ಕೋಲಾರ, ನ.14: ಇದೇ ಶುಕ್ರವಾರ (ನವೆಂಬರ್ 17) ಬಿಜೆಪಿ ಶಾಸಕಾಂಗ ಸಭೆ ನಿಗದಿಯಾಗಿದೆ. ಈ ಸಭೆಗೆ ಜೆ.ಪಿ.ನಡ್ಡಾ (JP Nadda) ಕೂಡ ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ದೇವಸ್ಥಾನಕ್ಕೆ ಆಗಮಿಸಿದ್ದ ವಿಜಯೇಂದ್ರ ಅವರು ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಜೆ.ಪಿ.ನಡ್ಡಾ ಕೂಡ ಬರಲಿದ್ದಾರೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಹಿರಿಯರಿದ್ದರೂ ಕೂಡ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ಎಲ್ಲಾ ಹಿರಿಯರು ಆಶೀರ್ವಾದ ಮಾಡಿದ್ದಾರೆ, ಹೀಗಾಗಿ ಅವರೆಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವೆ. ಜೊತೆಗೆ ಪಕ್ಷ ಬಲಪಡಿಸಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡ್ತೇನೆ ಎಂದರು. ಇದೇ ವೇಳೆ ವಿಜಯೇಂದ್ರ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಅಸಮಾಧಾನ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯ ನಾಯಕರು ತೀರ್ಮಾನ ಮಾಡಿ ಆಯ್ಕೆ ಮಾಡಿದ್ದಾರೆ. ಇದು ಅಮಿತ್ ಶಾ, ಜೆ.ಪಿ.ನಡ್ಡಾ ತೀರ್ಮಾನ. ಯಾರೂ ವಿರೋಧ ಮಾಡುವುದಿಲ್ಲ, ಸಂತೋಷದಿಂದ ಒಪ್ಪಿದ್ದಾರೆ. ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಜೆ.ಪಿ.ನಡ್ಡಾ ಕೂಡ ಬರಲಿದ್ದಾರೆ ಎಂದರು.
ಇದನ್ನೂ ಓದಿ: ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೋಲಾರದಲ್ಲಿ ಅದ್ದೂರಿ ಸ್ವಾಗತ, ಭಾವೀ ಮುಖ್ಯಮಂತ್ರಿ ಅಂತ ಜೈಕಾರ!
ಭಾರತೀಯ ಜನತಾ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಜಯಬೇರಿ ಭಾರಿಸಬೇಕು. ಆಂಧ್ರದ ಲೋಕಸಭಾ ಚುನಾವಣೆಯಲ್ಲಿ ವಿಜಯಭೇರಿ ಬಾರಿಸಬೇಕು. ಕರ್ನಾಟಕ ಲೋಕಸಭಾ ಚುನಾವಣೆಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಬೇಕು. ಮೋದಿಜಿ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ದೇಶವನ್ನ ಮುನ್ನಡೆಸಬೇಕು. ಅತಿ ಹೆಚ್ಚಿ ಸಂಸದರನ್ನ ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕು. ಈ ನಿಟ್ಟಿನಲ್ಲಿ ಭಗವಂತ ಎಲ್ಲಾ ಶಕ್ತಿಯನ್ನ ಕೊಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಾಳೆ ಶಾಸಕ ಬಿ.ವೈ. ವಿಜಯೇಂದ್ರ ಪದಗ್ರಹಣಕ್ಕೂ ಮುನ್ನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ರಾತ್ರಿ ಮತ್ತು ನಾಳೆ ಬೆಳಗ್ಗೆ ಹೋಮ ಕಾರ್ಯ ನಡೆಯಲಿದೆ. ಇದರ ಜೊತೆಗೆ ಬಿಜೆಪಿ ರಾಜ್ಯ ಕಚೇರಿಯನ್ನು ತೋರಣ ಹಾಗೂ ಕೇಸರಿ ಬಟ್ಟೆಗಳಿಂದ ಅಲಂಕರಿಸಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ