ಬೈರಗಾನಪಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರಿ ಗಲಾಟೆ; ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

16 ಜನ ಸದಸ್ಯರಲ್ಲಿ ಕಾಂಗ್ರೆಸ್ 8 ಹಾಗೂ ಜೆಡಿಎಸ್ 8 ಸಮಬಲ ಹೊಂದಿದ್ದವು. ಆದ್ರೆ ಕಾಂಗ್ರೆಸ್ನ ಸದಸ್ಯನೋರ್ವ ಜೆಡಿಎಸ್ ಗೆ ದ್ರೋಹ ಮಾಡಿದ ಎಂದು ಆಕ್ರೋಶ ಉಂಟಾಗಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ನಡೆಸುತ್ತಿದ್ದಾರೆ.

ಬೈರಗಾನಪಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರಿ ಗಲಾಟೆ; ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ
ಬೈರಗಾನಪಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರಿ ಗಲಾಟೆ
Follow us
TV9 Web
| Updated By: ಆಯೇಷಾ ಬಾನು

Updated on:Jun 24, 2022 | 6:03 PM

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ಬೈರಗಾನಪಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ(Byraganapalli Grama Panchayat Election) ಭಾರಿ ಗೊಂದಲ, ಗದ್ದಲ ನಡೆದಿದೆ. ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷಗಳು ಸಮಬಲ ಕಾಯ್ದುಕೊಂಡ ಹಿನ್ನೆಲೆ ಲಾಟರಿ‌ ಮೂಲಕ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು. ಈ ವೇಳೆ ಕಾಂಗ್ರೆಸ್(Congress) ಜಯ ಗಳಿಸಿದೆ. ಈ ಹಿನ್ನೆಲೆ ಜೆಡಿಎಸ್(JDS) ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿರುವ ಘಟನೆ ನಡೆದಿದೆ.

ರಾಯಲಸೀಮ ರಾಜಕಾರಣಕ್ಕೆ ಹೆಸರಾದ ಶ್ರೀನಿವಾಸಪುರದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಜಿದ್ದಿನ ರಾಜಕಾರಣ ಆರಂಭವಾಗಿದೆ. ಕಾಂಗ್ರೆಸ್‌ನ ಸ್ವಾಮಿ ಹಾಗೂ ಜೆಡಿಎಸ್‌ನ ರೆಡ್ಡಿ ಬಣದ ಮಧ್ಯೆ ಚುನಾವಣೆ ಕಾವು ಜೋರಾಗಿದೆ. ಇನ್ನೂ ಚುನಾವಣೆಗೆ ಒಂದು ವರ್ಷ ಇರುವಾಗಲೆ ರಾಜಕೀಯ ಗಲಾಟೆ ಆರಂಭವಾಗಿದೆ. ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿಯಾದ ಹಿನ್ನೆಲೆ ಜೆಡಿಎಸ್ ಗಲಾಟೆ ಆರಂಭ ಮಾಡಿದ್ದು ಬಳಿಕ ಪರಸ್ಪರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ, ಮೊಹಮ್ಮದ್ ನಲಪಾಡ್ ಮತ್ತು ಪೊಲೀಸರ ನಡುವೆ ಜಟಾಪಟಿ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಬೈರಗಾನಪಲ್ಲಿ ಗ್ರಾಮ ಪಂಚಾಯತಿ ಚುನಾವಣೆ ವೇಳೆ ಗೊಂದಲ ಉಂಟಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಕಾಂಗ್ರೆಸ್ ಮುಖಂಡರ 1 ಎರ್ಟಿಗಾ ಕಾರ್ ಮೇಲೆ ಕಲ್ಲು ತೂರಾಟ ನಡೆದಿದ್ದು, ಒಂದು ಬೈಕ್ ಜಖಂ ಆಗಿದೆ. ಇನ್ನೂ 16 ಜನ ಸದಸ್ಯ ಬಲ ಹೊಂದಿರುವ ಬೈರಗಾನಪಲ್ಲಿ ಗ್ರಾಮ ಪಂಚಾಯತನಲ್ಲಿ ಕಾಂಗ್ರೆಸ್ 8 ಹಾಗೂ ಜೆಡಿಎಸ್ 8 ಸಮಬಲ ಹೊಂದಿದೆ. ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ 2 ಪಕ್ಷಗಳ ಸದಸ್ಯರು ಸಮಬಲ ಕಾಯ್ದುಕೊಂಡ ಹಿನ್ನೆಲೆ, ಚುನಾವಾಣಾಧಿಕಾರಿ ಲಾಟರಿ ಮೂಲಕ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಸಿದ್ರು. ಲಾಟರಿಯಲ್ಲಿ ಕಾಂಗ್ರೆಸ್ ಬೆಂಬಲಿತರಾದ ಅಧ್ಯಕ್ಷೆಯಾಗಿ ನಿರ್ಮಲಮ್ಮ, ಉಪಾಧ್ಯಕ್ಷೆಯಾಗಿ ಗೌರಮ್ಮ ಆಯ್ಕೆಯಾದ್ರು. ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್‌ನ ಸದಸ್ಯನೋರ್ವ ಒಳ ಒಪ್ಪಂದ ಮಾಡಿಕೊಂಡು ಜೆಡಿಎಸ್‌ಗೆ ದ್ರೋಹ ಮಾಡಿದ ಎಂದು ಜೆಡಿಎಸ್ ಕಾರ್ಯಕರ್ತರು ಗ್ರಾಮ ಪಂಚಾಯತ ಎದುರು ಗಲಾಟೆ ಶುರು ಮಾಡಿದ್ರು.

ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿ ಜೆಡಿಎಸ್ ಮುಖಂಡರು ಕಾಂಗ್ರೆಸ್ ವಿರುದ್ದ ಆಕ್ರೋಶ ಹೊರ ಹಾಕಿದ್ರು. ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರ ಹರಸಾಹಸ ಪಡಬೇಕಾಯಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಹ ಗಲಾಟೆ ಶುರು ಮಾಡುತ್ತಿದ್ದಂತೆ ಪೊಲೀಸರು 2 ಗುಂಪುಗಳನ್ನ ಚದುರಿಸಿ ಪರಿಸ್ಥಿತಿ ನಿಯಂತ್ರಣ ಗೊಳಿಸಿದ್ರು. ಒಟ್ಟಾರೆ ಶ್ರೀನಿವಾಸಪುರದಲ್ಲಿ ಪ್ರತಿಷ್ಠೆಯ ಪಂಚಾಯತನ ಅಧ್ಯಕ್ಷ ಹಾಗು ಉಪಾಧ್ಯಕ್ಷ ೨ ಸ್ಥಾನಗಳಲ್ಲಿ ಕಾಂಗ್ರೇಸ್ ಜಯಭೇರಿ ಜೆಡಿಎಸ್‌ಗೆ ನುಂಗಲಾರದ ತುತ್ತಾಗಿದ್ದು, ಇದು ಮುಂದಿನ ಚುನಾವಣೆಗಳ ಮೇಲೆ ನೇರ ಪರಿಣಾಮ ಬೀರಲಿದೆ.

Published On - 3:45 pm, Fri, 24 June 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ