AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ ವಶಕ್ಕೆ

ಸದ್ಯ ರಾಜ್ಯದಲ್ಲಿ ಎಲ್ಲೆಡೆ ಗ್ಯಾಸ್​ ಸಿಲಿಂಡರ್​​ ಕೊರತೆ ಉಂಟಾಗಿದೆ. ಈ ಮಧ್ಯೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಹೋಟೆಲ್ ಹಾಗೂ ಬೇಕರಿಗಳಲ್ಲಿ ವಾಣಿಜ್ಯ ಸಿಲಿಂಡರ್ ಬದಲು ಅಕ್ರಮವಾಗಿ ಗೃಹಬಳಕೆ ಸಿಲಿಂಡರ್‌ಗಳನ್ನು ಬಳಸುತ್ತಿರುವುದು ಪತ್ತೆ ಆಗಿದೆ. ಸದ್ಯ 21 ಗೃಹಬಳಕೆ ಸಿಲಿಂಡರ್​​ಗಳನ್ನು​ ವಶಕ್ಕೆ ಪಡೆಯಲಾಗಿದೆ.

ಕೋಲಾರ: ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ ವಶಕ್ಕೆ
ಗೃಹಬಳಕೆ ಸಿಲಿಂಡರ್​ ವಶಕ್ಕೆImage Credit source: tv9 kannada
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Mar 15, 2026 | 4:31 PM

Share

ಕೋಲಾರ, ಮಾರ್ಚ್​​ 15: ಗ್ಯಾಸ್​ ಸಿಲಿಂಡರ್​ (LPG Cylinder) ಹೊಡೆತಕ್ಕೆ ಕೇವಲ ಉದ್ಯಮಗಳು ಮಾತ್ರವಲ್ಲ, ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಖಾಲಿ ಗ್ಯಾಸ್​​ ಹಿಡಿದು ಜನರು ಏಜೆನ್ಸಿಗಳ ಮುಂದೆ ಜಮಾಯಿಸುತ್ತಿದ್ದಾರೆ. ಕಾಳಸಂತೆಯಲ್ಲಿ ಸಿಲಿಂಡರ್​ಗಳನ್ನು ಪೂರೈಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದೆ. ಈ ಮಧ್ಯೆ ನಗದರಲ್ಲಿ ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ಗಳನ್ನು ತಹಶೀಲ್ದಾರ್ ವಶಕ್ಕೆ ಪಡೆದಿದ್ದಾರೆ.

ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. 2 ಬೇಕರಿ ಮತ್ತು 5ಕ್ಕೂ ಹೆಚ್ಚು ಹೋಟೆಲ್​ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದ್ದು, ಈ ವೇಳೆ ಮಾಲೀಕರು ವಾಣಿಜ್ಯ ಸಿಲಿಂಡರ್ ಬದಲು ಗೃಹಬಳಕೆ ಸಿಲಿಂಡರ್ ಬಳಸುತ್ತಿರುವುದು ಪತ್ತೆ ಆಗಿದೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಸಿಲಿಂಡರ್ ಕೊರತೆ: ಕಾಳಸಂತೆಯಲ್ಲಿ ಗ್ಯಾಸ್ ದಂಧೆ, 1 ಸಿಲಿಂಡರ್ ದರ 7 ಸಾವಿರ ರೂ!

ಸದ್ಯ 21 ಸಿಲಿಂಡರ್​ಗಳನ್ನು ವಶಕ್ಕೆ ಪಡೆದ ತಹಶೀಲ್ದಾರ್ ಸುಜಾತಾ ಎಚ್ಚರಿಕೆ ಕೂಡ ನೀಡಿದ್ದಾರೆ. ಇನ್ನು ದಾಳಿ ವೇಳೆ ಕೆಲವು ಹೋಟೆಲ್​ಗಳಲ್ಲಿ ಸ್ವಚ್ಛತೆ ಇಲ್ಲದಿರುವುದು ಕೂಡ ಪತ್ತೆ ಆಗಿದೆ. ಹೀಗಾಗಿ ಸುರಭಿ ಹೋಟೆಲ್‌ನಲ್ಲಿ ಅಧಿಕಾರಿಗಳು ನೀರಿನ ಸ್ಯಾಂಪಲ್ ಸಂಗ್ರಹಿಸಿದ್ದಾರೆ.

ಹೋಟೆಲ್​ಗಳು ಬಂದ್​: ಆಲೂಗಡ್ಡೆ ಸೇಲ್​ ಆಗದೇ ರೈತ ಕಂಗಾಲು

ಜಿಲ್ಲೆಯಲ್ಲಿ ರೈತರಿಗೆ ಯುದ್ಧ ಬಿಸಿ ಮುಟ್ಟಿಸಿದೆ. ಸಿಲಿಂಡರ್​ ಅಭಾವದಿಂದ ಹೋಟೆಲ್​ಗಳು ಬಂದ್ ಆಗಿರೋದ್ರಿಂದ, ತರಕಾರಿಗಳನ್ನ ತೆಗೆದುಕೊಳ್ಳೋರೇ ಇಲ್ಲ. 1,200 ರಿಂದ 1,300 ರೂ. ಇದ್ದ ಮೂಟೆ ಆಲೂಗಡ್ಡೆ, 500 ರಿಂದ 600 ರೂಪಾಯಿಗೆ ಕುಸಿತ ಆಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕೆಲಸ ಕಳೆದುಕೊಂಡ ಇಂದಿರಾ ಕ್ಯಾಂಟಿನ್​​ ಮಹಿಳೆಯರು

ವಾಣಿಜ್ಯ ಸಿಲಿಂಡರ್​ ಹೊಡೆತಕ್ಕೆ ಕೇವಲ ಉದ್ಯಮಗಳು ಮಾತ್ರವಲ್ಲ. ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಕಲಬುರಗಿಯಲ್ಲಿ ಇಂದಿರಾ ಕ್ಯಾಂಟೀನ್​​ನಲ್ಲಿ​ ಕೆಲಸ ಮಾಡುತ್ತಿದ್ದ 10 ಮಹಿಳೆಯರನ್ನ ಕೆಲಸಕ್ಕೆ ಬರಬೇಡಿ ಅಂತ ಗುತ್ತಿಗೆದಾರರು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು ಚಾಮುಂಡೇಶ್ವರಿ ದೇವಿ ಲಡ್ಡು ಪ್ರಸಾದಕ್ಕೂ ಗ್ಯಾಸ್ ಕೊರತೆ ಬಿಸಿ: ಲಡ್ಡು ತಯಾರಿಸಲು ನಿರ್ಮಾಣವಾಗ್ತಿದೆ ವಿಶೇಷ ಸೌದೆ ಒಲೆ!

ಇನ್ನು ದಾವಣಗೆರೆಯಲ್ಲಿ ಆಟೋ ಎಲ್​ಪಿಜಿ ಗ್ಯಾಸ್​ ದರ ಏರಿಕೆ ಆಗಿದೆ. ಪ್ರತಿ ಲೀಟರ್​​ಗೆ 23 ರೂ. ಹೆಚ್ಚಳ ಮಾಡಿದ್ದು, 52 ರೂ. ಇದ್ದ ಲೀಟರ್​ ಎಲ್​​ಪಿಜಿ, 75 ರೂಪಾಯಿ ಆಗಿದೆ. ಎಲ್​​ಪಿಜಿ ಹೆಚ್ಚಳ ಮಾಡಿದೆಎ ಪ್ರಯಾಣಿಕರು ಹೆಚ್ಚುವರಿ ಹಣ ಕೊಡ್ತಾರಾ ಅಂತ ಚಾಲಕರು ಕಿಡಿಕಾರುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!