AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ಕ್ವಾರಿಯಲ್ಲಿ ಸ್ಫೋಟಕ್ಕೆ ಕಾರ್ಮಿಕ ಬಲಿ : ಕರ್ತವ್ಯ ಲೋಪ ಎಸಗಿದ ಇನ್ಸ್​​ಪೆಕ್ಟರ್ ಅಮಾನತು

ಕೊಮ್ಮನಹಳ್ಳಿಯ ಬಳಿ ಕಲ್ಲು ಕ್ವಾರಿಯಲ್ಲಿ ಸ್ಫೋಟಕ ಸಿಡಿದು ಕಾರ್ಮಿಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಸರಬರಾಜು ಮಾಡಿದ್ದ ಆರೋಪಿ ದಿಪೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಲು ಕ್ವಾರಿಯಲ್ಲಿ ಸ್ಫೋಟಕ್ಕೆ ಕಾರ್ಮಿಕ ಬಲಿ : ಕರ್ತವ್ಯ ಲೋಪ ಎಸಗಿದ ಇನ್ಸ್​​ಪೆಕ್ಟರ್ ಅಮಾನತು
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Oct 14, 2022 | 8:54 PM

Share

ಕೋಲಾರ: ಕೊಮ್ಮನಹಳ್ಳಿಯ ಬಳಿ ಕಲ್ಲು ಕ್ವಾರಿಯಲ್ಲಿ (jelly crusher)  ಸ್ಫೋಟಕ ಸಿಡಿದು ಕಾರ್ಮಿಕ (Labor) ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಸರಬರಾಜು ಮಾಡಿದ್ದ ಆರೋಪಿ ದಿಪೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.  ಇನ್ನು ಕರ್ತವ್ಯ ಲೋಪ ಎಸಗಿದ ಆರೋಪದಡಿ ಮಾಸ್ತಿ ಪೊಲೀಸ್​ ಠಾಣೆ ಇನ್ಸ್​​ಪೆಕ್ಟರ್ (Inspector) ವಸಂತ​ನನ್ನು ಅಮಾನತು ಮಾಡಲಾಗಿದೆ. ಸದ್ಯ ಮಾಸ್ತಿ ಪೊಲೀಸರು ಅಪಘಾತ ಪ್ರಕರಣದ ಬದಲಾಗಿ ಸ್ಪೋಟಕ ಕಾಯ್ದೆ ಹಾಗೂ ಐಪಿಸಿ 201 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ತನಿಖಾಧಿಕಾರಿಯಾಗಿ ಕೋಲಾರದ ಡಿವೈಎಸ್​ಪಿ ದೇವರಾಜ್​ರವರು ನೇಮಕಗೊಂಡಿದ್ದಾರೆ.

ಘಟನೆ ಹಿನ್ನೆಲೆ 

ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದಲ್ಲಿ ಜೆಲ್ಲಿ ಕ್ರಷರ್​ಲ್ಲಿ (jelly crusher) ಸ್ಫೋಟಕ ಸಿಡಿದು ಕಾರ್ಮಿಕ (Labor) ಸಾವನ್ನಪ್ಪಿದ್ದನು. ಬಿಹಾರ (Bihar) ಮೂಲದ ರಾಕೇಶ್ ಸಾಣಿ (34) ಮೃತ ಕಾರ್ಮಿಕ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಡಾಗ್ ಮತ್ತು ಬಾಂಬ್ ಸ್ಕ್ವಾಡ್ ತಂಡ ಸ್ಥಳಕ್ಕೆ ಭೇಟಿ‌ ನೀಡಿದೆ.

ಕೇಂದ್ರ ವಲಯ ಐಜಿ ಚಂದ್ರಶೇಖರ್ ಸ್ಪಷ್ಟನೆ

ಸ್ಥಳಕ್ಕೆ ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್ ಭೇಟಿ ನೀಡಿ ಎಸ್ಪಿ ದೇವರಾಜ್ ಅವರಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು ನಿನ್ನೆ (ಅ. 13) ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಟ್ರಕ್ ನಿಂದ ಅಪಘಾತ ಆಗಿದೆ ಎಂದು ನಿತೀಶ್ ಕುಮಾರ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದರು. ದೂರು ಹಿನ್ನೆಲೆ ಪ್ರಕರಣ ದಾಖಲಾಗಿತ್ತು. ಬಿಹಾರ್ ಮೂಲದ ರಾಕೇಶ್ ಎಂಬ ವ್ಯಕ್ತಿ ಮೃತ ಪಟ್ಟಿದ್ದಾನೆ. ಆದರೆ ನಮಗೆ ರಾಕೇಶ್​​ನ ಸಾವಿನ ಕುರಿತು ಅನುಮಾನ ವ್ಯಕ್ತವಾಗಿದ್ದು, ತನಿಖೆ ಮಾಡುತ್ತಿದ್ದೇವೆ. ಸದ್ಯ ಮೇಲ್ನೋಟಕ್ಕೆ ಬ್ಲ್ಯಾಸ್ಟ್ ನಿಂದ ಸಾವು ಆಗಿದೆ ಅಂತ ಹೇಳಲಾಗುತ್ತಿದೆ. ಇಬ್ಬರಿಗೆ ಗಾಯಾಳಾಗಿವೆ. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ದೀಪೆನ್ ಎಂಬುವವರು ಬ್ಲ್ಯಾಸ್ಟ್ ಪರವಾನಿಗೆ ಹೊಂದಿದ್ದಾರೆ. ಕ್ರಷರ್ ಮಂಜುನಾಥ್ ಎಂಬುವವರಿಗೆ ಸೇರಿದೆ. ಆಕ್ಸಿಡೆಂಟ್ ಅನ್ನೋ ಕಟ್ಟು ಕಥೆ ಎಲ್ಲಿಂದ ಬಂತು ಅನ್ನೋ ತನಿಖೆ ಆಗುತ್ತಿದೆ. ಪೊಲೀಸರು ಏಕೆ ಆಕ್ಸಿಡೆಂಟ್ ಅಂತ ದೂರು ದಾಖಲಿಸಿಕೊಂಡಿದ್ದಾರೆ ಅನ್ನೋ ತನಿಖೆ ಮಾಡಿಸುತ್ತೇವೆ. ಎಫ್​ಐಆರ್​ ದಾಖಲು ಮಾಡಿರುವ ಅಧಿಕಾರಿ ಬಗ್ಗೆಯೂ ತನಿಖೆ ಮಾಡಲಾಗುತ್ತೆ. ಮೈನಿಂಗ್ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕಾಗಿದೆ ಎಂದು ಕೊಮ್ಮನಹಳ್ಳಿಯಲ್ಲಿ ಹೇಳಿದ್ದಾರೆ.

ಜಿಲ್ಲಾಸ್ಪತ್ರೆಗೆ  ಸಚಿವ ಮುನಿರತ್ನ ಭೇಟಿ 

ಕೋಲಾರ ಜಿಲ್ಲಾಸ್ಪತ್ರೆ ಶವಗಾರಕ್ಕೆ ಸಚಿವ ಮುನಿರತ್ನ ಭೇಟಿ ನೀಡಿ  ಶವವನ್ನು ಮರು ಮರಣೋತ್ತರ ಪರೀಕ್ಷೆ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಿಡಿಯೋ ಸಹಿತಿ ಮರಣೋತ್ತರ ಪರೀಕ್ಷೆಗೆ ಸೂಚನೆ ನೀಡಿದರು. ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನದಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲಾ. ಪ್ರಕರಣದ ಸಂಪೂರ್ಣ ತನಿಖೆಗೆ ಸೂಚನೆ ನೀಡಿದ್ದೇನೆ.  ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳುವೆ ಎಂದು ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ