ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಜೆ.ಪಿ.ನಡ್ಡಾ ಆಗಮನ: ವಿಜಯೇಂದ್ರ ಸ್ಪಷ್ಟನೆ

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ದೇವಸ್ಥಾನಕ್ಕೆ ಆಗಮಿಸಿದ್ದ ವಿಜಯೇಂದ್ರ ಅವರು ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಜೆ.ಪಿ.ನಡ್ಡಾ ಕೂಡ ಬರಲಿದ್ದಾರೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಪಕ್ಷದಲ್ಲಿ ಹಿರಿಯರಿದ್ದರೂ ಕೂಡ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ಎಲ್ಲಾ ಹಿರಿಯರು ಆಶೀರ್ವಾದ ಮಾಡಿದ್ದಾರೆ, ಹೀಗಾಗಿ ಅವರೆಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವೆ ಎಂದರು.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಜೆ.ಪಿ.ನಡ್ಡಾ ಆಗಮನ: ವಿಜಯೇಂದ್ರ ಸ್ಪಷ್ಟನೆ
ಬಿ.ವೈ. ವಿಜಯೇಂದ್ರ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಆಯೇಷಾ ಬಾನು

Updated on: Nov 14, 2023 | 1:58 PM

ಕೋಲಾರ, ನ.14: ಇದೇ ಶುಕ್ರವಾರ (ನವೆಂಬರ್ 17) ಬಿಜೆಪಿ ಶಾಸಕಾಂಗ ಸಭೆ ನಿಗದಿಯಾಗಿದೆ. ಈ ಸಭೆಗೆ ಜೆ.ಪಿ.ನಡ್ಡಾ (JP Nadda) ಕೂಡ ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ದೇವಸ್ಥಾನಕ್ಕೆ ಆಗಮಿಸಿದ್ದ ವಿಜಯೇಂದ್ರ ಅವರು ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಜೆ.ಪಿ.ನಡ್ಡಾ ಕೂಡ ಬರಲಿದ್ದಾರೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಹಿರಿಯರಿದ್ದರೂ ಕೂಡ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ಎಲ್ಲಾ ಹಿರಿಯರು ಆಶೀರ್ವಾದ ಮಾಡಿದ್ದಾರೆ, ಹೀಗಾಗಿ ಅವರೆಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವೆ. ಜೊತೆಗೆ ಪಕ್ಷ ಬಲಪಡಿಸಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡ್ತೇನೆ ಎಂದರು. ಇದೇ ವೇಳೆ ವಿಜಯೇಂದ್ರ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಅಸಮಾಧಾನ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯ ನಾಯಕರು ತೀರ್ಮಾನ ಮಾಡಿ ಆಯ್ಕೆ ಮಾಡಿದ್ದಾರೆ. ಇದು ಅಮಿತ್ ಶಾ, ಜೆ.ಪಿ.ನಡ್ಡಾ ತೀರ್ಮಾನ. ಯಾರೂ ವಿರೋಧ ಮಾಡುವುದಿಲ್ಲ, ಸಂತೋಷದಿಂದ ಒಪ್ಪಿದ್ದಾರೆ. ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಜೆ.ಪಿ.ನಡ್ಡಾ ಕೂಡ ಬರಲಿದ್ದಾರೆ ಎಂದರು.

ಇದನ್ನೂ ಓದಿ: ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೋಲಾರದಲ್ಲಿ ಅದ್ದೂರಿ ಸ್ವಾಗತ, ಭಾವೀ ಮುಖ್ಯಮಂತ್ರಿ ಅಂತ ಜೈಕಾರ!

ಭಾರತೀಯ ಜನತಾ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಜಯಬೇರಿ ಭಾರಿಸಬೇಕು. ಆಂಧ್ರದ ಲೋಕಸಭಾ ಚುನಾವಣೆಯಲ್ಲಿ ವಿಜಯಭೇರಿ ಬಾರಿಸಬೇಕು. ಕರ್ನಾಟಕ ಲೋಕಸಭಾ ಚುನಾವಣೆಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಬೇಕು. ಮೋದಿಜಿ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ದೇಶವನ್ನ ಮುನ್ನಡೆಸಬೇಕು. ಅತಿ ಹೆಚ್ಚಿ ಸಂಸದರನ್ನ ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕು. ಈ ನಿಟ್ಟಿನಲ್ಲಿ ಭಗವಂತ ಎಲ್ಲಾ ಶಕ್ತಿಯನ್ನ ಕೊಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಾಳೆ ಶಾಸಕ ಬಿ.ವೈ. ವಿಜಯೇಂದ್ರ ಪದಗ್ರಹಣಕ್ಕೂ ಮುನ್ನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ರಾತ್ರಿ ಮತ್ತು ನಾಳೆ ಬೆಳಗ್ಗೆ ಹೋಮ ಕಾರ್ಯ ನಡೆಯಲಿದೆ. ಇದರ ಜೊತೆಗೆ ಬಿಜೆಪಿ ರಾಜ್ಯ ಕಚೇರಿಯನ್ನು ತೋರಣ ಹಾಗೂ ಕೇಸರಿ ಬಟ್ಟೆಗಳಿಂದ ಅಲಂಕರಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ