AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ-ಮಳೆ, ಧಾರ್ಮಿಕ ಮುಖಂಡನ ಸಾವಾಗಲಿದೆ: ಕೋಡಿಶ್ರೀ ಸ್ಫೋಟಕ ಭವಿಷ್ಯ

Kodimata Shivananda Shivayogi Rajendra Swamiji Prediction: ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಮಳೆ ಇಲ್ಲದೇ ಬೆಳೆಯೂ ಇಲ್ಲದಂತಾಗಿದೆ, ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಮೇವು ಸಮಸ್ಯೆ ಎದುರಾಗಿದೆ. ಇದರ ಮಧ್ಯೆ ಕೋಡಿ ಮಠದ ಡಾ.ಶಿವನಂದ‌ ಶಿವಯೋಗಿ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದು ನುಡಿದಿದ್ದು, ರೈತರಿಗೆ ಒಳ್ಳೆಯದಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಇದರ ಜೊತೆಗೆ ಆಘಾತಕಾರಿ ಹೇಳಿಕೆಯನ್ನು ಸಹ ನೀಡಿದ್ದಾರೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Feb 19, 2024 | 5:52 PM

Share

ಕೋಲಾರ, (ಫೆಬ್ರವರಿ 19): ಯುಗಾದಿ (Ugadi) ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (kodimath dr sivananda shivayogi rajendra swamiji) ಭವಿಷ್ಯ ನುಡಿದಿದ್ದಾರೆ. ಸದ್ಯ ಮಳೆ-ಬೆಳೆ ಇಲ್ಲದೇ ಕಂಗಾಲಾಗಿರುವ ರೈತರಿಗೆ ಒಂದು ಸಮಾಧಾನಕರ ಭವಿಷ್ಯವೊಂದನ್ನು ಹೇಳಿದ್ದಾರೆ. ಅಲ್ಲದೇ ಮತಾದಂತೆ‌ ಹೆಚ್ಚಾಗುತ್ತದೆ, ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಕೋಲಾರದ ಜಿಲ್ಲೆ‌ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಕೋಡಿ ಮಠದ ಡಾ.ಶಿವನಂದ‌ ಶಿವಯೋಗಿ ಸ್ವಾಮೀಜಿ, ಯುಗಾದಿ ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ ಹೇಳುವೆ, ಇನ್ನ ಸಾಕಷ್ಟು ಸಮಯವಿದೆ ಎಂದರು.

ಇದನ್ನೂ ಓದಿ:  ಕೋಡಿಮಠದ ಸ್ವಾಮೀಜಿ ನುಡಿದರು ಹೊಸ ಭವಿಷ್ಯ! ಒಂದೆರಡು ಪ್ರಧಾನಿಗಳಿಗೆ ಸಾವಾಗುವ ಲಕ್ಷಣವಿದೆಯಂತೆ

ಗ್ಯಾರೆಂಟ್ ಗಳಿಂದ‌ ಸರ್ಕಾರ ನಡೆಯುತ್ತಿದ್ದೀಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನನ್ನಗಿಂತ ನಿಮಗೆ ಚೆನ್ನಾಗಿ ಗೊತ್ತು. ರಾಷ್ಟ್ರ ರಾಜಕಾರಣ ಸಹ ಯುಗಾದಿ ಮೇಲೆ ಗೊತ್ತಾಗುತ್ತದೆ. ಯುಗಾದಿ ನಂತರ‌ ಭವಿಷ್ಯ ಬರುವುದು. ಒಂದು ತಿಂಗಳು ಕಳೆದ ಮೇಲೆ ಮಳೆ, ಬೇಳೆ, ರಾಜಕೀಯ, ದುಡಿಮೆ, ವ್ಯಾಪಾರ ಎಲ್ಲಾ ಗೊತ್ತಾಗಲಿದೆ ಎಂದು ಹೇಳಿದರು.

ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ ಹಾವಳಿ,ನೀರಿನ ಹಾವಳಿ, ಯುದ್ದ‌ ಆಗುತ್ತೆ. ಅನೇಕ‌ ಸಾವು ನೋವುಗಳು ಆಗುತ್ತೆ. ಮತಾದಂತೆ‌ ಹೆಚ್ಚಾಗುತ್ತದೆ. ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದರು.

ಹೊಸ ವರ್ಷ ಆರಂಭದಲ್ಲಿ ಕೋಡಿಶ್ರೀ ನುಡಿದ ಭವಿಷ್ಯವೇನು?

2024ರ ಹೊಸ ವರ್ಷದ ಆರಂಭದಲ್ಲಿ ಅಂದರೆ ಜನವರಿಯಲ್ಲಿ ಗದಗನಲ್ಲಿ ಮಾತನಾಡಿದ್ದ ಕೋಡಿಶ್ರೀ, 2024 ರಲ್ಲಿ ಅಕಾಲಿಕ ಮಳೆಯಾಗಲಿದ್ದು, ಜಗತ್ತಿಗೆ ಒಳ್ಳೆಯ ದಿನಗಳಿಲ್ಲ. ಬಾಂಬ್ ಸಿಡಿಯುವ ಸಂಭವವಿದ್ದು, ಯುದ್ಧ ಭೀತಿ ಆವರಿಸಲಿದೆ. ಭೂಕಂಪ.. ಜಲ ಕಂಟಕವೂ ಇದೆ. ಜನರು ತಲ್ಲಣವಾಗುತ್ತಾರೆ ಎಂದು 2024ರ (ಜನವರಿ) ಆರಂಭದಲ್ಲಿ ಭವಿಷ್ಯ ನುಡಿದಿದ್ದ ಕೋಡಿಶ್ರೀ, ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ, ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳಿಗೆ ಸಾವಾಗುವ ಲಕ್ಷಣ.. ಅಸ್ಥಿರತೆ, ಯುದ್ಧ ಭೀತಿ. ಅಣು ಬಾಂಬ್ ಸ್ಫೋಟವಾಗುವ ಸಾಧ್ಯತೆಗಳಿವೆ. ಜಗತ್ತಿಗೆ ವಿನಾಶ ಕಾದಿದೆ. ರೋಗ, ಸುನಾಮಿ ಸಂಭವಿಸಲಿದೆ. ಮತೀಯ ಸಮಸ್ಯೆಯಿಂದ ಜನರು ದುಃಖ ಅನುಭವಿಸುತ್ತಾರೆ. ದೈವ ನಂಬುವುದೊಂದೆ ಪರಿಹಾರ. ದೈವ ಮೊರೆ ಹೋಗ್ಬೇಕು ಎಂದು ಹೇಳಿದ್ದರು.

ಮತ್ತಷ್ಟು ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Mon, 19 February 24

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?