲೆ ವಿರುದ್ದ ಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ
ಆಶ್ಲೆ ಇಂಟರ್ ನ್ಯಾಷನಲ್ ಸ್ಕೂಲ್
Follow us
TV9 Web
| Updated By: ಆಯೇಷಾ ಬಾನು

Updated on:Dec 16, 2021 | 12:18 PM

ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಆಶ್ಲೆ ಇಂಟರ್ ನ್ಯಾಷನಲ್ ಸ್ಕೂಲ್ನ ಆಡಳಿತ ಮಂಡಳಿಗೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಎಚ್ಚರಿಕೆ ನೀಡಿರುವ ಘಟನೆ ನಡೆದಿದೆ. ಶಾಲೆಯ ಪ್ರಾರ್ಥನೆಯಲ್ಲಿ ಬೈಬಲ್ನ ಪದ್ಯವನ್ನು ಹೇಳಿಕೊಡಲಾಗುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಶಾಲೆಯ ಆಡಳಿತ ಮಂಡಳಿಯವರನ್ನು ಪ್ರಶ್ನೆ ಮಾಡಿ ಎಚ್ಚರಿಕೆ ನೀಡಿದ್ದಾರೆ.

ಆಶ್ಲೆ ಇಂಟರ್ ನ್ಯಾಷನಲ್ ಸ್ಕೂಲ್ನ ಆಡಳಿತ ಮಂಡಳಿ ಬೈಬಲ್ ನಲ್ಲಿರುವ ಪದ್ಯವನ್ನು ಮಕ್ಕಳ‌ ಪೋಷಕರಿಗೆ ಕಳುಹಿಸಿ ಮಕ್ಕಳಿಗೆ ಹೇಳಿಕೊಡುವಂತೆ ತಿಳಿಸಿದ್ದಾರೆ. ಈ ಮೂಲಕ ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕ್ಷೇತ್ರ ಶಿಕ್ಷಣಾಧಿಕಾಗಳಿಗೆ ದೂರು ನೀಡಿದ್ದಾರೆ. ಇದೇ ವೇಳೆ ಶಾಲಾ ಆಡಳಿತ ಮಂಡಳಿಯವರು ಮಕ್ಕಳಿಗೆ ಇಂಗ್ಲಿಷ್ ಸುಲಭವಾಗಿ ಕಲಿಸಲು ಈ ರೀತಿ ಪದ್ಯಗಳನ್ನು ಹೇಳಿಕೊಡಲಾಗುತ್ತಿದೆ ಎಂದು ತಿಳಿಸಿದೆ. ಸದ್ಯ ಶಾಲೆಯಲ್ಲಿ ಧರ್ಮ ಪ್ರಚಾರ ಹಾಗೂ ಮತಾಂತರಕ್ಕೆ ಯತ್ನಿಸಿದ ಆರೋಪದಡಿಯಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಶಾಲೆಯ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ.

Asle international school 1

ಆಶ್ಲೆ ಇಂಟರ್ ನ್ಯಾಷನಲ್ ಸ್ಕೂಲ್ ಮೇಲೆ ಮತಾಂತರಕ್ಕೆ ಯತ್ನ ಆರೋಪ, ಶಾಲೆಯ ವಿರುದ್ದ ಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ

ಕೈಗಾರಿಕಾ ಪ್ರದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಆತಂಕ ಕೈಗಾರಿಕಾ ಪ್ರದೇಶಗಳು ಬರದ ನಾಡಿನ ಜನರಿಗೆ ಉದ್ಯೋಗ ಕೊಟ್ಟಂತ ಉದ್ಯೋಗದಾತ. ಈ ಪ್ರದೇಶ ಸಾವಿರಾರು ಜನರ ಜೀವನಕ್ಕೆ ದಾರಿದೀಪ ಮಾಡಿಕೊಟ್ಟಿವೆ. ಆದರೆ ಇತ್ತೀಚೆಗೆ ಅದೇ ಕೈಗಾರಿಕಾ ಪ್ರದೇಶಗಳು ಆತಂಕದ ಕೇಂದ್ರವಾಗಿ ಮಾರ್ಪಟ್ಟಿದೆ. ಇದಕ್ಕೆ ಕಾರಣ ಕಾರ್ಮಿಕರನ್ನೇ ರಾಬರಿ ಮಾಡುವ ಗುಂಪೊಂದು ಇಲ್ಲಿ ವಾಸ್ತವ್ಯ ಹೂಡಿದ್ದು, ಕೈಗಾರಿಕಾ ಪ್ರದೇಶ ಭಯ ಹುಟ್ಟಿಸುವಂತಾಗಿದೆ. ಕೋಲಾರ ತಾಲೂಕು ನರಸಾಪುರ ಹಾಗೂ ವೇಮಗಲ್ ಕೈಗಾರಿಕಾ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅದರಲ್ಲೂ ರಾತ್ರಿ ವೇಳೆಯಲ್ಲಿ ಒಬ್ಬಂಟಿಯಾಗಿ ಓಡಾಡುವ ಕಾರ್ಮಿಕರನ್ನು ಅಡ್ಡಗಟ್ಟಿ ಮೊಬೈಲ್, ಒಡವೆಗಳು ಹಾಗೂ ಹಣ ದೋಚುವ ಗುಂಪು ಕಾಣಿಸಿಕೊಳ್ಳುತ್ತಿದೆ. ಸದ್ಯ ಹಣ ಕಳೆದುಕೊಂಡ ಹತ್ತಾರು ಜನರು ಭಯದಲ್ಲಿ ಪೊಲೀಸ್ ಠಾಣೆಗೆ ದೂರು ನೀಡದೆ ತಮ್ಮ ತಮ್ಮ ಕಂಪನಿಗಳ ಮುಖ್ಯಸ್ಥರ ಗಮನಕ್ಕೆ ತಂದಿದ್ದಾರೆ.

ಹೊರ ರಾಜ್ಯದ ಕಾರ್ಮಿಕರು ಹಾಗೂ ನಿರುದ್ಯೋಗಿ ಕಾರ್ಮಿಕರು ಕೃತ್ಯ ಎಸಗಿರುವ ಶಂಕೆ! ಎರಡೂ ಕೈಗಾರಿಕಾ ಪ್ರದೇಶಗಳಲ್ಲಿ ಬಹುತೇಕ 50 ರಷ್ಟು ಹೊರ ರಾಜ್ಯದ ಕಾರ್ಮಿಕರೇ ಹೆಚ್ಚಾಗಿದ್ದು, ಕೆಲಸ ಕಳೆದುಕೊಂಡವರು, ಹೊಸಬರು, ಹಣಕ್ಕಾಗಿ ಇಂತಹ ಕೃತ್ಯ ಎಸಗುತ್ತಿದ್ದಾರೆ ಎನ್ನುವ ಅನುಮಾನ ಶುರುವಾಗಿದೆ. ಅಲ್ಲದೆ ಮಹಿಳೆಯರು ಮತ್ತು ಯುವತಿಯರು ಕೂಡಾ ಕೆಲಸಕ್ಕೆ ಬಂದು ವಾಪಸ್ ಮನೆಗೆ ತೆರಳುವ ವೇಳೆ ಬೇರೆ ಅನಾಹುತಗಳಾದರೆ ಹೇಗೆ ಎನ್ನುವ ಆತಂಕ ಶುರುವಾಗಿದೆ. ಹಾಗಾಗಿ ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿಕೊಂಡು ಹೋಗುವ ಕಾರ್ಮಿಕರು ಕೈಗಾರಿಕಾ ಪ್ರದೇಶದಲ್ಲಿ ಭಯದಲ್ಲೇ ಓಡಾಡುವಂತಾಗಿದೆ.

ಇದನ್ನೂ ಓದಿ: ಉದ್ಯೋಗಿಗಳಿಗೆ 2 ಉಚಿತ ಮನೆಗಳನ್ನು ನೀಡುವುದಾಗಿ ಘೋಷಿಸಿದ ಕಂಪನಿ; ಇದಕ್ಕೆ ಮೀಸಲಿಟ್ಟ ಹಣವೆಷ್ಟು?

Published On - 12:06 pm, Thu, 16 December 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ