ಹನಿಮೂನ್ ಹೇಗಿರುತ್ತೆ ಎಂದು ವಿದ್ಯಾರ್ಥಿನಿಗೆ ಪ್ರಶ್ನೆ ಕೇಳಿದ ಶಿಕ್ಷಕ: ಒಂದು ಬಾರಿ ಸಸ್ಪೆಂಡ್ ಆಗಿದ್ರೂ ಪಾಠ ಕಲಿತಿಲ್ಲ

ವಿದ್ಯಾರ್ಥಿನಿಯರ ಜೊತೆ ಅಶ್ಲೀಲವಾಗಿ ವರ್ತನೆ ಮಾಡಿದ ಆರೋಪ ಮೇಲೆ ಈ ಹಿಂದೆ ಒಂದು ಬಾರಿ ಕೆಲಸದಿಂದ ಅಮಾನತುಗೊಂಡಿದ್ದರೂ ಬುದ್ಧಿ ಕಲಿಯದ ಕೋಲಾರ ಜಿ್ಲ್ಲೆಯ ಶಿಕ್ಷಕ, ಇದೀಗ ಮತ್ತೆ ತನ್ನ ಹಳೇ ಚಾಳಿಯನ್ನು ಮುಂದುವರಿಸಿದ್ದಾನೆ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಹನಿಮೂನ್ ಹೇಗಿರುತ್ತೆ ಎಂದು ವಿದ್ಯಾರ್ಥಿನಿಗೆ ಪ್ರಶ್ನೆ ಕೇಳಿದ ಶಿಕ್ಷಕ: ಒಂದು ಬಾರಿ ಸಸ್ಪೆಂಡ್ ಆಗಿದ್ರೂ ಪಾಠ ಕಲಿತಿಲ್ಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 07, 2022 | 4:19 PM

ಕೋಲಾರ: ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಮಹತ್ತರವಾದ ಸ್ಥಾನವನ್ನು ವಹಿಸುವುದು ಶಿಕ್ಷಕರು ಎಂದರೆ ತಪ್ಪಾಗಲಾರದು. ಈ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ನೀರೆರೆದು ಪೋಷಿಸುವವರು ಈ ಶಿಕ್ಷಕರೇ ಹೌದು, ಈ ಶಿಕ್ಷಕ ವೃತ್ತಿಯೂ ಸಹ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ಆದ್ರೆ, ಇಲ್ಲೋರ್ವ ಶಿಕ್ಷಕ, ವಿದ್ಯಾರ್ಥಿಗಳಿಗೆ ಪಾಠ ಮಾಡು ಅಂದ್ರೆ ವಿದ್ಯಾರ್ಥಿನಿ ಜೊತೆಗೆ ಅನುಚಿತವಾಗಿ ವರ್ತಿಸಿದ  ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಸುಟ್ಟಗಾಯಗಳಿಂದ ನರಳುತ್ತಿದ್ದ ಮಗುವೊಂದನ್ನು ಎತ್ತಿಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ ಮುಳುಬಾಗಿಲು ಸಬ್-ಇನ್ಸ್​ಪೆಕ್ಟರ್​ಗೆ ನೆಟ್ಟಿಗರಿಂದ ಶ್ಲಾಘನೆ!

ಹೌದು….ಕೋಲಾರ ತಾಲ್ಲೂಕು ನರಸಾಪುರದ ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಶಿಕ್ಷಕ ಪ್ರಕಾಶ್, ವಿದ್ಯಾರ್ಥಿನಿಯರ ಮೈ ಮುಟ್ಟಿ ಮಾತನಾಡುವುದು, ಅಶ್ಲೀಲವಾಗಿ ವರ್ತನೆ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಅಲ್ಲದೇ 10ನೇ ತರಗತಿ ವಿದ್ಯಾರ್ಥಿನಿಗೆ ಹನಿಮೂನ್ ಹೇಗಿರುತ್ತೆ ಎಂದು ಪ್ರಶ್ನೆ ಕೇಳಿದ್ದಾನೆ ಎಂದು ಆರೋಪಿಸಲಾಗಿದ್ದು, ಕೂಡಲೇ ಶಿಕ್ಷಕನನ್ನು ಅಮಾನತು ಮಾಡಬೇಕೆಂದು ವಿದ್ಯಾರ್ಥಿಗಳ ಪೋಷಕರು ಆಗ್ರಹಿಸಿದ್ದಾರೆ.

ಕನ್ನಡ ಶಿಕ್ಷಕ ಪ್ರಕಾಶ್ ವಿರುದ್ದ ವಿದ್ಯಾರ್ಥಿನಿ ಪೋಷಕರು ದೂರು ನೀಡಿದ್ದರಿಂದ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಕಣ್ಣಯ್ಯ ಆಗಮಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಹಿಂದೆ ಇದೇ ರೀತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಜೊತೆಗೆ ಅನುಚಿತವಾಗಿ ವರ್ತಿಸಿದ್ದ ಹಿನ್ನಲೆ ಅಮಾನತುಗೊಂಡಿದ್ದ.

ಆದರೂ ಪಾಠ ಕಲಿಯದ ಪ್ರಕಾಶ್, ಇದೀಗ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದ್ದಾನೆ. ಶಿಕ್ಷಕ ಪ್ರಕಾಶ್ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಕೂಡಲೇ ಸೇವೆಯಿಂದ ಅಮಾನತು ಮಾಡುವಂತೆ ಪೋಷಕರು ಒತ್ತಾಯಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:52 pm, Wed, 7 December 22

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್