ಕೆಎಎಸ್​​ ಪ್ರಿಲಿಮ್ಸ್​ ಪರೀಕ್ಷೆ: ಕೋಲಾರದಲ್ಲಿ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಿಸಿದ ಡಿಸಿ

KPSC KAS Prelims Exam 2024: ಕೋಲಾರದ 12 ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್​ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಬೇರೆಡೆಯಿಂದ ಆಗಮಿಸುವ ಅಭ್ಯರ್ಥಿಗಳಿಗೆ ಕೋಲಾರದ KEB ಸಮುದಾಯ ಭವನ, ಹಾಲಿಸ್ಟರ್ ಸಮುದಾಯ ಭವನ, ಶತಶೃಂಗ ಪೊಲೀಸ್ ಸಮುದಾಯ ಭವನ, ನಚಿಕೇತ ಹಾಸ್ಟೆಲ್​ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಕೆಎಎಸ್​​ ಪ್ರಿಲಿಮ್ಸ್​ ಪರೀಕ್ಷೆ: ಕೋಲಾರದಲ್ಲಿ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಿಸಿದ ಡಿಸಿ
KPSC
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಆಯೇಷಾ ಬಾನು

Updated on:Aug 27, 2024 | 7:11 AM

ಕೋಲಾರ, ಆಗಸ್ಟ್​.27: ಇಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಕೆಎಎಸ್​​ ಪ್ರಿಲಿಮ್ಸ್​ ಪರೀಕ್ಷೆ (KAS Prelims Exam) ಹಿನ್ನೆಲೆ ಕೋಲಾರ ಜಿಲ್ಲಾಡಳಿತ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಿದೆ. ಕೋಲಾರ ಜಿಲ್ಲಾಧಿಕಾರಿ (Kolar DC) ಅಕ್ರಂ ಪಾಷಾರಿಂದ ಊಟ, ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಕೋಲಾರದ 12 ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್​ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಬೇರೆಡೆಯಿಂದ ಆಗಮಿಸುವ ಅಭ್ಯರ್ಥಿಗಳಿಗೆ ಕೋಲಾರದ KEB ಸಮುದಾಯ ಭವನ, ಹಾಲಿಸ್ಟರ್ ಸಮುದಾಯ ಭವನ, ಶತಶೃಂಗ ಪೊಲೀಸ್ ಸಮುದಾಯ ಭವನ, ನಚಿಕೇತ ಹಾಸ್ಟೆಲ್​ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಡಿಸಿ ಅಕ್ರಂ ಪಾಷಾ ಅವರು ಕೆಪಿಎಸ್​ಸಿ ಪರೀಕ್ಷಾರ್ಥಿಗಳಿಗೆ ಊಟ, ಕುಡಿಯುವ ನೀರು, ವಸತಿ ವ್ಯವಸ್ಥೆ ಮೇಲ್ವಿಚಾರಣೆಗೆ ಅಧಿಕಾರಿಗಳನ್ನು ನೇಮಿಸಿದ್ದಾರೆ.

ಕೆಎಎಸ್‌ ಪ್ರಿಲಿಮ್ಸ್ ಪರೀಕ್ಷೆಯ ಪತ್ರಿಕೆ 1 ಪರೀಕ್ಷೆಯನ್ನು ಬೆಳಿಗ್ಗೆ 10-00 ಗಂಟೆಯಿಂದ ಮಧ್ಯಾಹ್ನ 12-00 ಗಂಟೆವರೆಗೆ ನಡೆಸಲಾಗುತ್ತದೆ. ಪತ್ರಿಕೆ 2 ಪರೀಕ್ಷೆಯನ್ನು ಮಧ್ಯಾಹ್ನ 2 ರಿಂದ 4 ಗಂಟೆವರೆಗೆ ನಡೆಸಲಾಗುತ್ತದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಇಂದು ನಡೆಸುತ್ತಿದೆ.

ಇದನ್ನೂ ಓದಿ: Nithya Bhavishya: ಶ್ರಾವಣ ಮಂಗಳವಾರದಂದು ರಾಶಿ ಭವಿಷ್ಯ ಹೇಗಿದೆ? ಶುಭ, ಅಶುಭದ ಬಗ್ಗೆ ತಿಳಿಯಿರಿ

ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ನಿಯೋಜನೆ

ಅಭ್ಯರ್ಥಿಗಳಿಗೆ ಅನುಕೂಲವಾಗಲಿ ಎಂದು ಹೆಚ್ಚುವರಿ ಸರ್ಕಾರಿ ಬಸ್‌ಗಳನ್ನು ನಿಯೋಜಿಸಲು ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಇಂದು 2 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಬರೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಓಡಾಟಕ್ಕೆ ಅನುಕೂಲವಾಗಲು ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ಸೂಚನೆ ನೀಡಲಾಗಿದೆ. ಹೆಚ್ಚುವರಿ ಸಾರಿಗೆ ಅನುಕೂಲಕ್ಕೆ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ. ಎಸ್ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:06 am, Tue, 27 August 24

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ