ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ: 1969ರ ಬ್ಯಾಚ್‌ನ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತಮಿಳುನಾಡು ಗಡಿಯಲ್ಲಿ ಭಾರಿ ಪ್ರಮಾಣದ 214 ಬುಲೆಟ್‌ಗಳು ಪತ್ತೆಯಾಗಿವೆ. ಇವುಗಳಲ್ಲಿ 135 ಜೀವಂತ ಗುಂಡುಗಳಾಗಿವೆ. ಎಸ್‌ಎಲ್‌ಆರ್ ಗನ್‌ಗಳಿಗೆ ಬಳಸುವ ಈ ಬುಲೆಟ್‌ಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಕಾಮಸಮುದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಗುಂಡುಗಳ ಮೂಲ ಮತ್ತು ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದು ಗಂಭೀರ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ: 1969ರ ಬ್ಯಾಚ್‌ನ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು
ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ
Edited By:

Updated on: May 13, 2026 | 8:52 PM

ಕೋಲಾರ, ಮೇ.13: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಭಾರಿ ಪ್ರಮಾಣದ ಬುಲೆಟ್‌ಗಳು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಎಸ್‌ಎಲ್‌ಆರ್ (SLR) ಅಥವಾ ಮಿಷನ್ ಗನ್‌ಗಳಿಗೆ ಬಳಸುವ ಒಟ್ಟು 214 ಬುಲೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಗಾರಪೇಟೆ ತಾಲೂಕಿನ ದಾಸರಮಲ್ಲ ಬ್ರಿಡ್ಜ್ ಬಳಿ ಅಪರಿಚಿತರು ಈ ಬುಲೆಟ್‌ಗಳನ್ನು ಬಿಸಾಡಿ ಹೋಗಿದ್ದಾರೆ. ಪತ್ತೆಯಾದ ಬುಲೆಟ್‌ಗಳು 1969ರಲ್ಲಿ ಮಹಾರಾಷ್ಟ್ರದಲ್ಲಿ ತಯಾರಾದವುಗಳಾಗಿದ್ದು, ಇವುಗಳಲ್ಲಿ 7.6 mm ಮಾದರಿಯ ಗುಂಡುಗಳಿವೆ. ಕಾಮಸಮುದ್ರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, 214 ಬುಲೆಟ್‌ಗಳ ಪೈಕಿ 135 ಜೀವಂತ ಬುಲೆಟ್‌ಗಳಿದ್ದರೆ (Live Bullets), 85 ಖಾಲಿಯಾಗಿರುವುದು ಕಂಡುಬಂದಿದೆ.

ಇದನ್ನೂ ಓದಿ: ಹಿಜಾಬ್‌ಗೆ ಸರ್ಕಾರ ಗ್ರೀನ್ ಸಿಗ್ನಲ್! ಅಮೆರಿಕ, ಆಸ್ಟ್ರೇಲಿಯಾಕ್ಕೆ ರೊಟ್ಟಿ ರಫ್ತು

ಇವುಗಳನ್ನು ಮಿಸ್ ಫೈರ್ ಅಥವಾ ಡಮ್ಮಿ ಬುಲೆಟ್‌ಗಳಿರಬಹುದು ಎಂದು ಶಂಕಿಸಲಾಗಿದ್ದು, ಹಲವು ತಿಂಗಳ ಹಿಂದೆಯೇ ಇಲ್ಲಿ ಬಿಸಾಡಿರಬಹುದು ಎನ್ನಲಾಗಿದೆ. ಗಡಿ ಭಾಗದಲ್ಲಿ ಇಷ್ಟು ದೊಡ್ಡ ಪ್ರಮಾಣದ ಗುಂಡುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಾಮಸಮುದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಈ ಬುಲೆಟ್‌ಗಳನ್ನು ತಂದವರು ಯಾರು ಮತ್ತು ಇದರ ಉದ್ದೇಶವೇನು ಎಂಬ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow Us