AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಹೇಯ ಕೃತ್ಯ: ಹಣಕ್ಕಾಗಿ 80ರ ವೃದ್ದೆ ಮೇಲೆ ಅತ್ಯಾಚಾರವೆಸಗಿ ಕೊಲೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಆರೋಪಿ ಅತ್ಯಾಚಾರವೆಸಗಿ ವೃದ್ಧೆ ಬಳಿಯಿದ್ದ 15,000 ರೂ ಹಣವನ್ನು ದೋಚಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೋಲಾರದಲ್ಲಿ ಹೇಯ ಕೃತ್ಯ: ಹಣಕ್ಕಾಗಿ 80ರ ವೃದ್ದೆ ಮೇಲೆ ಅತ್ಯಾಚಾರವೆಸಗಿ ಕೊಲೆ
ಆರೋಪಿ ಮತ್ತು ಮೃತ ಅಜ್ಜಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 04, 2025 | 11:01 AM

Share

ಕೋಲಾರ, ಜೂನ್​ 04: 80 ವರ್ಷದ ವೃದ್ಧೆ (Old Woman) ಹಳ್ಳಿಯಿಂದ ಪಟ್ಟಣಕ್ಕೆ ಬಂದು ಚರ್ಚ್​ ಹಾಗೂ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಕೊಂಡು ಒಂದೆರಡು ದಿನ ಪಟ್ಟಣದಲ್ಲೇ ಓಡಾಡಿಕೊಂಡು, ನಂತರ ಹಳ್ಳಿಗೆ ವಾಪಸ್​ ಹೋಗುವವರಿದ್ದರು. ಆದರೆ ಅಷ್ಟರಲ್ಲೇ ಬಂದ ದುರುಳನೊಬ್ಬ ಆಕೆಯ ಬಳಿ ಇದ್ದ ಹಣ, ಒಡವೆಗಳನ್ನು ದೋಚಿ, ವೃದ್ದೆಯನ್ನ ಅತ್ಯಾಚಾರ ಮಾಡಿ ಪೈಶಾಚಿಕ ಕೃತ್ಯವೆಸಗಿ ಕೊಲೆ (kill) ಮಾಡಿರುವಂತಹ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣ ಪೈಶಾಚಿಕ ಕೃತ್ಯಗೆ ಸಾಕ್ಷಿಯಾಗಿದೆ. ಸೋಮವಾರ ಸಂಜೆ ಶ್ರೀನಿವಾಸಪುರ ಪಟ್ಟಣದ ಮುಳಬಾಗಿಲು ರಸ್ತೆಯ ಸಂತೆ ಮೈದಾನದ ಬಳಿಯ ಗ್ಯಾರೇಜ್ ಬಳಿ ವೃದ್ದೆ ಯೊಬ್ಬಳ ಶವ ಪತ್ತೆಯಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಶ್ರೀನಿವಾಸಪುರ ಪೊಲೀಸರು ಪರಿಶೀಲನೆ ನಡೆಸಿದ ವೇಳೆ ವೃದ್ದೆಯನ್ನು ಯಾರ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ವಿಷಯ ಮೇಲ್ನೋಟಕ್ಕೆ ತಿಳಿದು ಬಂದಿತ್ತು.

ಇದನ್ನೂ ಓದಿ: ಚಿತ್ರದುರ್ಗ: ಮಗಳ ಅಡ್ಮಿಷನ್​ಗಾಗಿ ಊರಿಗೆ ತೆರಳುತ್ತಿದ್ದ ತಂದೆಯನ್ನ ಮಾರ್ಗ ಮಧ್ಯೆ ಕೊಂದ ಅಪರಿಚಿತರು

ಇದನ್ನೂ ಓದಿ
Image
ಮಗಳ ಅಡ್ಮಿಷನ್​ಗಾಗಿ ಊರಿಗೆ ತೆರಳುತ್ತಿದ್ದ ತಂದೆಯನ್ನ ಕೊಂದ ಅಪರಿಚಿತರು
Image
ಬೆಂಗಳೂರಿನಲ್ಲಿ ಸಂಭ್ರಮಾಚರಣೆ ವೇಳೆ ಕ್ರೌರ್ಯ, ಯುವಕನಿಗೆ ಚಾಕು ಇರಿತ
Image
ಸುಹಾಸ್ ಶೆಟ್ಟಿ ಕೊಲೆ ಕೇಸ್​: ಆರೋಪಿ ಅಬ್ದುಲ್ ರಜಾಕ್ ಬಂಧನ
Image
ಹಳೇ ವೈಷಮ್ಯ: ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ

ಇನ್ನು ಕೊಲೆಯಾದ ಮಹಿಳೆ ಯಾರೆಂದು ನೋಡಲಾಗಿ ಆಕೆ ಶ್ರೀನಿವಾಸಪುರ ತಾಲ್ಲೂಕು ಹೆಚ್​.ಜಿ.ಹೊಸೂರು ಗ್ರಾಮದ ಲಕ್ಷ್ಮೀದೇವಮ್ಮ(80) ಅನ್ನೋದು ತಿಳಿದು ಬಂದಿದೆ. ಲಕ್ಷ್ಮೀದೇವಮ್ಮ ಶನಿವಾರ ಶ್ರೀನಿವಾಸಪುರದಲ್ಲಿನ ಚರ್ಚ್​ಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದು, ಎರಡು ದಿನ ಶ್ರೀನಿವಾಸಪುರದಲ್ಲೇ ಇದ್ದು, ಸೋಮವಾರ ಸಂಜೆ ಹೆಚ್​.ಜಿ.ಹೊಸೂರು ಗ್ರಾಮಕ್ಕೆ ವಾಪಸ್ಸಾಗಲು ಬಸ್​ಗಾಗಿ ಕಾದು ಕುಳಿತಿದ್ದ ವೇಳೆ ಬಂದ ವ್ಯಕ್ತಿಯೊಬ್ಬ ಆಕೆಯನ್ನು ಹೊತ್ತೂಯ್ದು ಮೃಗದಂತೆ ವರ್ತಿಸಿ ಅತ್ಯಾಚಾರ ಮಾಡಿ ನಂತರ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಆಕೆಯ ಬ್ಯಾಗ್​ನಲ್ಲಿದ್ದ ಹದಿನೈದು ಸಾವಿರ ರೂ ಹಣ ದೋಚಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಬಂದಿದ್ದ ಪೊಲೀಸರು ಅಲ್ಲೇ ಇದ್ದ ಅಂಗಡಿಯೊಂದರ ಸಿಸಿಟಿವಿ ಪರಿಶೀಲನೆ ಮಾಡಿದ್ದು, ದುರುಳನ ಕೃತ್ಯ ಬಯಲಾಗಿತ್ತು.

ಇನ್ನು ಸ್ಥಳಕ್ಕೆ ಬಂದಿದ್ದ ಶ್ರೀನಿವಾಸಪುರ ಪೊಲೀಸರು ಅಂಗಡಿಯಲ್ಲಿದ್ದ ಸಿಸಿಟಿವಿ ವಿಡಿಯೋ ಆಧಾರದ ಮೇಲೆ ಆರೋಪಿಯ ಬಂಧನಕ್ಕೆ ಬಲೆ ಬೀಸಿದ ವೇಳೆಯಲ್ಲಿ ಆರೋಪಿ ಕೊಲೆ ಮಾಡಿ ಸ್ವಲ್ಪ ಹೊತ್ತು ಬಿಟ್ಟು ಅಲ್ಲೇನಾಗಿದೆ ಎಂದು ನೋಡಲು ವಾಪಸ್​ ಬಂದಿದ್ದ ಎನ್ನಲಾಗಿದೆ. ಈ ವೇಳೆ ಕಾರ್ಯ ಪ್ರವೃತ್ತರಾದ ಪೊಲೀಸರು ಆರೋಪಿ ಗಫರ್​ಖಾನ್ ಮೊಹಲ್ಲಾದ ಮುನ್ನಿಸಾಬ್​ ಎಂಬುವರ ಮಗ ಬಾಬ ಜಾನ್ ಅನ್ನೋದು ತಿಳಿದು ಬಂದಿದೆ. ಸದ್ಯ ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದು, ಈ ವೇಳೆ ಆರೋಪಿ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿ ಬಳಿಕ ಹದಿನೈದು ಸಾವಿರ ರೂ ಹಣವನ್ನು ದೋಚಿರುವುದಾಗಿ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಆರ್​ಸಿಬಿಗೆ ಐಪಿಎಲ್ ಟ್ರೋಫಿ: ಬೆಂಗಳೂರಿನಲ್ಲಿ ಸಂಭ್ರಮಾಚರಣೆ ವೇಳೆ ಕ್ರೌರ್ಯ, ಯುವಕನಿಗೆ ಚಾಕು ಇರಿತ

ಸದ್ಯ ಆರೋಪಿ ಮಾಡಿರುವ ಕೃತ್ಯ ಇಡೀ ಮಾನವ ಸಮಾಜವೇ ತಲೆ ತಗ್ಗಿಸುವಂತದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಲ್ಲದೇ ಕೊಲೆಯಾದ ವೃದ್ದೆ ಲಕ್ಷ್ಮೀದೇವಮ್ಮರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ.​ ಇಂಥ ಹೇಯ ಕೃತ್ಯ ಎಸಗಿರುವ ಆರೋಪಿಗೆ ಗುಂಡಿಕ್ಕಿ ಕೊಲ್ಲಬೇಕು ಅನ್ನೋದು ಲಕ್ಷ್ಮೀದೇವಮ್ಮ ಮೊಮ್ಮಕ್ಕಳು ಹಾಗೂ ಸಂಬಂಧಿಕರು ಆಗ್ರಹಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.