AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಮರ್ಯಾದ ಹತ್ಯೆ: ತಂದೆಯಿಂದಲೇ ಮಗಳ ಕೊಲೆ

ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ತಂದಯೇ ಹೆತ್ತ ಮಗಳನ್ನು ಕೊಲೆ ಮಾಡಿ, ನಂತರ ಪೋಷಕರು ಎಲ್ಲರೂ ಸೇರಿ ಅಂತ್ಯಸಂಸ್ಕಾರ ಮಾಡಿದ್ದಾರೆ. ಈ ಬಗ್ಗೆ ಗ್ರಾಮದಲ್ಲಿ ಗುಸು ಗುಸು ಮಾತು ಶುರುವಾಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ.

ಕೋಲಾರದಲ್ಲಿ ಮರ್ಯಾದ ಹತ್ಯೆ: ತಂದೆಯಿಂದಲೇ ಮಗಳ ಕೊಲೆ
ಕೊಲೆಯಾದ ರಮ್ಯಾ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Aug 27, 2023 | 10:30 AM

Share

ಕೋಲಾರ: ಅನ್ಯಜಾತಿ ಯುವಕನನ್ನು ಪ್ರೀತಿಸುತ್ತಿದ್ದಕ್ಕೆ ಮಗಳನ್ನೇ ತಂದೆ (Father) ಕೊಲೆ ಮಾಡಿರುವ ಘಟನೆ ಕೋಲಾರ (Kolar) ತಾಲೂಕಿನ ತೊಟ್ಲಿ ಗ್ರಾಮದಲ್ಲಿ ನಡೆದಿದೆ. ರಮ್ಯಾ (19) ಕೊಲೆಯಾದ ಯುವತಿ. ತಂದೆ ವೆಂಕಟೇಶಗೌಡ ಕೊಲೆ ಆರೋಪಿ. ಕೋಲಾರ ತಾಲೂಕು ತೊಟ್ಲಿ ಗ್ರಾಮದವರಾದ ವೆಂಕಟೇಶಗೌಡ ಅವರ ಮಗಳು ರಮ್ಯಾ ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ತಿಳಿದು ಪೋಷಕರು ಎಷ್ಟೇ ಬುದ್ದಿ ಹೇಳಿದರೂ ರಮ್ಯಾ ಮಾತು ಕೇಳಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ತಂದೆ ವೆಂಕಟೇಶಗೌಡ ಆ.25 ರಂದು ಮಗಳು ರಮ್ಯಾಳನ್ನು ಕೊಲೆ ಮಾಡಿದ್ದಾನೆ. ನಂತರ ಪೋಷಕರು ಎಲ್ಲರೂ ಸೇರಿ ಅಂತ್ಯಸಂಸ್ಕಾರ ಮಾಡಿದ್ದಾರೆ.

ಇದನ್ನೂ ಓದಿ: ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ; ಚಾಕು ಇರಿತ

ಪ್ರಕರಣದ ಕುರಿತು ಗ್ರಾಮದಲ್ಲಿ ಗುಸು ಗುಸು ಮಾತು ಶುರುವಾಗಿದೆ. ಈ ವಿಚಾರವನ್ನು ತಿಳಿದ ಪೊಲೀಸರು ವೆಂಕಟೇಶಗೌಡನನ್ನು ಕೆರದು ವಿಚಾರಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಂದು (ಆ.27) ಇಂದು ಬೆಳ್ಳಂಬೆಳಿಗ್ಗೆ ತಹಶಿಲ್ದಾರ್ ಹರ್ಷವರ್ಧನ್ ಅವರು ರಮ್ಯಾರನ್ನು ಹೂತಿದ್ದ ಸ್ಥಳಕ್ಕೆ ಶವವನ್ನು ಹೊರತೆಗೆಸಿ, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿ ಮೇಲೆ ಕಲ್ಲು ಎತ್ತು ಹಾಕಿ ಕೊಲೆ

ಶಿವಮೊಗ್ಗ: ವ್ಯಕ್ತಿ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಟಿಪ್ಪು ನಗರದ ಏಳನೇ ತಿರುವಿನಲ್ಲಿ ನಡೆದಿದೆ. ಸುಮಾರು 57 ವರ್ಷದ ವ್ಯಕ್ತಿ ಕೊಲೆಯಾಗಿದ್ದಾರೆ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಚಲಿಸುತ್ತಿದ್ದ ಕ್ಯಾಂಟರ್ ಕೆಳಗೆ‌ ಬಿದ್ದು ವ್ಯಕ್ತಿ ಆತ್ಮಹತ್ಯೆ.

ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕ್ಯಾಂಟರ್​​ನ​​ ಚಕ್ರದ ಕೆಳಗೆ ಬಿದ್ದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ಬಳಿ ತಡರಾತ್ರಿ ನಡೆದಿದೆ.  ಅಪರಿಚಿತ ವ್ಯಕ್ತಿ ಆತ್ಮಹತ್ಯೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸುಮಾರು 45 ರಿಂದ 50 ವರ್ಷದ ಅಪರಿಚಿತ ವ್ಯಕ್ತಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮೃತನ ಗುರುತು ಹಾಗೂ ಆತ್ಮಹತ್ಯೆಗೆ ಕಾರಣ ಪತ್ತೆಯಾಗಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

Published On - 10:08 am, Sun, 27 August 23